ಗಣೇಶನ ಚಿತ್ರ ಬಿಡಿಸುವ ಸ್ಪರ್ಧೆ
ಪರ್ಕಳ, ಆ.3: ಪರ್ಕಳ ಸಾರ್ವಜನಿಕ ಶ್ರೀಗಣೇಶೋತ್ಸವದ ಸುವರ್ಣ ಸಂಭ್ರಮದ ಅಂಗವಾಗಿ ಸುವರ್ಣ ಸಮಿತಿ ಹಾಗೂ ಮಂಗಳ ಕಲಾ ಸಾಹಿತ್ಯ ವೇದಿಕೆ ಪರ್ಕಳ ಇವರ ಸಹಭಾಗಿತ್ವದಲ್ಲಿ ಆ.6ರಂದು ರವಿವಾರ ಬೆಳಗ್ಗೆ 10:00 ರಿಂದ ಪ್ರಾಥಮಿಕ ಮತ್ತು ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ತಾಲೂಕು ಮಟ್ಟದ ಗಣೇಶನ ಚಿತ್ರ ಬಿಡಿಸುವ ಸ್ಪರ್ಧೆಯನ್ನು ಆಯೋಜಿಸಲಾಗಿದೆ.
ಕಾರ್ಯಕ್ರಮವನ್ನು ಮಣಿಪಾಲ ವೃತ್ತ ನಿರೀಕ್ಷಕ ಸುದರ್ಶನ್ ಎಂ. ಉದ್ಘಾಟಿ ಸುವರು. ವಿಜಯ ಬ್ಯಾಂಕ್‌ನ ನಿವೃತ್ತ ಪ್ರಬಂಧಕ ಭುವನಪ್ರಸಾದ್ ಹೆಗ್ಡೆ ಅಧ್ಯಕ್ಷತೆ ವಹಿಸಲಿದ್ದಾರೆ. ಮೂರು ವಿಭಾಗಗಳಲ್ಲಿ ಸ್ಪರ್ಧೆ ನಡೆಯಲಿದ್ದು ಪ್ರಥಮ ದ್ವಿತೀಯ ಹಾಗು ತೃತೀಯ ಬಹುಮಾನಗಳನ್ನು ನೀಡಲಾಗುವುದು. ಸ್ಪರ್ಧೆ ಯಲ್ಲಿ ಭಾಗವಹಿಸಿದ ಎಲ್ಲ ಮಕ್ಕಳಿಗೂ ಪ್ರಮಾಣ ಪತ್ರ ನೀಡಲಾಗುವುದು.
ಆಸಕ್ತರು ಸ್ಥಳದಲ್ಲೇ ಹೆಸರು ನೋಂದಾಯಿಸಿಕೊಳ್ಳಬಹುದು. ಡ್ರಾಯಿಂಗ್ ಹಾಳೆಯನ್ನು ಸ್ಥಳದಲ್ಲಿ ಒದಗಿಸಲಾಗುವುದು. ಇತರ ಪರಿಕರಗಳನ್ನು ಸ್ಪರ್ಧಿಗಳೇ ತರಬೇಕು ಎಂದು ಸುವರ್ಣ ಸಮಿತಿ ಅಧ್ಯಕ್ಷ ಮಹೇಶ್ ಠಾಕೂರ್, ಪ್ರಧಾನ ಕಾರ್ಯದರ್ಶಿ ದಿನಕರ್ ಶೆಟ್ಟಿ ಹೆರ್ಗ ಹಾಗೂ ಆತ್ರಾಡಿ ದಿನೇಶ್ ಹೆಗ್ಡೆ ಅವರು ಜಂಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಆಸಕ್ತರು ಸ್ಥಳದಲ್ಲೇ ಹೆಸರು ನೋಂದಾಯಿಸಿಕೊಳ್ಳಬಹುದು. ಡ್ರಾಯಿಂಗ್ ಹಾಳೆಯನ್ನು ಸ್ಥಳದಲ್ಲಿ ಒದಗಿಸಲಾಗುವುದು. ಇತರ ಪರಿಕರಗಳನ್ನು ಸ್ಪರ್ಧಿಗಳೇ ತರಬೇಕು ಎಂದು ಸುವರ್ಣ ಸಮಿತಿ ಅಧ್ಯಕ್ಷ ಮಹೇಶ್ ಠಾಕೂರ್,ಪ್ರಾನ ಕಾರ್ಯದರ್ಶಿ ದಿನಕರ್ ಶೆಟ್ಟಿ ಹೆರ್ಗ ಹಾಗೂ ಆತ್ರಾಡಿ ದಿನೇಶ್ ಹೆಗ್ಡೆ ಅವರು ಜಂಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ:9448623856ನ್ನು ಸಂಪರ್ಕಿಸು ವಂತೆ ಸಂಘಟಕರ ಪ್ರಕಟಣೆ ತಿಳಿಸಿದೆ.







