ಬಸ್ ಢಿಕ್ಕಿ: ಪಾದಚಾರಿ ಮೃತ್ಯು
ಕೋಟ, ಆ.4: ಕೋಟ ಬಸ್ ನಿಲ್ದಾಣದ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಬಸ್ಸೊಂದು ಢಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟಲು ನಿಂತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ.
ಮೃತರನ್ನು ಸುಬ್ರಾಯ ಮಡಿವಾಳ ಎಂದು ಗುರುತಿಸಲಾಗಿದೆ. ರಸ್ತೆ ದಾಟಲು ನಿಂತಿದ್ದ ಸುಬ್ರಾಯ ಮಡಿವಾಳರಿಗೆ ಉಡುಪಿ ಕಡೆಯಿಂದ ಕುಂದಾಪುರ ಕಡೆಗೆ ಹೋಗುತ್ತಿದ್ದ ಬಸ್ ಢಿಕ್ಕಿ ಹೊಡೆಯಿತು. ಇದರಿಂದ ಗಂಭೀರ ಗಾಯಗೊಂಡು ಸ್ಥಳದಲ್ಲಿ ಮೃತಪಟ್ಟರು. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





