ಲಿಂಗಾಯತ ಧರ್ಮ ಸ್ಥಾಪನೆಗೆ ಸಹಮತವಿದೆ: ಎಸ್.ಆರ್.ಪಾಟೀಲ್

ಹಾವೇರಿ, ಆ.4: ಹನ್ನೆರಡನೆಯ ಶತಮಾನದಲ್ಲಿ ಬಸವಣ್ಣನವರು ಸ್ಥಾಪಿಸಿದ ಲಿಂಗಾಯತ ಧರ್ಮಕ್ಕೆ ಪ್ರತ್ಯೇಕ ಧರ್ಮವಾಗುವ ಎಲ್ಲ ಅರ್ಹತೆಗಳಿವೆ ಎಂದು ಕೆಪಿಸಿಸಿ ಕಾರ್ಯಾಧ ್ಯಕ್ಷ ಎಸ್.ಆರ್.ಪಾಟೀಲ್ ಹೇಳಿದ್ದಾರೆ.
ಶುಕ್ರವಾರ ಹಾವೇರಿ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತ್ಯೇಕ ಲಿಂಗಾಯತ ಧರ್ಮ ಸ್ಥಾಪನೆಗೆ ತಮ್ಮ ಸಹಮತವಿದೆ. ಅಲ್ಲದೆ, ವೀರಶೈವ ಮತ್ತು ಲಿಂಗಾಯತ ಎಂದು ಹೋರಾಟ ಮಾಡುತ್ತಿರುವ ನಾಯಕರು, ಮಠಾಧೀಶರು ಒಂದು ಕಡೆ ಕುಳಿತು ಚರ್ಚೆ ಮಾಡಲಿ ಎಂದು ಮನವಿ ಮಾಡಿದರು.
Next Story





