ರಾಷ್ಟ್ರಧ್ವಜ ಮಾಹಿತಿ ಕಾರ್ಯಗಾರ

ಮಂಗಳೂರು, ಆ.3: ಜಿಲ್ಲಾ ಗೃಹರಕ್ಷಕ ದಳ ಕಚೇರಿಯಲ್ಲಿ ರಾಷ್ಟ್ರಧ್ವಜ ಹಾಗೂ ರಾಷ್ಟ್ರಗೀತೆಯ ಕುರಿತು ಮಾಹಿತಿ ಕಾರ್ಯಾಗಾರ ಗುರುವಾರ ನಡೆಯಿತು.
ಭಾರತ ಸೇವಾದಳದ ಸದಸ್ಯರಾದ ಅಲ್ಫೋನ್ಸ್ ಪ್ರಾಂಕೊ ಮತ್ತು ಮಹೇಶ್ ಎನ್. ಪತ್ತಾರ್ ಮಾಹಿತಿ ನೀಡಿದರು.
ಕೇಸರಿ ಬಣ್ಣ ಧೈರ್ಯ, ಪರಿತ್ಯಾಗ ಮತ್ತು ದೇಶದ ಒಳಿತಿಗಾಗಿ ನಡೆವ ಬಲಿದಾನಗಳ ಸಂಕೇತವಾಗಿದೆ. ಬಿಳಿ ಬಣ್ಣ ಪವಿತ್ರ ಮನಸ್ಸಿನವರೊಂದಿಗೆ ನಿತ್ಯವೂ ಸತ್ಯ ಶಾಂತಿಗಳೊಂದಿಗೆ ನಮ್ಮನ್ನು ಬೆಳಕಿನೆಡೆಗೆ ಕೊಂಡೊಯ್ಯುವ ಸತ್ಯ ಮಾರ್ಗದ ಸಂಕೇತವಾಗಿದೆ. ಹಸಿರು ಬಣ್ಣ ಪ್ರಕೃತಿಯೊಡನೆ ಮನುಷ್ಯನಿಗಿರಬೇಕಾದ ಅವಿನಾಭಾವ ಸಂಬಂಧವನ್ನು ತಿಳಿಸುತ್ತದೆ. ಹಸಿರು ಜೀವರಾಶಿಗಳನ್ನು ಅವಲಂಬಿಸಿರುವ ಮನುಷ್ಯ ಮತ್ತು ಭೂಮಿಯ ಅನೂಹ್ಯ ಬಾಂಧವ್ಯಗಳ ಸಂಕೇತವಾಗಿದೆ. ರಾಷ್ಟ್ರಧ್ವಜವನ್ನು ಹಾರಿಸಿದ ನಂತರ ರಾಷ್ಟ್ರಗೀತೆ ಹಾಡಲೇಬೇಕು ಎಂದು ಅವರು ಹೇಳಿದರು.
ಗೃಹರಕ್ಷಕ ದಳದ ಸಮಾದೇಷ್ಟ ಡಾ. ಮುರಲಿ ಮೋಹನ್ ಚೂಂತಾರು ಅಧ್ಯಕ್ಷತೆ ವಹಿಸಿದ್ದರು.
Next Story





