Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೇಂದ್ರ ಸರಕಾರದ ವಿರುದ್ಧ ಕಾಂಗ್ರೆಸ್...

ಕೇಂದ್ರ ಸರಕಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ3 Aug 2017 7:42 PM IST
share
ಕೇಂದ್ರ ಸರಕಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ಚಾಮರಾಜನಗರ, ಆ. 3: ರಾಜ್ಯ ಸರ್ಕಾರದ ಇಂಧನ ಸಚಿವ ಹಾಗು ಕಾಂಗ್ರೆಸ್ ಪಕ್ಷದ ಪ್ರಭಾವಿ ಮುಖಂಡ ಡಿ.ಕೆ. ಶಿವಕುಮಾರ್ ನಿವಾಸದ ಮೇಲೆ ಅದಾಯ ತೆರಿಗೆ ಅಧಿಕಾರಿಗಳು ದಾಳಿ ಮಾಡಿರುವುದು ರಾಜಕೀಯ ಪ್ರೇರಿತ ಎಂದು ಆರೋಪಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ನಗರದಲ್ಲಿ ಗುರುವಾರ ಪ್ರತಿಟನೆ ನಡೆಸಲಾಯಿತು.

ನಗರದ ಚಾಮರಾಜೇಶ್ವರ ದೇವಸ್ಥಾನದ ಮುಂಭಾಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪಿ. ಮರಿಸ್ವಾಮಿ ನೇತೃತ್ವದಲ್ಲಿ ಸಮಾವೇಶಗೊಂಡ ಕಾಂಗ್ರೆಸ್ ಪಕ್ಷ ಮುಖಂಡರು, ಕಾರ್ಯಕರ್ತರು ಬಿಜೆಪಿ ಹಾಗೂ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ವಿರುದ್ದ ಘೋಷಣೆಗಳನ್ನು ಕೂಗುತ್ತಾ ಮೆರವಣಿಗೆ ಹೊರಟರು. ನಗರದ ಭುವನೇಶ್ವರಿ ವೃತ್ತದಲ್ಲಿ ಕೆಲ ಕಾಲ ಧರಣಿ ನಡೆಸಿ, ನರೇಂದ್ರ ಮೋದಿ ಭಾವಚಿತ್ರವನ್ನು ಸುಟ್ಟು ಆಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಪಿ. ಮರಿಸ್ವಾಮಿ, ಕೇಂದ್ರ ಸರ್ಕಾರ ಆದಾಯ ತೆರಿಗೆ ಅಧಿಕಾರಿಗಳ ಮುಖಾಂತರ ಇಂಧನ ಸಚಿವ ಡಿ.ಕೆ. ಶಿವಕುಮಾರ್ ಅವರ ಮನೆ, ಕಚೇರಿ ಹಾಗೂ ನಿವಾಸಿಗಳ ಮೇಲೆ ಏಕಕಾಲದಲ್ಲಿ ದಾಳಿ ಮಾಡಿಸುವ ಮೂಲಕ ಸೇಡಿನ ರಾಜಕೀಯ ಮಾಡುತ್ತಿದೆ ಎಂದು ದೂರಿದರು.

ಇದೊಂದು ರಾಜಕೀಯ ಪ್ರೇರಿತ ದಾಳಿಯಾಗಿದ್ದು, ಕೇಂದ್ರದ ಸ್ವಾಧೀನದಲ್ಲಿರುವ ಅದಾಯ ತೆರಿಗೆ, ಸಿಬಿಐ ಗಳನ್ನು ಪ್ರಧಾನಿ ನರೇಂದ್ರ ಮೋದಿ ತಮ್ಮ ವಿರೋಧಿಗಳನ್ನು ಮಣಿಸುವ ತಂತ್ರವಾಗಿ ಬಳಕೆ ಮಾಡುತ್ತಿದ್ದಾರೆ. ರಾಜ್ಯಸಭೆ ಚುನಾವಣೆಯಲ್ಲಿ ಗೆಲ್ಲಬೇಕು ಎಂಬ ಹಠಕ್ಕೆ ಬಿದ್ದಿರುವ ಮೋದಿ, ಗುಜರಾತಿನಲ್ಲಿ ಕಾಂಗ್ರೆಸ್ ಶಾಸಕರನ್ನು ಖರೀದಿ ಮಾಡಲು ಮುಂದಾಗಿದ್ದರು. ಇದನ್ನು ಅರಿತು ರಾಷ್ಟ್ರೀಯ ನಾಯಕರಾದ ಸೋನಿಯಾ ಗಾಂಧಿ ಅವರ ಸೂಚನೆಯಂತೆ ಗುಜರಾತ್ ಶಾಸಕರು ಕರ್ನಾಟಕ ರಾಜ್ಯ ಪ್ರವಾಸಕ್ಕೆ ಬಂದಿದ್ದರು. ಈ ಎಲ್ಲಾ ಶಾಸಕರ ಉಸ್ತುವಾರಿಯನ್ನು ಇಂಧನ ಸಚಿವ ಡಿ.ಕೆ. ಶಿವಕುಮಾರ್ ಅವರಿಗೆ ವಹಿಸಲಾಗಿತ್ತು. ಇದನ್ನು ಸಹಿಸದೇ ಏಕಾಏಕಿ ದಾಳಿ ಮಾಡಲಾಗಿದೆ ಎಂದು ದೂರಿದರು.

ಪ್ರತಿಭಟನೆಯಲ್ಲಿ ಯುವ ಕಾಂಗ್ರೆಸ್ ಅಧ್ಯಕ್ಷ ಚೇತನ್ ದೊರೈರಾಜ್, ವೃತ್ತಿಪರ ಜಿಲ್ಲಾ ಘಟಕದ ಅಧ್ಯಕ್ಷ ಅರುಣ್‌ಕುಮಾರ್, ಜಿ.ಪಂ. ಉಪಾಧ್ಯಕ್ಷ ಬಸವರಾಜು, ಸದಸ್ಯರಾದ ಕೆರೆಹಳ್ಳಿ ನವೀನ್, ಸದಾಶಿವಮೂರ್ತಿ, ಎಪಿಎಂಸಿ ಅಧ್ಯಕ್ಷ ಬಿ.ಕೆ.ರವಿಕುಮಾರ್, ಚಾಮುಲ್ ಅಧ್ಯಕ್ಷ ಸಿ.ಎಸ್. ಗುರುಮಲ್ಲಪ್ಪ, ಚುಡಾ ಅಧ್ಯಕ್ಷ ಸುಹೇಲ್ ಆಲಿ ಖಾನ್, ತಾ.ಪಂ. ಅಧ್ಯಕ್ಷ ಹೊಂಗನೂರು ಚಂದ್ರು, ಮುಖಂಡರಾದ ಪಿ.ರಾಜಣ್ಣ, ಸುರೇಶ್ ನಾಯಕ, ಸೈಯದ್ ರಫಿ, ಪುಟ್ಟಬುದ್ದಿ, ಕೆ. ನಾಗರಾಜು, ರವಿಗೌಡ, ಮಲ್ಲಾಜಮ್ಮ, ತೋಟೇಶ್, ಶ್ರೀಕಾಂತ್, ಪುಟ್ಟಸ್ವಾಮಿ, ಪಿ.ಶೇಖರ್, ಬೆಳ್ಳಿಮಾದಪ್ಪ, ಶಮಿತ್, ಬಸಪ್ಪಪಾಳ್ಯ ನಟರಾಜು ಮೊದಲಾಧವರು ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X