ಪದೋನ್ನತ್ತಿ ಹೊಂದಿದ ಲೆಕ್ಕ ಸಹಾಯಕಿಗೆ ಸನ್ಮಾನ

ಬ್ರಹ್ಮಾವರ, ಆ.4: ಹನೆಹಳ್ಳಿ ಗ್ರಾಪಂನಲ್ಲಿ 22 ವರ್ಷಗಳ ಕಾಲ ದ್ವಿತೀಯ ದರ್ಜೆ ಲೆಕ್ಕ ಸಹಾಯಕಿಯಾಗಿ ಕಾರ್ಯನಿರ್ವಹಿಸಿ, ಇದೀಗ ಕುಂದಾಪುರ ಚಿತ್ತೂರು ಗ್ರಾಪಂಗೆ ಪ್ರಥಮ ದರ್ಜೆ ಲೆಕ್ಕ ಸಹಾಯಕಿಯಾಗಿ ಪದೋನ್ನತಿ ಹೊಂದಿ ವರ್ಗಾವಣೆಗೊಂಡಿರುವ ರತ್ನಾ ಅವರಿಗೆ ಬೀಳ್ಕೊಡುಗೆ ಸಮಾರಂಭ ವನ್ನು ಇತ್ತೀಚೆಗೆ ಹಮ್ಮಿಕೊಳ್ಳಲಾಗಿತ್ತು.
ಗ್ರಾಪಂನಲ್ಲಿ ನಡೆದ ಕಾರ್ಯಕ್ರಮದಲ್ಲಿ ರತ್ನಾ ಅವರನ್ನು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಅರುಂಧತಿ ಏಸುಮನೆ ಸನ್ಮಾನಿಸಿದರು. ಈ ಸಂದರ್ಭದಲ್ಲಿ ಗ್ರಾಪಂ ಕಾರ್ಯದರ್ಶಿ ಉಮೇಶ್ ಮೊದಲಾದವರು ಉಪಸ್ಥಿತರಿದ್ದರು.
Next Story





