Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬೆಳೆಹಾನಿ ಸಮೀಕ್ಷೆ ತ್ವರಿತ...

ಬೆಳೆಹಾನಿ ಸಮೀಕ್ಷೆ ತ್ವರಿತ ಪೂರ್ಣಗೊಳಿಸಿ: ಜಿಲ್ಲಾಧಿಕಾರಿ ಸೂಚನೆ

ವಾರ್ತಾಭಾರತಿವಾರ್ತಾಭಾರತಿ3 Aug 2017 7:53 PM IST
share
ಬೆಳೆಹಾನಿ ಸಮೀಕ್ಷೆ ತ್ವರಿತ ಪೂರ್ಣಗೊಳಿಸಿ: ಜಿಲ್ಲಾಧಿಕಾರಿ ಸೂಚನೆ

ಚಾಮರಾಜನಗರ, ಆ. 4: ಜಿಲ್ಲೆಯಲ್ಲಿ ಮಳೆ ಅಭಾವದಿಂದ ಹಾನಿಯಾಗಿರುವ ಬೆಳೆ ಸಮೀಕ್ಷೆ ಕಾರ್ಯವನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿ ಡಾ. ಕೆ.ಹರೀಶ್‌ಕುಮಾರ್ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ನಗರದ ಜಿಲ್ಲಾಡಳಿತ ಭವದಲ್ಲಿರುವ ಕೆ.ಡಿ.ಪಿ. ಸಭಾಂಗಣದಲ್ಲಿ ಇಂದು ಕೃಷಿ, ಕಂದಾಯ ಹಾಗೂ ತೋಟಗಾರಿಕೆ ಇಲಾಖೆ ಅಧಿಕಾರಿ, ಸಿಬ್ಬಂದಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

 ಜಿಲ್ಲೆಯಲ್ಲಿ ಆರಂಭದಲ್ಲಿ ಮಳೆ ಪ್ರಮಾಣ ಉತ್ತಮವಾಗಿತ್ತು. ಅದರೆ ಜೂನ್ ಮತ್ತು ಜುಲೈ ತಿಂಗಳಲ್ಲಿ ಮಳೆ ಪರಿಸ್ಥಿತಿ ನಿರಾಶದಾಯಕವಾಗಿದೆ. ಇದರಿಂದ ಅಭಾವ ಪರಿಸ್ಥಿತಿ ಛಾಯೆ ಕಾಣತೊಡಗಿದೆ. ಈ ಹಿನ್ನಲೆಯಲ್ಲಿ ಈ ಹಿಂದೆಯೆ ಬೆಳೆಹಾನಿ ಬಗ್ಗೆ ಗಮನಹರಿಸುವಂತೆ ಸೂಚಿಸಲಾಗಿತ್ತು. ಪರಿಸ್ಥಿತಿ ಮತ್ತಷ್ಟು ಪೂರಕವಾಗದೆ ಇರುವ ಕಾರಣ ಬೆಳೆ ನಷ್ಟವನ್ನು ತುರ್ತಾಗಿ ಪೂರ್ಣ ಗೊಳಿಸಬೇಕೆಂದು ಜಿಲ್ಲಾಧಿಕಾರಿ ತಿಳಿಸಿದರು. ಬೆಳೆಹಾನಿ ವೀಕ್ಷಣೆಗೆ ಕಂದಾಯ, ಕೃಷಿ ಹಾಗೂ ತೋಟಗಾರಿಕೆ ಇಲಾಖೆ ಅಧಿಕಾರಿ, ಸಿಬ್ಬಂದಿ ಒಟ್ಟಾಗಿ ಜಮೀನುಗಳಿಗೆ ತೆರಳಿ ಸಮೀಕ್ಷೆ ಕಾರ್ಯ ನಡೆಸಬೇಕು. ಮಳೆ ಕೊರತೆಯಿಂದ ಉಂಟಾಗಿರುವ ಬೆಳೆ ನಷ್ಟ ಬಗ್ಗೆ ವಾಸ್ತವಿಕ ಮತ್ತು ವಿಶ್ವಾಸರ್ಹ ವರದಿ ನೀಡಬೇಕು. ಜಿಲ್ಲೆಯ ಎಲ್ಲ ಭಾಗಗಳಿಗೆ ವ್ಯಾಪಕವಾಗಿ ಭೇಟಿ ನೀಡಿ ಸಮೀಕ್ಷೆ ಮಾಡಬೇಕು ಎಂದರು.

