ಯುವಕ ಸಾವು
ಬೆಂಗಳೂರು, ಆ.3: ಲಾರಿಯೊಂದು ಬೈಕ್‌ಗೆ ಢಿಕ್ಕಿ ಹೊಡೆದ ಪರಿಣಾಮ ಯುವಕನೊಬ್ಬ ಸಾವನ್ನಪ್ಪಿರುವ ದುರ್ಘಟನೆ ಇಲ್ಲಿನ ದೇವನಹಳ್ಳಿ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಶಿಢ್ಲಘಟ್ಟ ತಾಲೂಕಿನ ಮೇಲೂರಿನ ಗೋವಿಂದರಾಜು(30) ಮೃತಪಟ್ಟಿರುವ ಯುವಕ ಎಂದು ಪೊಲೀಸರು ತಿಳಿಸಿದ್ದಾರೆ. ಬುಧವಾರ ಮಧ್ಯರಾತ್ರಿ ದೇವನಹಳ್ಳಿಯ ಹಳೇ ಆರ್‌ಟಿಒ ಕಚೇರಿ ಬಳಿ ಏಕಮುಖ ರಸ್ತೆಯ ವಿರುದ್ಧ ದಿಕ್ಕಿನಲ್ಲಿ ಹೋಗುತ್ತಿದ್ದ ವೇಳೆ ಲಾರಿಗೆ ಢಿಕ್ಕಿ ಹೊಡೆದ ಪರಿಣಾಮ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡು ಮೃತಪಟ್ಟಿರುವುದಾಗಿ ತಿಳಿದುಬಂದಿದೆ.
ಪ್ರಕರಣ ಸಂಬಂಧ ದೇವನಹಳ್ಳಿ ಸಂಚಾರ ಠಾಣಾ ಪೊಲೀಸರು ಮೊಕದ್ದಮೆ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.
Next Story





