ಕಾಂಗ್ರೆಸ್ ಕಾರ್ಯಕರ್ತರಿಂದ ಬೃಹತ್ ಪ್ರತಿಭಟನೆ
.jpg)
ಹಾಸನ, ಆ.3; ಇಂಧನ ಖಾತೆ ಸಚಿವ ಡಿ.ಕೆ. ಶಿವಕುಮಾರ್ ಆಸ್ತಿ ಮೇಲೆ ಐಟಿ ದಾಳಿ ನಡೆಸಿದನ್ನು ಖಂಡಿಸಿ ನಗರದಲ್ಲಿ ಕಾಂಗ್ರೆಸ್ ಪಕ್ಷದಿಂದ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಲಾಯಿತು.
ನಗರದ ಎನ್.ಆರ್. ವೃತ್ತದಲ್ಲಿ ಟೈರಿಗೆ ಬೆಂಕಿ ಹಚ್ಚಿದ ಕಾಂಗ್ರೆಸ್ ಕಾರ್ಯಕರ್ತರು ದೇಶದ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಧ್ಯಕ್ಷ ಅಮಿತ್ ಶಾ ವಿರುದ್ಧ ಕಿಡಿಕಾರಿದರು. ಡಿ.ಕೆ.ಶಿ ಮನೆ ಮೇಲೆ ಐಟಿ ದಾಳಿ ನಡೆಸಿರುವುದು ರಾಷ್ಟ್ರೀಯ ಇತಿಹಾಸದಲ್ಲೆ ಇಂತಹ ಘಟನೆ ನಡೆದಿಲ್ಲ. ಯಾವ ಸಂದರ್ಭದಲ್ಲಿ ಘಟನೆ ನಡೆದಿದೆ ಎಂಬುದು ಜನಸಾಮಾನ್ಯರಿಗೆ ತಿಳಿದಿದೆ. ಗುಜರಾತಿನ ಶಾಸಕರು ಇಲ್ಲಿಗೆ ಬಂದಾಗ ದಾಳಿ ನಡೆಸಿದ್ದಾರೆ ಎಂದರೇ ಇದು ಉದ್ದೇಶಪೂರ್ವಕವಾಗಿ ಮಾಡಿದ್ದಾರೆ ಎಂದು ದೂರಿದರು.
ಪ್ರಜಾಪ್ರಭುತ್ವವನ್ನು ಹತ್ತಿಕ್ಕುವ ಕೆಲಸವನ್ನು ಮೋದಿ ಮಾಡಿದ್ದಾರೆ. ಇಂತಹ ಭ್ರಷ್ಟ ಅಧಿಕಾರ ಮಾಡುವುದರಿಂದ ಕಾಂಗ್ರೆಸ್ ಎಂದು ಜಗ್ಗುವುದಿಲ್ಲ. ಬಿಜೆಪಿ ಮಾಡಿರುವ ದೌರ್ಜನ್ಯವು ಐಟಿ ದಾಳಿ ಸಾಕ್ಷಿಯಾಗಿದೆ ಎಂದು ಕಿಡಿಕಾರಿದರು. ಮುಂದಿನ ಚುನಾವಣೆಯ ಹಿನ್ನಲೆಯಲ್ಲಿ ಇಂತಹ ಕ್ರೌರ್ಯಕ್ಕೆ ಕೈಹಾಕಿದ್ದಾರೆ. ಇದನ್ನು ಜನತೆ ಸಹಿಸುವುದಿಲ್ಲ. ಇದಕ್ಕೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ವಿರೋಧೀಸಿ ಎನ್.ಆರ್. ವೃತ್ತದಲ್ಲಿ ಟೈರಿಗೆ ಬೆಂಕಿ ಹಚ್ಚಿ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರು.
ಪ್ರತಿಭಟನೆಯಲ್ಲಿ ಕಾಂಗ್ರೆಸ್ ಮುಖಂಡ ಹೆಚ್.ಕೆ. ಮಹೇಶ್, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಶ್ವೇತ, ದೊಡ್ಡಕೊಂಡಗುಳದ ಶಂಕರೇಗೌಡ ಇತರರು ಇದ್ದರು.







