ಬೈಕ್ ಢಿಕ್ಕಿ: ಅಪರಿಚಿತ ಮಹಿಳೆ ಗಂಭೀರ
ಉಡುಪಿ, ಆ.4: ಬೈಕೊಂದು ಅಪರಿಚಿತ ಮಹಿಳೆಗೆ ಢಿಕ್ಕಿ ಹೊಡೆದು ಪರಾರಿ ಯಾದ ಘಟನೆ ಇಂದ್ರಾಳಿ ಸಮೀಪ ಇಂದು ಸಂಜೆ ನಾಲ್ಕು ಗಂಟೆ ಸುಮಾರಿಗೆ ನಡೆದಿದೆ.
ಅಪಘಾತಕ್ಕೀಡಾದ ಸುಮಾರು 50 ವರ್ಷ ಪ್ರಾಯದ ಮಹಿಳೆಯ ಸ್ಥಿತಿ ಗಂಭೀರವಾಗಿದ್ದು, ಮಹಿಳೆಯನ್ನು ಸಮಾಜಸೇವಕ ನಿತ್ಯಾನಂದ ಒಳಕಾಡು ಸ್ಥಳಿಯ ರಿಕ್ಷಾ ಚಾಲಕರ ನೆರವಿನಿಂದ ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ. ಬಳಿಕ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮುಖ್ಯಮಂತ್ರಿ ಹರೀಶ್ ಸಂತ್ವಾನ ಯೋಜನೆಯಡಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು.
ಮಹಿಳೆಯು ಮಾತನಾಡುವ ಸ್ಥಿತಿಯಲ್ಲಿ ಇಲ್ಲದ ಕಾರಣ, ಅವರ ಬಗ್ಗೆ ಸ್ವಷ್ಟ ಮಾಹಿತಿ ಲಭ್ಯವಾಗಲಿಲ್ಲ. ವಾರಸುದಾರರು ಜಿಲ್ಲಾಸ್ಪತ್ರೆಯ ನಾಗರಿಕ ಸಾಹಯ ಕೇಂದ್ರವನ್ನು ಸಂಪರ್ಕಿಸುವಂತೆ ನಿತ್ಯಾನಂದ ಒಳಕಾಡು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story





