Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಸಂಘ ಪರಿವಾರದ ಮುಖಂಡರ ವಿರುದ್ಧದ...

ಸಂಘ ಪರಿವಾರದ ಮುಖಂಡರ ವಿರುದ್ಧದ ಎಫ್‌ಐಆರ್ ತಡೆಗೆ ಮತ್ತೆ ನಿರಾಕರಿಸಿದ ಹೈಕೋರ್ಟ್

ಶರತ್‌ಕುಮಾರ್ ಶವಯಾತ್ರೆ ವೇಳೆ ಕೋಮುಗಲಭೆಗೆ ಪ್ರಚೋದನೆ

ವಾರ್ತಾಭಾರತಿವಾರ್ತಾಭಾರತಿ2 Aug 2017 10:05 PM IST
share
ಸಂಘ ಪರಿವಾರದ ಮುಖಂಡರ ವಿರುದ್ಧದ ಎಫ್‌ಐಆರ್ ತಡೆಗೆ ಮತ್ತೆ ನಿರಾಕರಿಸಿದ ಹೈಕೋರ್ಟ್

ಬೆಂಗಳೂರು, ಜು.2: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ನಡೆದ ಕೋಮುಗಲಭೆಯಲ್ಲಿ ಹತ್ಯೆಯಾದ ಶರತ್‌ಕುಮಾರ್ ಮೃತದೇಹದ ಮೆರವಣಿಗೆ ವೇಳೆ ನಿಷೇಧಾಜ್ಞೆ ಉಲ್ಲಂಘಿಸಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ತಂದ ಆರೋಪದ ಸಂಬಂಧ ಸಂಘ ಪರಿವಾರದ ಸಂಘಟನೆಗಳ ಐವರು ಮುಖಂಡರ ವಿರುದ್ಧ ಪೊಲೀಸರು ದಾಖಲಿಸಿರುವ ಎಫ್‌ಐಆರ್‌ಗೆ ತಡೆ ನೀಡಲು ಹೈಕೋರ್ಟ್ ಮತ್ತೆ ನಿರಾಕರಿಸಿದೆ.

ತಮ್ಮ ವಿರುದ್ಧದ ಎಫ್‌ಐಆರ್‌ ರದ್ದು ಪಡಿಸುವಂತೆ ಕೋರಿ ಸತ್ಯಜಿತ್ ಸುರತ್ಕಲ್, ಹಿಂದೂ ಜಾಗರಣಾ ವೇದಿಕೆಯ ಹರೀಶ್ ಪೂಂಜಾ, ಹಿಂದೂ ಹಿತರಕ್ಷಣಾ ವೇದಿಕೆ ಅಧ್ಯಕ್ಷ ಮುರಳಿ ಕೃಷ್ಣ ಹಸಂತಡ್ಕ, ದಕ್ಷಿಣ ಕನ್ನಡ ಜಿಲ್ಲಾ ಭಜರಂಗದಳದ ಅಧ್ಯಕ್ಷ ಶರಣ್ ಪಂಪ್‌ವೆಲ್, ಗೋರಕ್ಷಕ್ ಪ್ರಮುಖ ಸಂಘದ ಪ್ರದೀಪ್ ಕುಮಾರ್ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಆರವಿಂದ ಕುಮಾರ್ ಅವರಿದ್ದ ಪೀಠ, ಎಫ್‌ಐಆರ್‌ಗೆ ತಡೆಯಾಜ್ಞೆ ನೀಡಲು ನಿರಾಕರಿಸಿತು. ಇದೇ ವೇಳೆ ಅರ್ಜಿಗೆ ಆಕ್ಷೇಪಣೆ ಸಲ್ಲಿಸುವಂತೆ ಸರಕಾರಿ ಅಭಿಯೋಜಕರಿಗೆ ಸೂಚಿಸಿದ ನ್ಯಾಯಪೀಠ, ಅರ್ಜಿ ವಿಚಾರಣೆಯನ್ನು ಆ.10ಕ್ಕೆ ಮುಂದೂಡಿತು.

