Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬಿಜೆಪಿ ನಾಯಕರ ವಿರುದ್ಧದ ಕೇಸ್‌ಗಳಿಗೆ...

ಬಿಜೆಪಿ ನಾಯಕರ ವಿರುದ್ಧದ ಕೇಸ್‌ಗಳಿಗೆ ಮರು ಜೀವ?

ಕೇಂದ್ರ ಬಿಜೆಪಿ ಸರಕಾರ ದ್ವೇಷ ರಾಜಕಾರಣಕ್ಕೆ ಇಳಿದಿದೆ ಎಂಬ ಆರೋಪ

ವಾರ್ತಾಭಾರತಿವಾರ್ತಾಭಾರತಿ4 Aug 2017 8:06 PM IST
share
ಬಿಜೆಪಿ ನಾಯಕರ ವಿರುದ್ಧದ ಕೇಸ್‌ಗಳಿಗೆ ಮರು ಜೀವ?

ಬೆಂಗಳೂರು, ಆ.4: ಕೇಂದ್ರದ ಬಿಜೆಪಿ ಸರಕಾರ ದ್ವೇಷ ರಾಜಕಾರಣಕ್ಕೆ ಇಳಿದಿದೆ ಎಂಬ ಆರೋಪಗಳು ಕೇಳಿ ಬಂದ ಹಿನ್ನೆಲೆಯಲ್ಲಿ ರಾಜ್ಯ ಸರಕಾರ, ಇದೀಗ ರಾಜ್ಯ ಬಿಜೆಪಿಯ ಪ್ರಮುಖ ನಾಯಕರಿಗೆ ಸಂಬಂಧಿಸಿದ ವಿವಿಧ ಪ್ರಕರಣಗಳಿಗೆ ಮರುಜೀವ ನೀಡಲು ಗಂಭೀರ ಚಿಂತನೆ ನಡೆಸುತ್ತಿದೆ ಎನ್ನಲಾಗುತ್ತಿದೆ. ಬಿ.ಎಸ್.ಯಡಿಯೂರಪ್ಪ, ಶೋಭಾ ಕರಂದ್ಲಾಜೆ, ಈಶ್ವರಪ್ಪ, ಜಗದೀಶ್ ಶೆಟ್ಟರ್, ಬಿ.ಜೆ. ಪುಟ್ಟಸ್ವಾಮಿ, ಶ್ರೀರಾಮುಲು, ಶಾಸಕರಾದ ಅಶ್ವತ್ಥನಾರಾಯಣ, ಸಂಸದ ಪಿ.ಸಿ. ಮೋಹನ್ ಸೇರಿ ಪ್ರಮುಖ ನಾಯಕರ ಬಗ್ಗೆ ಈಗಾಗಲೇ ಇರುವ ಪ್ರಕರಣಗಳಿಗೆ ಮರುಜೀವ ನೀಡುವುದು. ತನ್ಮೂಲಕ ಬಿಜೆಪಿಯ ಈ ನಾಯಕರು ಸಹ ರೇಜಿಗೆ ಹುಟ್ಟಿಸುವಷ್ಟರ ಮಟ್ಟಿಗೆ ಆಸ್ತಿ ಸಂಗ್ರಹ ಮಾಡಿದ್ದಾರೆ ಎಂಬ ವಿಷಯವನ್ನು ಸಾರ್ವಜನಿಕರ ಗಮನಕ್ಕೆ ತರುವ ಬಗ್ಗೆ ಸರಕಾರದಲ್ಲಿ ಗಂಭೀರ ಚಿಂತನೆ ನಡೆದಿದೆ.

ಒಟ್ಟಾರೆ, ಕನಿಷ್ಠ ಮೂವರು ಪ್ರಮುಖ ಬಿಜೆಪಿ ನಾಯಕರನ್ನು ಜೈಲಿಗೆ ಕಳುಹಿಸುವ ಮೂಲಕ ಬಿಜೆಪಿಯಲ್ಲೂ ತಿಮಿಂಗಿಲಗಳು ಭರ್ಜರಿಯಾಗಿಯೇ ಇವೆ ಎಂಬುದನ್ನು ಜನರ ಮುಂದೆ ಅನಾವರಣಗೊಳಿಸುವ ಚಿಂತನೆ ಸರಕಾರಕ್ಕೆ ಇದೆ ಎನ್ನಲಾಗುತ್ತಿದೆ. ಯಡಿಯೂರಪ್ಪ ಅವರ ಆಪ್ತ ಸಿಬ್ಬಂದಿ ಪ್ರಕರಣ, ಜಗದೀಶ್ ಶೆಟ್ಟರ್ ಅವರ ಹುಬ್ಬಳ್ಳಿಯ ಜಮಖಾನ ಮೈದಾನ ಭೂಕಬಳಿಕೆ ಪ್ರಕರಣ, ಶೋಭಾ ಕರಂದ್ಲಾಜೆ ಅವರ ವಿದ್ಯುತ್ ಖರೀದಿ ಹಗರಣ, ಬೆಂಗಳೂರಿನ ಬಿಜೆಪಿ ಶಾಸಕರಾದ ಎಸ್.ಆರ್.ವಿಶ್ವನಾಥ್, ಡಾ.ಅಶ್ವತ್ಥನಾರಾಯಣ, ಮುನಿರಾಜು, ಬಿ. ಜೆ.ಪುಟ್ಟಸ್ವಾಮಿ, ಮಾಜಿ ಸಚಿವ ಕಟ್ಟಾಸುಬ್ರಹ್ಮಣ್ಯ ನಾಯ್ಡು, ಸಂಸದ ಪಿ.ಸಿ.ಮೋಹನ್ ಮತ್ತಿತರರ ವಿರುದ್ಧ ಭೂಹಗರಣ ಮತ್ತು ಭ್ರಷ್ಟಾಚಾರ ಹಗರಣಗಳ ತನಿಖೆಯನ್ನು ತಾರ್ಕಿಕ ಹಂತಕ್ಕೆ ಕೊಂಡೊಯ್ಯಲು ಗಂಭೀರ ಪ್ರಯತ್ನ ನಡೆದಿದೆ.

