Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಹೈಕೋರ್ಟ್‌ಗೆ ಮತ್ತೊಂದು ಪಿಐಎಲ್ ಸಲ್ಲಿಕೆ

ಹೈಕೋರ್ಟ್‌ಗೆ ಮತ್ತೊಂದು ಪಿಐಎಲ್ ಸಲ್ಲಿಕೆ

ರಾಮಚಂದ್ರಾಪುರ ಮಠದಿಂದ ಗಿರಿನಗರದಲ್ಲಿ ಅಕ್ರಮ ಕಟ್ಟಡ ನಿರ್ಮಾಣ

ವಾರ್ತಾಭಾರತಿವಾರ್ತಾಭಾರತಿ2 Aug 2017 9:26 PM IST
share
ಹೈಕೋರ್ಟ್‌ಗೆ ಮತ್ತೊಂದು ಪಿಐಎಲ್ ಸಲ್ಲಿಕೆ

ಬೆಂಗಳೂರು, ಜು.2: ರಾಘವೇಶ್ವರ ಭಾರತೀ ಸ್ವಾಮೀಜಿ ಅವರ ರಾಮಚಂದ್ರಾಪುರ ಮಠವು ಗಿರಿನಗರದಲ್ಲಿ ಪಾರ್ಕ್‌ಗೆ ಮೀಸಲಿಟ್ಟಿದ್ದ ನಿವೇಶನದಲ್ಲಿ ಅಕ್ರಮವಾಗಿ ಕಟ್ಟಡ ನಿರ್ಮಿಸಿದ್ದಾರೆ ಎಂಬ ಆರೋಪ ಸಂಬಂಧ ಹೈಕೋರ್ಟ್‌ಗೆ ಮತ್ತೊಂದು ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಾಗಿದೆ.

ಗಿರಿನಗರದಲ್ಲಿ ವಿಶ್ವಭಾರತಿ ಕೋ-ಆಪರೇಟಿವ್ ಹೌಸಿಂಗ್ ಸೊಸೈಟಿ ಬಡಾವಣೆಯ ನಂ.2ಎನ ನಿವೇಶನವನ್ನು ಬಿಡಿಎ ನಾಗರಿಕ ಉಪಯೋಗಕ್ಕೆ ಅನುಮೋದಿಸಿತ್ತು. ನಂತರ ಪಾರ್ಕ್ ನಿರ್ಮಾಣಕ್ಕಾಗಿ ಆ ನಿವೇಶನವನ್ನು ಬಿಬಿಎಂಪಿಗೆ ಹಸ್ತಾಂತರಿಸಿತ್ತು. ಆದರೆ, ಬಿಡಿಎ ಮತ್ತು ಬಿಬಿಎಂಪಿಯು ರಾಘವೇಶ್ವರ ಭಾರತೀ ಸ್ವಾಮೀಜಿ, ರಾಘವೇಂದ್ರ ಭಾರತಿ ಮತ್ತು ಭಾಗವತ್ ಪಾದಸೇವಾ ಸಮಿತಿ ಟ್ರಸ್ಟ್ ಮತ್ತು ಶ್ರೀ ಸಂಸ್ಥಾನ ಗೋಕರ್ಣ ರಾಮಚಂದ್ರಾಪುರ ಮಠದೊಂದಿಗೆ ಶಾಮೀಲಾಗಿ ಈ ಜಾಗದಲ್ಲಿ ಮಠದ ಕಟ್ಟಡ ನಿರ್ಮಿಸಲಾಗಿದೆ. ಹೀಗಾಗಿ, ಈ ಬಿಬಿಎಂಪಿ ನೀಡಿರುವ ನಿವೇಶನದ ಖಾತೆ ಮತ್ತು ನಕ್ಷೆ ಮಂಜೂರಾತಿಯನ್ನು ರದ್ದುಪಡಿಸಬೇಕು ಎಂದು ಕೋರಿ ನ್ಯಾಯಾಂಗ ಹೊಣೆಗಾರಿಕೆಯ ಸಮಿತಿ ಹೊಸದಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದೆ.

ಆದರೆ, ಇದೇ ಪ್ರಕರಣ ಸಂಬಂಧ 2016ರಲ್ಲಿ ಎಂ.ಪವನ್ ಪ್ರಸಾದ್ ಎಂಬುವರು ಪಿಐಎಲ್ ಸಲ್ಲಿಸಿದ್ದರು. ಮತ್ತೊಂದೆಡೆ ಇದೇ ನಿವೇಶನದಲ್ಲಿ ಕಟ್ಟಡ ನಿರ್ಮಾಣಕ್ಕೆ 2013ರಲ್ಲಿ ಮಠಕ್ಕೆ ನೀಡಿದ್ದ ನಕ್ಷೆ ಮಂಜೂರಾತಿಯನ್ನು ಬಿಎಂಪಿಯು 2016ರಲ್ಲಿ ಹಿಂಪಡೆದಿತ್ತು.
ಈ ಕ್ರಮ ಪ್ರಶ್ನಿಸಿ ರಾಮಚಂದ್ರಾಪುರ ಮಠ ತಕರಾರು ಅರ್ಜಿ ಸಲ್ಲಿಸಿದ್ದರಿಂದ ಬಿಬಿಎಂಪಿಯು ಇತ್ತೀಚೆಗೆ ನಕ್ಷೆ ಮಂಜೂರಾತಿ ಹಿಂಪಡೆದಿದ್ದ ತನ್ನ ಆದೇಶವನ್ನು ಹಿಂಪಡೆದಿತ್ತು. ಇದನ್ನು ಪರಿಗಣಿಸಿದ್ದ ಹೈಕೋರ್ಟ್ ಏಕಸದಸ್ಯ ಪೀಠವು ಮಠದ ಅರ್ಜಿ ಇತ್ಯರ್ಥಪಡಿಸಿತ್ತು. ಇದೀಗ ನ್ಯಾಯಾಂಗ ಹೊಣೆಗಾರಿಕೆಯ ಸಮಿತಿ ಮತ್ತೆ ಇದೇ ಪ್ರಕರಣ ಸಂಬಂಧ ಹೊಸದಾಗಿ ಪಿಐಎಲ್ ಅರ್ಜಿ ಸಲ್ಲಿಸಿತ್ತು.

