Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೊಡಗಿನಲ್ಲಿ ಮೈಸೂರು ಟ್ಯಾಕ್ಸಿ ವಾಲಾ...

ಕೊಡಗಿನಲ್ಲಿ ಮೈಸೂರು ಟ್ಯಾಕ್ಸಿ ವಾಲಾ ಸಂಸ್ಥೆ ಕಾರ್ಯಾರಂಭ

ವಾರ್ತಾಭಾರತಿವಾರ್ತಾಭಾರತಿ4 Aug 2017 5:07 PM IST
share
ಕೊಡಗಿನಲ್ಲಿ ಮೈಸೂರು ಟ್ಯಾಕ್ಸಿ ವಾಲಾ ಸಂಸ್ಥೆ ಕಾರ್ಯಾರಂಭ

ಮಡಿಕೇರಿ, ಆ.4: ಮೈಸೂರು, ಬೆಂಗಳೂರು, ಮಂಗಳೂರು ಸೇರಿದಂತೆ ಪಕ್ಕದ ರಾಜ್ಯಗಳಲ್ಲಿ ಸೇವೆ ಸಲ್ಲಿಸುತ್ತಿರುವ ಮೈಸೂರಿನ ಮೈಸೂರು ಟ್ಯಾಕ್ಸಿ ವಾಲಾ ಸಂಸ್ಥೆ ತನ್ನ ಕಾರ್ಯವ್ಯಾಪ್ತಿಯನ್ನು ಕೊಡಗು ಜಿಲ್ಲೆಗೂ ವಿಸ್ತರಿಸಲು ನಿರ್ಧರಿಸಿದೆ. ತಾಂತ್ರಿಕವಾಗಿ ಗುಣಮಟ್ಟದ ಸೇವೆಯನ್ನು ಒದಗಿಸಲು ಮುಂದಾಗಿರುವ ಸಂಸ್ಥೆ ಪ್ರವಾಸೋದ್ಯಮದ ಅಭಿವೃದ್ಧಿಗೆ ಪೂರಕವಾಗಿ ಕಾರ್ಯನಿರ್ವಹಿಸಲಿದೆ ಎಂದು ಸಂಸ್ಥೆಯ ಸ್ಥಾಪಕರಾದ ಎ. ಚೇತನ್ ಕುಮಾರ್ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಸ್ಥೆಯು ಸುಮಾರು 117 ವಾಹನಗಳನ್ನು ಹೊಂದಿದ್ದು, ಇವುಗಳಲ್ಲಿ 20 ವಾಹನಗಳು ಕೊಡಗಿನಲ್ಲಿ ಇಂದಿನಿಂದ ಸೇವೆಯನ್ನು ಆರಂಭಿಸಿವೆ ಎಂದರು. ಸ್ಥಳೀಯರೊಂದಿಗೆ ಪೈಪೋಟಿಗೆ ಇಳಿಯದೆ, ಜಿಲ್ಲೆಯೊಳಗೆ ದಿನವೊಂದಕ್ಕೆ ಕನಿಷ್ಠ 2 ಸಾವಿರ ರೂ.ಗಳಂತೆ ದರ ನಿಗದಿ ಮಾಡಲಾಗುವುದು. ಕಿಲೋ ಮೀಟರ್‌ಗೆ 7 ರೂ.ಗಳನ್ನು ಪಡೆಯಲಾಗುವುದೆಂದು ತಿಳಿಸಿದರು. ಕುಶಾಲನಗರದಲ್ಲಿ ಕೇಂದ್ರ ಕಛೇರಿ ಕಾರ್ಯ ನಿರ್ವಹಿಸಲಿದ್ದು, ವಾಹನದ ಪ್ರತಿಯೊಬ್ಬ ಚಾಲಕ ಕೇವಲ ಚಾಲಕನಲ್ಲದೆ ಪ್ರವಾಸಿಗರೊಂದಿಗೆ ಗೈಡ್ ಆಗಿಯೂ ಕಾರ್ಯನಿರ್ವಹಿಸಲಿದ್ದಾರೆ ಎಂದರು.

ಕೊಡಗು ಜಿಲ್ಲೆ ಪ್ರವಾಸೋದ್ಯಮ ಕ್ಷೇತ್ರದಲ್ಲಿ ಸಾಕಷ್ಟು ಮುಂದುವರಿದಿದೆ. ಆದರೆ, ಪ್ರವಾಸಿಗರಿಗೆ ಮಾಹಿತಿಯ ಕೊರತೆ ಇದ್ದು, ಗೈಡ್‌ಗಳ ಅವಶ್ಯಕತೆ ಇದೆ. ಇದನ್ನು ನಮ್ಮ ಸಂಸ್ಥೆ ತುಂಬಲಿದೆಯೆಂದು ತಿಳಿಸಿದ ಚೇತನ್ ಕುಮಾರ್, ಸಂಸ್ಥೆಯ ವಾಹನಗಳಲ್ಲಿ ಜಿಪಿಎಸ್ ಇರುವುದರಿಂದ ತಾಂತ್ರಿಕವಾಗಿಯೂ ಉತ್ತಮ ಸೇವೆ ಲಭಿಸಲಿದೆ ಎಂದರು. ಸ್ಥಳೀಯರಿಗೆ ಉದ್ಯೋಗಾವಕಾಶ ದೊರಕಿಸಿಕೊಡುವುದಾಗಿ ಭರವಸೆ ನೀಡಿದ ಅವರು, ನಿವೃತ್ತ ಸೈನಿಕರಿಗೆ ಪ್ರಯಾಣ ದರದಲ್ಲಿ ರಿಯಾಯಿತಿ ಇದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಕೊಡಗು ಕಛೇರಿಯ ವ್ಯವಸ್ಥಾಪಕ ಇಂದ್ರೇಶ್, ಸಂಸ್ಥೆಯ ತಾಂತ್ರಿಕ ವಿಭಾಗದ ಪ್ರಮುಖರಾದ ಕೆ.ಬಿ. ಸುನಿಲ್ ಕುಮಾರ್ ಹಾಗೂ ಜಗದೀಶ್ ಚಂದ್ರು ಉಪಸ್ಥಿತರಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X