ಮೌಲಾನಾ ಆಝಾದ್ ಭವನಕ್ಕೆ ಶಂಕುಸ್ಥಾಪನೆ
ಉಡುಪಿ, ಆ.4: ತಾಲೂಕಿನ ಶಿವಳ್ಳಿ ಗ್ರಾಮದ ಮಣಿಪಾಲದಲ್ಲಿ ಸುಮಾರು ಒಂದು ಕೋಟಿ ರೂ. ವೆಚ್ಚದಲ್ಲಿ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಜಿಲ್ಲಾ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ, ಜಿಲ್ಲಾ ವಕ್ಫ್ ಕಚೇರಿಗಳ ಸಂಕೀರ್ಣ ‘ಮೌಲಾನಾ ಆಝಾದ್ ಭವನ’ಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ಹಾಗೂ ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಂ.ಎ.ಗಪೂರ್ ಶಂಕುಸ್ಥಾಪನೆ ನೆರವೇರಿಸಿದರು.
ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಜಿಲ್ಲಾ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ಹಾಗೂ ಜಿಲ್ಲಾ ವಕ್ಫ್ ಕಚೇರಿಗಳು ಒಂದೇ ಕಟ್ಟಡದಲ್ಲಿ ಇದ್ದು, ಅಲ್ಪಸಂಖ್ಯಾತ ಸಮುದಾಯಗಳಿಗೆ ಸಿಗುವ ಎಲ್ಲಾ ಸೌಲ್ಯಗಳನ್ನು ಪಡೆದು ಕೊಳ್ಳಲು ಇದರಿಂದ ಅನುಕೂಲವಾಗಲಿದೆ ಎಂದು ಸಚಿವರು ತಿಳಿಸಿದರು. ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಜಿಲ್ಲಾ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ಹಾಗೂ ಜಿಲ್ಲಾ ವಕ್ಫ್ ಕಚೇರಿಗಳು ಒಂದೇ ಕಟ್ಟಡದಲ್ಲಿ ಇದ್ದು, ಅಲ್ಪಸಂಖ್ಯಾತ ಸಮುದಾಯಗಳಿಗೆ ಸಿಗುವ ಎಲ್ಲಾ ಸೌಲಭ್ಯ ಗಳನ್ನು ಪಡೆದು ಕೊಳ್ಳಲು ಇದರಿಂದ ಅನುಕೂಲವಾಗಲಿದೆ ಎಂದು ಸಚಿವರು ತಿಳಿಸಿದರು. ಹಿಂದುಳಿದ ವರ್ಗಗಳ ಸಮುದಾಯಕ್ಕೂ ಅನುಕೂಲವಾಗುವ ದೃಷ್ಟಿಯಿಂದ ಡಿ.ದೇವರಾಜ ಅರಸು ಭವನವನ್ನು ಇದೇ ಸ್ಥಳದಲ್ಲಿ ನಿರ್ಮಾಣ ಮಾಡಲು ಪ್ರಸ್ತಾವನೆಯೊಂದನ್ನು ಕಳುಹಿಸುವಂತೆ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗೆ ಸಚಿವರು ಸೂಚಿಸಿದರು.
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಹರೀಶ್ ಗಾಂವ್ಕಾರ್, ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಶ್ರೀಧರ್ ಭಂಡಾರಿ ಹಾಗೂ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.





