Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಕರೀಂಲಾಲ ತೆಲಗಿ ಪ್ರಕರಣ: ಇಬ್ಬರು ಜೈಲು...

ಕರೀಂಲಾಲ ತೆಲಗಿ ಪ್ರಕರಣ: ಇಬ್ಬರು ಜೈಲು ಅಧಿಕಾರಿಗಳಿಗೆ ತಲಾ 5 ವರ್ಷ ಜೈಲು ಶಿಕ್ಷೆ ವಿಧಿಸಿದ ಹೈಕೋರ್ಟ್

ವಾರ್ತಾಭಾರತಿವಾರ್ತಾಭಾರತಿ3 Aug 2017 9:54 PM IST
share
ಕರೀಂಲಾಲ ತೆಲಗಿ ಪ್ರಕರಣ: ಇಬ್ಬರು ಜೈಲು ಅಧಿಕಾರಿಗಳಿಗೆ ತಲಾ 5 ವರ್ಷ ಜೈಲು ಶಿಕ್ಷೆ ವಿಧಿಸಿದ ಹೈಕೋರ್ಟ್

ಬೆಂಗಳೂರು, ಆ.3: ನಕಲಿ ಛಾಪಾ ಕಾಗದ ಹಗರಣದ ಪ್ರಮುಖ ಅಪರಾಧಿ ಅಬ್ದುಲ್ ಕರೀಂ ತೆಲಗಿಗೆ ಜೈಲಿನಲ್ಲಿ ಐಷಾರಾಮಿ ಸೌಲಭ್ಯ ಒದಗಿಸಿದ ಆರೋಪದಲ್ಲಿ ಮೈಸೂರಿನ ಜೈಲು ಸೂಪರಿಂಟೆಂಡೆಂಟ್ ಪಿ.ಎನ್.ಜಯಸಿಂಹ ಹಾಗೂ ಪರಪ್ಪನ ಅಗ್ರಹಾರ ಕಾರಾಗೃಹದ ಸಹಾಯಕ ಸೂಪರಿಂಟೆಂಡೆಂಟ್ ಆಗಿದ್ದ ಜೈಲು ಅಧಿಕಾರಿ ನಂಜಪ್ಪ ಅವರಿಗೆ ಹೈಕೋರ್ಟ್ ತಲಾ ಐದು ವರ್ಷ ಜೈಲು ಶಿಕ್ಷೆ ಹಾಗೂ ಐವತ್ತು ಸಾವಿರ ರೂ.ದಂಡ ವಿಧಿಸಿದೆ.

  ಈ ಕುರಿತಂತೆ ಸಿಬಿಐ ಸಲ್ಲಿಸಿರುವ ಮೇಲ್ಮನವಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ರವಿ ಮಳೀಮಠ ಹಾಗೂ ನ್ಯಾಯಮೂರ್ತಿ ಜಾನ್ ಮೈಕೆಲ್ ಕುನ್ಹ ಅವರಿದ್ದ ವಿಭಾಗೀಯ ನ್ಯಾಯಪೀಠ ಈ ಆದೇಶ ನೀಡಿತು.

  ಆರೋಪಿಗಳಾದ ಪಿ.ಎನ್.ಜಯಸಿಂಹ ಹಾಗೂ ನಂಜಪ್ಪ ಅವರು ಈಗಾಗಲೇ 3 ವರ್ಷ 10 ತಿಂಗಳು ಕಾರಾಗೃಹ ವಾಸವನ್ನು ಅನುಭವಿಸಿದ್ದಾರೆ. ಹೀಗಾಗಿ, ಉಳಿದ 14 ತಿಂಗಳುಗಳ ಕಾಲ ಕಾರಾಗೃಹ ವಾಸವನ್ನು ಅನುಭವಿಸಲು ಹೈಕೋರ್ಟ್ ಆದೇಶಿಸಿದೆ.