ವಿಶ್ವ ಗಾಣಿಗ ಟ್ರಸ್ಟ್ ಹೆಸರಿನಲ್ಲಿ 40 ಕೋಟಿ ರೂ. ಮೌಲ್ಯದ ಟಿ.ದಾಸನಪುರ ಬಳಿಯ 10 ಎಕರೆ ಗೋಮಾಳ ಜಮೀನು ಖರೀದಿ ಪ್ರಕರಣದಲ್ಲಿ ಪುಟ್ಟಸ್ವಾಮಿ ಮತ್ತು ಅಂದಿನ ಡಿ.ಸಿ. ಅಯ್ಯಪ್ಪವಿರುದ್ಧದ ಪ್ರಕರಣದಲ್ಲಿ ಪುಟ್ಟಸ್ವಾಮಿ ವಿರುದ್ಧ ಶೀಘ್ರ ಕ್ರಮಕ್ಕೆ ಸರಕಾರ ಮುಂದಾಗಲಿದೆ ಎಂದೇ ಹೇಳಲಾಗುತ್ತಿದೆ. ಕೇಂದ್ರ ಸಚಿವ ಅನಂತ್ ಕುಮಾರ್ ಮತ್ತು ಯಡಿಯೂರಪ್ಪನಡುವಿನ ಹೈಕಮಾಂಡ್‌ಗೆ ಹಣ ನೀಡಿದ ಸಂಬಂಧ ಆಪ್ತ ಮಾತುಕತೆ ಕುರಿತಂತೆ ಕೆಪಿಸಿಸಿ ಕಾನೂನು ಘಟಕ ನೀಡಿರುವ ದೂರಿನ ಪ್ರಕರಣಗಳನ್ನು ಚುರುಕುಗೊಳಿಸಲು ಸರಕಾರ ಯೋಚಿಸುತ್ತಿದೆ ಎನ್ನಲಾಗುತ್ತಿದೆ.

ಇನ್ನು ಮಾಜಿ ಸಚಿವ ಹಾಗೂ ಶಾಸಕ ಸಿ.ಟಿ.ರವಿ ಮತ್ತು ಸಂಸದ ಬಿ.ಶ್ರೀರಾಮುಲು ವಿರುದ್ಧದ ಹಗರಣಗಳು ಮತ್ತು ಶಾಸಕ ಡಿ.ಎನ್.ಜೀವರಾಜ್, ಮಾಜಿ ಸಚಿವ ಎ.ರಾಮದಾಸ್ ಮತ್ತು ಹರತಾಳು ಹಾಲಪ್ಪಅವರ ವಿರುದ್ಧದ ಅತ್ಯಾಚಾರ ಪ್ರಕರಣಗಳ ಕುರಿತಾಗಿಯೂ ಸಮಗ್ರ ಮಾಹಿತಿ ಸಂಗ್ರಹಿಸಿ, ಪ್ರಕರಣಗಳು ಯಾವ ಹಂತದಲ್ಲಿವೆ ಎಂಬುದರ ಕುರಿತು ತಿಳಿಸುವಂತೆ ಸೂಚಿಸಲಾಗಿದೆ ಎನ್ನಲಾಗಿದೆ. ಹಾಗೆಯೇ ವಿಧಾನಸೌಧದಲ್ಲಿ 2 ಕೋಟಿ ರೂ. ಜಪ್ತಿ ಮಾಡಿದ ಪ್ರಕರಣದ ಹಿನ್ನೆಲೆಯನ್ನೂ ಮರುತನಿಖೆ ನಡೆಸುವ ಚಿಂತನೆ ನಡೆದಿದೆ ಎಂದು ಹೇಳಲಾಗುತ್ತಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X