ವೇಣೂರು: ಕೆರೆಗೆ ಬಿದ್ದು ವ್ಯಕ್ತಿ ಮೃತ್ಯು
ಬೆಳ್ತಂಗಡಿ, ಆ.4: ತೋಟದಲ್ಲಿ ಹುಲ್ಲು ಕತ್ತರಿಸುತ್ತಿದ್ದ ವೇಳೆ ಆಕಸ್ಮಿಕವಾಗಿ ಕಾಲುಜಾರಿ ಕೆರೆಗೆ ಬಿದ್ದ ವ್ಯಕ್ತಿ ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ಬಜಿರೆಯಲ್ಲಿ ಶುಕ್ರವಾರ ಸಂಭವಿಸಿದೆ.
ಬಜಿರೆ ಗ್ರಾಮದ ಬೆಳ್ಳಿಬೆಟ್ಟು ಮನೆ ಸತೀಶ್ ಆಚಾರ್ಯ (35) ಮೃತರು ಎಂದು ಗುರುತಿಸಲಾಗಿದೆ. ಬೆಳಿಗ್ಗೆ ಮನೆಯ ಅಡಿಕೆ ತೋಟದ ಕೆರೆ ಬದಿ ಹುಲ್ಲು ಕತ್ತರಿಸುತ್ತಿದ್ದ ವೇಳೆ ಕಾಲು ಜಾರಿ ನೀರಿಗೆ ಬಿದ್ದು ಮೃತಪಟ್ಟಿದ್ದಾರೆ. ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





