Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬಾಲ್ಯ ವಿವಾಹಕ್ಕೆ ಕಾದಿದೆ ಕಠಿಣ ಶಿಕ್ಷೆ

ಬಾಲ್ಯ ವಿವಾಹಕ್ಕೆ ಕಾದಿದೆ ಕಠಿಣ ಶಿಕ್ಷೆ

ವಾರ್ತಾಭಾರತಿವಾರ್ತಾಭಾರತಿ4 Aug 2017 8:24 PM IST
share

ಮಂಗಳೂರು, ಆ.4: ಬಾಲ್ಯವಾಹ ಒಂದು ಸಾಮಾಜಿಕ ಪಿಡುಗಾಗಿದ್ದು ಈ ಪದ್ಧತಿಯನ್ನು ಸಂಪೂರ್ಣವಾಗಿ ತೊಡೆದು ಹಾಕಲು ಸಮಾಜದಲ್ಲಿನ ಸರ್ವರ ಸಹಕಾರ ಅತ್ಯಗತ್ಯವಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಕೆ.ಜಿ. ಜಗದೀಶ ಪ್ರಕಟನೆಯಲ್ಲಿ ತಿಳಿಸಿದ್ದಾರೆ. 

ಬಾಲ್ಯ ವಿವಾಹ ನಿಷೇಧ ಕಾಯಿದೆಯನ್ನು ಜಾರಿಗೆ ತಂದಿದ್ದರೂ ಕೂಡ ಇನ್ನೂ ಕೂಡ ಬೆರಳಿಣಿಕೆಯಷ್ಟು ಪ್ರಕರಣಗಳು ವರದಿಯಾಗುತ್ತಿರುವುದು ತೀರ ವಿಷಾದನೀಯ. ಈ ಕಾಯಿದೆಯಲ್ಲಿರುವ ತೀವ್ರ ಮತ್ತು ಕಠಿಣ ಸ್ವರೂಪವಾದ ದಂಡನೆ ಇದ್ದರೂ ಸಹ ಇದರ ಅರಿವು ಕೆಲವರಿಗೆ ತಿಳಿಯದ ಹಿನ್ನೆಲೆಯಲ್ಲಿ ಈ ರೀತಿ ಮರುಕಳಿಸುತ್ತಿದೆ ಎಂದು ಭಾವಿಸಲಾಗಿದೆ. ಈ ಕಾಯಿದೆಯಂತೆ ಬಾಲ್ಯವಾಹ ಪ್ರಕರಣಗಳು ಸಾಬೀತಾದಲ್ಲಿ ಒಂದು ವರ್ಷಕ್ಕಿಂತ ಕಡಿಮೆ ಇಲ್ಲದ ಹಾಗೂ 2 ವರ್ಷದವರೆಗೆ ವಿಸ್ತರಿಸಬಹುದಾದ ಕಠಿಣ ಶಿಕ್ಷೆ ವಿಧಿಸಲು ಅವಕಾಶ ಇರುತ್ತದೆ. ಹಾಗೂ 1 ಲಕ್ಷ ದಂಡವನ್ನು ವಿಧಿಸಲು ಸಾಧ್ಯವಿರುತ್ತದೆ. ಅಲ್ಲದೆ ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಲು ಅವಕಾಶ ಇರುತ್ತದೆ ಎಂದು ಜಿಲ್ಲಾಧಿಕಾರಿ ಡಾ. ಕೆ.ಜಿ. ಜಗದೀಶ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಬಾಲ್ಯವಿವಾಹ ನಿಷೇಧದ ಬಗ್ಗೆ ಈಗಾಗಲೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾಕಷ್ಟು ಶಿಬಿರಗಳನ್ನು ಮತ್ತು ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ನಡೆಸಲಾಗಿದೆ. 2011-12ನೆ ಸಾಲಿನಿಂದ ಇದುವರೆಗೆ ಒಟ್ಟು 85 ಬಾಲ್ಯವಿವಾಹಗಳನ್ನು ತಡೆಹಿಡಿಯಲಾಗಿದೆ.

2016-17ನೆ ಸಾಲಿನಲ್ಲಿ 2 ಹಾಗೂ 2017-18ನೆ ಸಾಲಿನಲ್ಲಿ 3 ಬಾಲ್ಯವಿವಾಹಗಳು ನಡೆದಿದ್ದು, ಈ ಬಗ್ಗೆ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಪ್ರವೀಣ್ ಇವರ ಮೇಲೆ, ಮೂಡಬಿದ್ರೆ ಪೋಲಿಸ್ ಠಾಣೆಯಲ್ಲಿ ಲಕ್ಷ್ಮಿ, ಸಂದೀಪ್ ಮೊಗೆರಾಯ, ಭಾಸ್ಕರ್, ಪ್ರೇಮಲತಾ, ಲಕ್ಷ್ಮೀ ನಾರಾಯಣ ಇವರ ಮೇಲೆ, ಸುರತ್ಕಲ್ ಪೋಲಿಸ್ ಠಾಣೆಯಲ್ಲಿ ರಾಮ್ ಅವ್‌ತಾರ್ ಇವರ ಮೇಲೆ, ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಶಾಂತ್, ಮಲ್ಲಿಕಪ್ಪ, ಜಯಮ್ಮ, ಪ್ರಭಾಕರ್ ರಾವ್, ಮೀನಾಕ್ಷಿ ಹಾಗೂ ಕೃಷ್ಣ ಮೂರ್ತಿ ಇವರ ಮೇಲೆ ಹಾಗೂ ಸುಳ್ಯ ಪೊಲೀಸ್ ಠಾಣೆಯಲ್ಲಿ ಅಂಗಾರ ಮತ್ತು ಸಂದೇಶ ಇವರ ಮೇಲೆ ಎಫ್.ಐ.ಆರ್.ಗಳನ್ನು ಈಗಾಗಲೇ ದಾಖಲಿಸಲಾಗಿದೆ.

ಈ ಪ್ರಕರಣಗಳು ತನಿಖೆಯಲ್ಲಿವೆ. ಗ್ರಾಮ ಪಂಚಾಯತ್ ಮಟ್ಟದಲ್ಲಿ ಬಾಲ್ಯವಿವಾಹ ನಿಷೇಧ ಸಮಿತಿಯು ಗ್ರಾಮ ಪಂಚಾಯತ್ ಅಧ್ಯಕ್ಷರ ಅಧ್ಯಕ್ಷತೆಯಲ್ಲಿದ್ದು ಗ್ರಾಮ ಮಟ್ಟದಲ್ಲಿ ಬಾಲ್ಯವಿವಾಹ ನಿಯಂತ್ರಿಸುವ ಹೊಣೆಗಾರಿಕೆ ಈ ಸಮಿತಿಯದ್ದಾಗಿದೆ. ಆದ್ದರಿಂದ ಬಾಲ್ಯ ವಿವಾಹವನ್ನು ತಡೆಗಟ್ಟಲು ಎಲ್ಲರೂ ಸನ್ನದ್ಧರಾಗಬೇಕು. ಮತ್ತು ಬಾಲ್ಯ ವಿವಾಹ ಪ್ರಕರಣಗಳು ಕಂಡು ಬಂದಲ್ಲಿ ಪ್ರತ್ಯಕ್ಷ ಮತ್ತು ಪರೋಕ್ಷವಾಗಿ ಭಾಗಿಯಾಗುವ ಎಲ್ಲರ ಮೇಲೂ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಯವರು ಪ್ರಕಟನೆಯಲ್ಲಿ ಎಚ್ಚರಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X