ಕಾವ್ಯ ಅಸಹಜ ಸಾವಿನ ಬಗ್ಗೆ ಶೀಘ್ರ ತನಿಖೆಯಾಗಲಿ : ಕ್ಯಾ.ಗಣೇಶ್ ಕಾರ್ಣಿಕ್

ಮಂಗಳೂರು.ಆ.3:ಮೂಡಬಿದಿರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿನಿ ಕಾವ್ಯಳ ಅಸಹಜ ಸಾವಿನ ಬಗ್ಗೆ ಶೀಘ್ರ ತನಿಖೆ ನಡೆಸಿ ಸತ್ಯ ಸಂಗತಿಯನ್ನು ಸಾರ್ವಜನಿಕರ ಮುಂದಿಡಬೇಕು ಎಂದು ವಿಧಾನ ಪರಿಷತ್ತಿನ ವಿರೊಧ ಪಕ್ಷದ ಮುಖ್ಯ ಸಚೇತಕ ಕ್ಯಾ.ಗಣೇಶ್ ಕಾರ್ಣಿಕ್ ಸುದ್ದಿಗೋಷ್ಠಿಯಲ್ಲಿಂದು ಆಗ್ರಹಿಸಿದ್ದಾರೆ.
ಪ್ರತಿಭಾನ್ವಿತ ಕ್ರೀಡಾ ಪಟುವಾಗಿ ರೂಪುಗೊಳ್ಳುತ್ತಿದ್ದ ಕಾವ್ಯ ಅಸಹಜ ರೀತಿಯಲ್ಲಿ ಸಾವನ್ನಪ್ಪಿರುವ ಬಗ್ಗೆ ಈಗಾಗಲೇ ಮೆಡಿಕೋ ಲೀಗಲ್ ಕೇಸ್ ಆಗಿ ದಾಖಲಾಗಿದೆ.ಈ ಘಟನೆಯನ್ನು ಮುಂದಿಟ್ಟುಕೊಂಡು ಕಳೆದ ಮೂರು ದಶಕಗಳಿಂದ ನಾಡಿನ ಸಹಸ್ರಾರು ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುತ್ತಾ ಶಿಕ್ಷಣ,ಸಾಂಸ್ಕೃತಿಕ ,ಸಾಹಿತ್ಯ ಕ್ಷೇತ್ರದಲ್ಲಿ ಅದ್ವಿತೀಯ ಸಾಧನೆ ಮಾಡಿರುವ ಆಳ್ವಾಸ್ ಶಿಕ್ಷಣ ಸಂಸ್ಥೆ ಹಾಗೂ ಮೋಹನ್ ಆಳ್ವರನ್ನು ತೇಜೋವಧೆ ಮಾಡಲು ಒಂದು ಸಣ್ಣ ಗುಂಪು ಹೊರಟಿರುವುದು ಖಂಡನೀಯ.ಪ್ರಕರಣದ ತನಿಖೆಗೆ ಎಲ್ಲಾ ರೀತಿಯ ನೆರವು ನೀಡುವುದಾಗಿ ತಿಳಿಸಿರುವ ಮೋಹನ್ ಆಳ್ವರ ನಿಲುವನ್ನು ಬೆಂಬಲಿಸುವುದಾಗಿ ಗಣೇಶ್ ಕಾರ್ಣಿಕ್ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸಂಜೀವ ಮಟಂದೂರು,ಮಾಜಿ ಶಾಸಕ ಮೋನಪ್ಪ ಭಂಡಾರಿ,ರವಿಶಂಕರ್ ಮಿಜಾರ್ ,ಕಿಶೋರ್ ರೈ ಮೊದಲಾದವರು ಉಪಸ್ಥಿತರಿದ್ದರು.





