Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಆಲೇಖಾನ್ ಕುಗ್ರಾಮಕ್ಕೆ ಆರೋಗ್ಯ ಸಂಚಾರಿ...

ಆಲೇಖಾನ್ ಕುಗ್ರಾಮಕ್ಕೆ ಆರೋಗ್ಯ ಸಂಚಾರಿ ವಾಹನ

ವಾರ್ತಾಭಾರತಿವಾರ್ತಾಭಾರತಿ5 Aug 2017 6:30 PM IST
share
ಆಲೇಖಾನ್ ಕುಗ್ರಾಮಕ್ಕೆ ಆರೋಗ್ಯ ಸಂಚಾರಿ ವಾಹನ

ಬಣಕಲ್, ಆ.5: ಮೂಲಸೌಕರ್ಯ ವಂಚಿತ ಆಲೇಖಾನ್ ಕುಗ್ರಾಮದಲ್ಲಿ ಕೇಂದ್ರ ಸರಕಾರಕ್ಕೆ ಪತ್ರ ಬರೆದು ಗಮನ ಸೆಳೆದಿದ್ದ ವಿದ್ಯಾರ್ಥಿನಿ ಕುಮಾರಿ ನಮನ ಅವರ ಮನವಿ ಪರಿಣಾಮ ಹಂತಹಂತವಾಗಿ ಗ್ರಾಮಕ್ಕೆ ಸೌಲಭ್ಯಗಳು ಲಭಿಸುತ್ತಿದ್ದು, ಶನಿವಾರ ಈ ಕುಗ್ರಾಮಕ್ಕೆ ಆರೋಗ್ಯ ಸಂಚಾರಿ ವಾಹನಕ್ಕೆ ಚಾಲನೆ ನೀಡಲಾಯಿತು.

ವಾಹನದ ವ್ಯವಸ್ಥೆ ಇಲ್ಲದೇ ಸಂಚಾರಿ ಸಮಸ್ಯೆ ಎದುರಿಸುತ್ತಿರುವ ಆಲೇಖಾನ್‍ಗೆ ಈಗ ಗ್ರಾಮೀಣ ಆರೋಗ್ಯ ಅಭಿಯಾನದಡಿ ಆರೋಗ್ಯ ಇಲಾಖೆ ಮೂಡಿಗೆರೆ ಸರ್ಕಾರಿ ಎಂಜಿಎಂ ಆಸ್ಪತ್ರೆಯಿಂದ ಸಂಚಾರಿ ವಾಹನವನ್ನು ವಾರದ ಪ್ರತಿ ಶನಿವಾರ ಸಂಚರಿಸಲು ಶುರು ಮಾಡಿದೆ. ರೋಗಿಗಳನ್ನು ನೇರವಾಗಿ ಭೇಟಿಯಾಗಿ ಶುಶ್ರೂಷೆ ಮಾಡಿಸಿ ಚಿಕಿತ್ಸೆ ಮಾಡಲು ಮುಂದಾಗಿದೆ.

ಸಂಚಾರಿ ವಾಹನದಲ್ಲಿದ್ದ ವೈದ್ಯರಾದ ಡಾ.ರಂಗಸ್ವಾಮಿ ಮಾತನಾಡಿ, ಸರ್ಕಾರಿ ರಜೆ ಹೊರತು ಪಡಿಸಿ ಪ್ರತಿ ಶನಿವಾರವು ಆಲೇಖಾನ್‍ಗೆ ಆರೋಗ್ಯ ಸಿಬ್ಬಂದಿಗಳೊಂದಿಗೆ ಬೇಟಿ ನೀಡಿ ಅಲ್ಲಿಯ ಜನರಿಗೆ ಆರೋಗ್ಯದ ಸೌಲಭ್ಯವನ್ನು ಉಚಿತ ತಪಾಸಣೆ ಹಾಗೂ ಔಷದಿಗಳನ್ನು ನೀಡಲಾಗುವುದು. ಗ್ರಾಮಸ್ಥರು ಇದರ ಸದುಪಯೋಗ ಮಾಡಿಕೊಂಡು ಗ್ರಾಮಸ್ಥರ ಮನೆ ಬಾಗಿಲಿಗೆ ಬಂದಿರುವ ಈ ಆರೋಗ್ಯ ಸೌಲಭ್ಯವನ್ನು ಕಡೆಗಣಿಸದೇ ಪ್ರಯೋಜನ ಪಡೆಯಬೇಕು ಎಂದರು.

ಗ್ರಾಮದ ಮುಖಂಡ ವೀರಪ್ಪಗೌಡ ಮಾತನಾಡಿ, ಆಲೇಖಾನ್‍ನಿಂದ ರೋಗಿಗಳಿಗೆ ಆಸ್ಪತ್ರೆಗೆ ಸಾಗಲು ತುಂಬಾ ಅನಾನುಕೂಲವಿತ್ತು. ಸರ್ಕಾರದ ಇಂತಹ ಸಂಚಾರಿ ವಾಹನದ ಯೋಜನೆಯಿಂದ ಗ್ರಾಮದಲ್ಲಿ ಅನಾರೋಗ್ಯದಿಂದ ಇದ್ದವರಿಗೆ ತುರ್ತು ಚಿಕಿತ್ಸೆ ನೀಡಲು ಸಹಾಯಕವಾಗಿದೆ. ಆರೋಗ್ಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ಪರಿಶ್ರಮದಿಂದ ಜನಪರ ಸೌಲಭ್ಯ ನೀಡಿರುವುದು ಗ್ರಾಮದ ಏಳಿಗಗೆ ಸಾಕ್ಷಿಯಾಗಿದೆ ಎಂದು ಹೇಳಿದರು.

ಈ ಸಮಯದಲ್ಲಿ ಆರೋಗ್ಯ ಸಹಾಯಕಿ ಮಂಜುಳ, ಡಾ.ರಂಗಸ್ವಾಮಿ, ಶುಶ್ರೂಷಕಿಯರಾದ ದೀಪಿಕಾ, ಕಾವ್ಯ, ಪ್ರಯೋಗ ಶಾಲಾ ತಂತ್ರಜ್ಞ ಅಜಿತ್, ಫಾರ್ಮಸಿಸ್ಟ್ ಮಹಮ್ಮದ್, ಕಿರಿಯ ಮಹಿಳಾ ಸಹಾಯಕಿ ಮಂಜುಳ, ಆಶಾ ಕಾರ್ಯಕರ್ತೆ ಪವಿತ್ರ, ಜಾವಳಿ ಅಂಗನವಾಡಿ ಕಾರ್ಯಕರ್ತೆ ಶ್ವೇತಾ, ಜಾವಳಿ ಗ್ರಾಪಂ ಸದಸ್ಯೆ ಶಾಂತಮ್ಮ, ಶಾಶ್ವತ್ ಪಟೇಲ್, ಚಂದ್ರಣ್ಣ, ಚಾಲಕ ರವೀಂದ್ರ, ಬಾಳೂರು ಪೋಲಿಸ್ ಸಿಬ್ಬಂದಿ ಮಹಾಂತೇಶ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X