ಮೈನ್ ಶಾಲೆಯ ಅಂಗನವಾಡಿ ಸ್ಥಳಾಂತರಕ್ಕೆ ಆಗ್ರಹ

ಉಡುಪಿ, ಆ.4: ಈಗಾಗಲೇ ಗೋಡೆ ಬಿರುಕು ಬಿಟ್ಟು ಕುಸಿದಿರುವ ನಗರದ ಮೈನ್ ಶಾಲೆಯ ಕೊಠಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಂಗನವಾಡಿ ಕೇಂದ್ರವನ್ನು ಸ್ಥಳಾಂತರಿಸುವಂತೆ ಸಮಾಜಸೇವಕ ನಿತ್ಯಾನಂದ ಒಳಕಾಡು ಆಗ್ರಹಿಸಿದ್ದಾರೆ.
ಹಾಜಿ ಅಬ್ದುಲ್ಲಾ ಸಾಹೇಬರು ದಾನ ರೂಪದಲ್ಲಿ ನೀಡಿದ ಜಾಗದಲ್ಲಿರುವ ಮೈನ್ ಶಾಲೆಯ ಗೊಡೆ ಕುಸಿದಿರುವುದರಿಂದ, ಸುರಕ್ಷತೆಯ ದೃಷ್ಟಿಯಿಂದ ವಿದ್ಯಾರ್ಥಿಗಳನ್ನು ಬೇರೆ ಶಾಲೆಗೆ ಸ್ಥಳಾಂತರಿಸಲಾಗಿದೆ. ಅದೇ ರೀತಿ ಸುರಕ್ಷತೆಯ ದೃಷ್ಠಿಯಿಂದ ಇಲ್ಲಿನ ಅಂಗನವಾಡಿ ಕೇಂದ್ರವನ್ನು ಅಲ್ಲೇ ಸಮೀಪದಲ್ಲಿರುವ ಶಿಕ್ಷಣಾಧಿಕಾರಿಗಳ ಕಛೇರಿಗೆ ಸ್ಥಳಾಂತರಗೊಳಿಸಬೇಕೆಂದು ಅವರು ತಿಳಿಸಿದ್ದಾರೆ.
ಶಿಕ್ಷಣಾಧಿಕಾರಿಗಳ ಕಛೇರಿ ಈಗಾಗಲೇ ಬೇರೆಡೆಗೆ ಸ್ಥಳಾಂತರಗೊಂಡಿದ್ದು, ಇಲ್ಲಿ ಸಾಕಷ್ಟು ಸ್ಥಳಾವಕಾಶ ಇದೆ. ಅದೇ ರೀತಿ ಮೈನ್ ಶಾಲೆಯ ದುಸ್ಥಿತಿಯಲ್ಲಿ ರುವ ಗೊಡೆಯನ್ನು ಕೂಡಲೇ ದುರಸ್ಥಿ ಮಾಡಬೇಕು ಎಂದು ಅವರು ಪ್ರಕಟಣೆ ಯಲ್ಲಿ ಒತ್ತಾಯಿಸಿದ್ದಾರೆ.
Next Story