ಬೆಳೆ ಸಮೀಕ್ಷೆ ಕೈಗೊಳ್ಳುವ ಸಂದರ್ಭದಲ್ಲಿ ಕೃಷಿ ಇಲಾಖೆಯ ಮಾರ್ಗಸೂಚಿಯನ್ನು ಕಡ್ಡಾಯವಾಗಿ ಪಾಲನೆ ಮಾಡಲೇಬೇಕು. ಅಭಾವ ಘೋಷಣೆಗೆ ಸಂಬಂಧಿಸಿದಂತೆ ಮಾನದಂಡಗಳು ಇತ್ತೀಚೆಗೆ ಬದಲಾವಣೆಯಾಗಿದೆ. ಹೀಗಾಗಿ ಬೆಳೆಹಾನಿ ಸಮೀಕ್ಷೆ ಕಾರ್ಯವನ್ನು ಅತ್ಯಂತ ಮುತುವರ್ಜಿಯಿಂದ ಅಧಿಕಾರಿಗಳು ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಬೆಳೆ ವಿಮೆ ಪರಿಹಾರ ಸಂಬಂಧ ಬೆಳೆ ಕಟಾವು ಪ್ರಯೋಗ ಕಾರ್ಯವು ಸಹ ವೇಗಗತಿಯಲ್ಲಿ ನಡೆಯಬೇಕು. ಕಾಲಮಿತಿಯೊಳಗೆ ಕೆಲಸ ಪೂರ್ಣವಾಗಬೇಕು. ಇದರಿಂದ ಬೆಳೆಗಾರರಿಗೆ ಸಕಾಲಕ್ಕೆ ಪರಿಹಾರ ಲಭಿಸಲು ಸಾಧ್ಯವಾಗಲಿದೆ ಎಂದು ಜಿಲ್ಲಾಧಿಕಾರಿ ಹರೀಶ್‌ಕುಮಾರ್ ತಿಳಿಸಿದರು.

ಜಂಟಿ ಕೃಷಿ ನಿರ್ದೇಶಕರಾದ ತಿರುಮಲೇಶ್ ಮಾತನಾಡಿ ಬೆಳೆಹಾನಿ ಸಮೀಕ್ಷೆಯು ಅತ್ಯಂತ ನಿಖರವಾಗಿ ಕೈಗೊಳ್ಳಬೇಕಿದೆ. ಇಲಾಖೆ ಸೂಚನೆ, ಮಾರ್ಗಸೂಚಿ ಅನುಸಾರವಾಗಿಯೆ ಪ್ರತಿಯೊಂದು ಪ್ರಕ್ರಿಯೆ ನಡೆಯಬೇಕಿದೆ. ಅತ್ಯಂತ ಆದ್ಯತೆ ಮೇರೆಗೆ ಬೆಳೆಹಾನಿ ಕೆಲಸವನ್ನು ಸಮನ್ವಯದಿಂದ ನಡೆಸಿ ನಷ್ಟವನ್ನು ಗುರುತಿಸಬೇಕಿದೆ. ಈ ನಿಟ್ಟಿನಲ್ಲಿ ಕೃಷಿ ಇಲಾಖೆ ಅಧಿಕಾರಿಗಳು ಇತರೆ ಇಲಾಖೆ ಅಧಿಕಾರಿಗಳಿಗೆ ಅಗತ್ಯವಿರುವ ಸಹಕಾರ ಮಾರ್ಗದರ್ಶನ ಮಾಡಲಿದ್ದಾರೆ ಎಂದರು.

ಉಪವಿಭಾಗಧಿಕಾರಿ ಎ.ಜೆ. ರೂಪ, ಜಿಲ್ಲೆಯ ತಹಸೀಲ್ದಾರರು ಸಭೆಯಲ್ಲಿ ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X