ಇದಕ್ಕೂ ಮುನ್ನ, ಅರ್ಜಿದಾರರ ಪರ ವಕೀಲರು ವಾದಿಸಿ, ರಾಜಕೀಯ ದುರುದ್ದೇಶದಿಂದ ಅರ್ಜಿದಾರರ ವಿರುದ್ಧ ಸುಳ್ಳು ದೂರು ದಾಖಲಿಸಲಾಗಿದ್ದು, ಅವರು ಯಾವುದೇ ಕೋಮು ಗಲಭೆಗೆ ಪ್ರಚೋದನೆ ನೀಡಿಲ್ಲ. ಕೇವಲ ಒಂದು ಕೋಮಿಗೆ ಸೇರಿದ ಸಂಘಟನೆಗಳ ಮುಖಂಡರನ್ನು ಗುರಿಯಾಗಿಸಿ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಹೀಗಾಗಿ ಅರ್ಜಿದಾರರ ವಿರುದ್ಧದ ಎಫ್‌ಐಆರ್ ರದ್ದುಪಡಿಸಬೇಕು ಹಾಗೂ ಅರ್ಜಿ ಇತ್ಯರ್ಥಪಡಿಸುವರೆಗೆ ಎಫ್‌ಐಆರ್‌ಗೆ ತಡೆಯಾಜ್ಞೆ ನೀಡಬೇಕು ಎಂದು ಕೋರಿದರು.

ಇದಕ್ಕೆ ಆಕ್ಷೇಪಿಸಿದ ಸರಕಾರಿ ಅಭಿಯೋಜಕ ಸಂದೇಶ್ ಚೌಟ, ನಿಷೇಧಾಜ್ಞೆಯ ವೇಳೆ ಅರ್ಜಿದಾರರು 2 ಸಾವಿರಕ್ಕೂ ಅಧಿಕ ಜನರನ್ನು ಅಕ್ರಮವಾಗಿ ಸೇರಿಸಿ ಗಲಭೆ ಎಬ್ಬಿಸಿದ್ದಾರೆ. ಬಂಟ್ವಾಳದಲ್ಲಿ ಪ್ರಕ್ಷುಬ್ಧ ವಾತಾವರಣ ಸೃಷ್ಟಿಯಾಗಲು ಅರ್ಜಿದಾರರೇ ಮುಖ್ಯ ಕಾರಣರಾಗಿದ್ದಾರೆ. ಘಟನೆಯ ಸಂದರ್ಭದಲ್ಲಿ ಚಿತ್ರೀಕರಿಸಿದ್ದ ವಿಡಿಯೋಗಳಲ್ಲಿ ಆರೋಪಿಗಳನ್ನು ಗುರುತಿಸಿ ಅವರ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ. ಪ್ರಕರಣದ ಸಂಬಂಧ ಅನ್ಯ ಕೋಮಿಗೆ ಸೇರಿರುವ ವ್ಯಕ್ತಿಗಳನ್ನೂ ಬಂಧಿಸಲಾಗಿದೆ. ಇದೊಂದು ಗಂಭೀರ ಪ್ರಕರಣವಾಗಿದ್ದು, ಈ ಹಂತದಲ್ಲಿ ಎಫ್‌ಐಆರ್‌ಗೆ ತಡೆಯಾಜ್ಞೆ ನೀಡಿದರೆ ತನಿಖೆಗೆ ಅಡ್ಡಿಯಾಗುವುದಲ್ಲದೆ, ಬಂಟ್ವಾಳದಲ್ಲಿ ಕಾನೂನು ಸುವ್ಯವಸ್ಥೆ ಮತ್ತಷ್ಟು ಹದಗೆಡುತ್ತದೆ. ಹೀಗಾಗಿ ಅರ್ಜಿಯನ್ನು ವಜಾಗೊಳಿಸಬೇಕೆಂದು ಪೀಠಕ್ಕೆ ಮನವಿ ಮಾಡಿದರು.

ವಕೀಲರ ವಾದ ಪ್ರತಿವಾದ ಆಲಿಸಿದ ನ್ಯಾಯಪೀಠವು ಅರ್ಜಿದಾರರ ವಿರುದ್ಧದ ಎಫ್‌ಐಆರ್‌ಗೆ ತಡೆ ನೀಡಲು ನಿರಾಕರಿಸಿತು. ಜೊತೆಗೆ ಅರ್ಜಿಯ ಸಂಬಂಧ ಮೊದಲು ಸರಕಾರ ಆಕ್ಷೇಪಣೆ ಸಲ್ಲಿಸಲಿ, ತದನಂತರ ಮಧ್ಯಂತರ ಮನವಿಯ ಕುರಿತು ವಿಚಾರಣೆ ನಡೆಸೋಣವೆಂದು ತಿಳಿಸಿ, ವಿಚಾರಣೆ ಮುಂದೂಡಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X