ಒಂದೇ ಪೀಠದಿಂದ ವಿಚಾರಣೆಗೆ ಮನವಿ: ಈ ನಡುವೆ ಎಂ.ಪವನ್ ಪ್ರಸಾದ್ ಸಲ್ಲಿಸಿದ್ದ ಅರ್ಜಿ ನ್ಯಾಯಮೂರ್ತಿ ಜಯಂತ್ ಪಟೇಲ್ ಮತ್ತು ನ್ಯಾಯಮೂರ್ತಿ ಎಸ್.ಸುಜಾತ ಅವರಿದ್ದ ವಿಭಾಗೀಯ ಪೀಠದ ಮುಂದೆ ಬುಧವಾರ ವಿಚಾರಣೆಗೆ ಬಂದಿತ್ತು.
ಈ ವೇಳೆ ನ್ಯಾಯಾಂಗ ಹೊಣೆಗಾರಿಕೆಯ ಸಮಿತಿ ಪರ ಹಾಜರಿದ್ದ ಹಿರಿಯ ವಕೀಲ ಪಿ.ಎಸ್.ರಾಜಗೋಪಾಲ ಅವರು, ಪಾರ್ಕ್ ಅಭಿವೃದ್ಧಿಗೆ ಮೀಸಲಿಟ್ಟಿದ್ದ ಜಾಗದಲ್ಲಿ ರಾಮಚಂದ್ರಾಪುರ ಮಠವು ಕಟ್ಟಡ ನಿರ್ಮಾಣ ಮಾಡಿರುವ ಪ್ರಕರಣ ಸಂಬಂಧ ಮತ್ತೊಂದು ಪಿಐಎಲ್ ಸಲ್ಲಿಸಲಾಗಿದೆ. ಈ ಅರ್ಜಿಯು ಶೀಘ್ರ ವಿಚಾರಣೆಗೆ ಬರಲಿದ್ದು, ಬೇರೊಂದು ಪೀಠದ ಮುಂದೆ ರೋಸ್ಟರ್ ಪ್ರಕಾರ ವಿಚಾರಣೆಗೆ ಬರಬಹುದು. ಆದರೆ, ಒಂದೇ ಪ್ರಕರಣದ ಕುರಿತ ಎರಡು ಅರ್ಜಿಗಳನ್ನು ಪ್ರತ್ಯೇಕ ಪೀಠಗಳು ವಿಚಾರಣೆ ನಡೆಸುವುದು ಬೇಡ. ಎರಡೂ ಅರ್ಜಿಗಳನ್ನು ಒಂದೇ ಪೀಠ ವಿಚಾರಣೆ ನಡೆಸುವುದು ಸೂಕ್ತ ಎಂದು ಕೋರ್ಟ್ ಗಮನಕ್ಕೆ ತಂದರು.

ರಾಮಚಂದ್ರಾಪುರ ಮಠದ ಪರ ಹಾಜರಿದ್ದ ಹಿರಿಯ ವಕೀಲ ರಾಘವನ್ ಅವರು, ನ್ಯಾಯಾಂಗ ಪ್ರಕ್ರಿಯೆಯನ್ನು ದುರುಪಯೋಗ ಮಾಡುವುದಕ್ಕೆ ಇದೊಂದು ಮಾದರಿ ಪ್ರಕರಣ. ದುರುದ್ದೇಶಪೂರ್ವಕವಾಗಿ ಮಠದ ವಿರುದ್ಧ ಅರ್ಜಿ ಸಲ್ಲಿಸಲಾಗುತ್ತಿದ್ದು, ಮಠ ಹಾಗೂ ಸ್ವಾಮೀಜಿಗೆ ಕಿರುಕುಳ ನೀಡುವು ಪ್ರಕ್ರಿಯೆಗೆ ಅಂತ್ಯವಿಲ್ಲವಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ, ಒಂದೇ ಪ್ರಕರಣ ಸಂಬಂಧ ಎರಡು ಅರ್ಜಿಗಳು ಸಲ್ಲಿಕೆಯಾಗಿದೆ. ಹೀಗಾಗಿ, ಎರಡೂ ಅರ್ಜಿಗಳ ಸಂಬಂಧ ಪ್ರತ್ಯೇಕ ಪೀಠಗಳು ವಿಚಾರಣೆ ನಡೆಸುವುದು ಸೂಕ್ತವಲ್ಲ. ಎರಡೂ ಅರ್ಜಿಗಳನ್ನು ಒಂದೇ ಪೀಠ ವಿಚಾರಣೆ ನಡೆಸುವ ಸಂಬಂಧ ಮುಖ್ಯ ನ್ಯಾಯಮೂರ್ತಿಗಳು ಸೂಕ್ತ ಆದೇಶ ಹೊರಡಿಸಬೇಕು ಎಂದು ಕೋರಿದರು. ಜತೆಗೆ, ಅದಕ್ಕಾಗಿ ಕಡತವನ್ನು ಮುಖ್ಯ ನ್ಯಾಯಮೂರ್ತಿಗಳ ಮುಂದಿಡುವಂತೆ ಕೋರ್ಟ್‌ಗೆ ಕಚೇರಿಗೆ ಸೂಚಿಸಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X