 166 ಕೋಟಿ ಹಗರಣ: 166 ಕೋಟಿ ರೂ.ಮೊತ್ತದ ನಕಲಿ ಛಾಪಾ ಕಾಗದ ಹಗರಣದಲ್ಲಿ ತೆಲಗಿ ವಿರುದ್ಧ ಮಡಿವಾಳ ಪೊಲೀಸ್ ಠಾಣೆಯಲ್ಲಿ 2001-2002ರಲ್ಲಿ ಪ್ರಕರಣ ದಾಖಲಾಗಿತ್ತು. ಈ ಕುರಿತಂತೆ ಸಿಬಿಐ ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆ ನಡೆದಿತ್ತು. ವಿಚಾರಣಾಧೀನ ಕೈದಿಯಾಗಿದ್ದ ತೆಲಗಿಗೆ ಇಬ್ಬರು ಜೈಲು ಅಧಿಕಾರಿಗಳು ಆದೇಶ ಇಲ್ಲದಿದ್ದರೂ ಸೌಲಭ್ಯ ಒದಗಿಸಿದ್ದಾರೆ ಎಂದು ಆರೋಪಿಸಲಾಗಿತ್ತು.

 ಈ ಅಧಿಕಾರಿಗಳನ್ನು ವಿಶೇಷ ನ್ಯಾಯಾಲಯ ನಿರ್ದೋಷಿಗಳು ಎಂದು ಬಿಡುಗಡೆ ಮಾಡಿತ್ತು. ಆದರೆ, ಇದನ್ನು ಪ್ರಶ್ನಿಸಿ ಸಿಬಿಐ ಹೈಕೋರ್ಟ್‌ನಲ್ಲಿ ಕ್ರಿಮಿನಲ್ ಮೇಲ್ಮನವಿ ಸಲ್ಲಿಸಿತ್ತು.

   ತೆಲಗಿಗೆ 'ಎ' ದರ್ಜೆ ಸೌಲಭ್ಯ: ತೆಲಗಿ ಸಿ ದರ್ಜೆಯ ಕೈದಿಯಾಗಿದ್ದ. ಆದರೆ, ಆತನಿಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ಎ ದರ್ಜೆಯ ಸೌಲಭ್ಯ ಒದಗಿಸಲಾಗಿತ್ತು. ಇದಕ್ಕೆ ಜೈಲು ಅಧಿಕಾರಿಗಳಾದ ಜಯಸಿಂಹ ಮತ್ತು ನಂಜಪ್ಪ ಅವಕಾಶ ಮಾಡಿಕೊಟ್ಟಿದ್ದರು. ಆತನಿಗೆ ಪ್ರತ್ಯೇಕ ಕೋಣೆಗೆ ಮರದ ಬಾಗಿಲು ಇರಿಸಲಾಗಿತ್ತು. ಕಿಟಕಿಗಳಿಗೆ ಪರದೆಗಳಿದ್ದವು. ಪ್ರತ್ಯೇಕ ಟಿವಿ, ವಿಸಿಡಿ, ಮೊಬೈಲ್‌ಫೋನ್, ಆತ ಬಯಸಿದ ಊಟ, ತಿಂಡಿ ನೀಡಲು ಅವಕಾಶ ಕಲ್ಪಿಸಲಾಗಿತ್ತು ಎಂದು ಸಿಬಿಐ ಮೇಲ್ಮನವಿಯಲ್ಲಿ ವಿವರಿಸಿತ್ತು.

 ತಿಂಗಳಿಂದ ವಿಚಾರಣೆ: ತೆಲಗಿ ವಿರುದ್ಧ ಹೈಕೋರ್ಟ್‌ನಲ್ಲಿ ಸದ್ಯ 34 ಕ್ರಿಮಿನಲ್ ಮೇಲ್ಮನವಿ ಸಲ್ಲಿಕೆಯಾಗಿವೆ. ಪ್ರತಿದಿನವೂ ನಡೆಯುತ್ತಿರುವ ಈ ಮೇಲ್ಮನವಿಗಳ ವಿಚಾರಣೆಗೆ ಗುರುವಾರಕ್ಕೆ ಒಂದು ತಿಂಗಳಾಯಿತು. ಇನ್ನೂ ಏಳು ಪ್ರಕರಣ ವಿಚಾರಣೆಗೆ ಬಾಕಿ ಇವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X