ಪ್ರವಾಸೋದ್ಯಮ ಮತ್ತು ಆತಿಥ್ಯ ಕೌಶಲ್ಯ ತರಬೇತಿ
ಉಡುಪಿ, ಆ.2: ಮಣಿಪಾಲದ ವೆಲ್‌ಕಮ್ ಗ್ರೂಪ್ ಗ್ರಾಜ್ಯುವೇಟ್ ಸ್ಕೂಲ್ ಆಫ್ ಹೊಟೇಲ್ ಅಡ್ಮಿನಿಸ್ಟ್ರೇಶನ್, ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ, ಮಣಿಪಾಲ ವಿವಿಯ ಅಸೋಸಿಯೇಷನ್ ಆಫ್ ಕೋಸ್ಟಲ್ ಟೂರಿಸಂನ ಸಹಯೋಗದಲ್ಲಿ ಆ.11ರಂದು ಬೆಳಗ್ಗೆ 9:30ರಿಂದ ಸಂಜೆ 5:00 ರವರೆಗೆ ಒಂದು ದಿನದ ‘ಪ್ರವಾಸೋದ್ಯಮ ಮತ್ತು ಆತಿಥ್ಯ ಕೌಶಲ್ಯ ತರಬೇತಿ’ ಕಾರ್ಯಕ್ರಮವನ್ನು ‘ಎಲ್ಲರಿಗಾಗಿ ಪ್ರವಾಸೋದ್ಯಮ’ ಎಂಬ ಸಂದೇಶದೊಂದಿಗೆ ಮಣಿಪಾಲದಲ್ಲಿ ಆಯೋಜಿಸಲಾಗಿದೆ.
ಇದರ ಅಂಗವಾಗಿ ಉಡುಪಿ ಪ್ರವಾಸೋದ್ಯಮ, ಗ್ರಾಹಕರ ನಿರ್ವಹಣೆ ಮತ್ತು ಸೇವೆಯ ಶೇಷ್ಟತೆ, ಪ್ರವಾಸಿ ಆತಿಥ್ಯದ ಶಿಷ್ಟಾಚಾರ, ಹೋಂಸ್ಟೇಗಳ ಬಗ್ಗೆ ವಿಚಾರಗೋಷ್ಟಿ ಯನ್ನು ಹಮ್ಮಿಕೊಳ್ಳಲಾಗುವುದು.
ಪ್ರವಾಸೋದ್ಯಮ ಇಲಾಖೆಯಿಂದ ಪ್ರವಾಸಿ ಟ್ಯಾಕ್ಸಿ ಖರೀದಿಗೆ ಸಹಾಯಧನ ಸೌಲ್ಯವನ್ನು ಪಡೆದಿರುವ ಫಲಾನುಭವಿಗಳು, ಜಿಲ್ಲೆಯ ಹೋಟೆಲ್ ಉದ್ಯಮ ಹಾಗೂ ಹೋಂ ಸ್ಟೇನಲ್ಲಿ ತೊಡಗಿಸಿಕೊಂಡಿರುವ ಆಸಕ್ತ 50 ಮಂದಿ ಅ್ಯರ್ಥಿ ಗಳಿಗೆ ಉಚಿತ ತರಬೇತಿ ನೀಡಲಾಗುವುದು.
ಇದಕ್ಕಾಗಿ ಆಸಕ್ತ ಅಭ್ಯರ್ಥಿಗಳು ಆ.9ರೊಳಗೆ ಸಹಾಯಕ ನಿರ್ದೇಶಕರು, ಪ್ರವಾಸೋದ್ಯಮ ಇಲಾಖೆ, ಕೊಠಡಿ ಸಂಖ್ಯೆ 303, 2ನೇ ಮಹಡಿ ರಜತಾದ್ರಿ ಮಣಿಪಾಲ ಇಲ್ಲಿ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬಹುದು ಎಂದು ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿದೇಶರ್ಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.







