ಕ್ವಿಟ್ ಇಂಡಿಯಾ ಚಳುವಳಿ ಸ್ಮರಣೆ: ಕಾಂಗ್ರೆಸ್ ಕಾರ್ಯಕರ್ತರಿಂದ ಪಾದಯಾತ್ರೆ
ಉಡುಪಿ, ಆ. 5: ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ಆಶ್ರಯದಲ್ಲಿ ಉಡುಪಿ ಜಿಲ್ಲಾ ಕಾಂಗ್ರೆಸ್ ಸೇವಾದಳದ ಸಹಯೋಗದಿಂದ ಕ್ವಿಟ್ ಇಂಡಿಯಾ ಚಳುವಳಿಯ 75ನೇ ವರ್ಷದ ಸ್ಮರಣಾರ್ಥವಾಗಿ ಆ.9ರಂದು ಕಾಂಗ್ರೆಸ್ ಕಾರ್ಯಕರ್ತರ ಪಾದಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ.
ಬೆಳಗ್ಗೆ 9 ಗಂಟೆಗೆ ಉಡುಪಿ ಕಾಂಗ್ರೆಸ್ ಭವನದಲ್ಲಿ ನಡೆಯುವ ಕಾಂಗ್ರೆಸ್ ಧ್ವಜಾರೋಹಣದ ನಂತರ ಪಾದಯಾತ್ರೆ ಪ್ರಾರಂಭಗೊಳ್ಳಲಿದ್ದು, ಮೊದಲು ಅಜ್ಜರಕಾಡು ಗಾಂಧಿ ಪ್ರತಿಮೆಗೆ ಮಾಲಾರ್ಪಣ ಮಾಡಿ -ಜೋಡುಕಟ್ಟೆ- ಕೋರ್ಟ್ ರಸ್ತೆ- ಕೆ.ಎಂ. ಮಾರ್ಗದ ಮೂಲಕ ಸರ್ವಿಸ್ ಬಸ್‌ಸ್ಟಾಂಡ್‌ನ ಬಳಿಯ ಕಾಂಗ್ರೆಸ್ ಸೇವಾದಳದ ಧ್ವಜಕಟ್ಟೆಯ ಬಳಿ (ಕ್ಲಾಕ್ ಟವರ್) ಇರುವ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಪಾದಯಾತ್ರೆ ಸಮಾಪನಗೊಳ್ಳಲಿದ್ದು ನಂತರ ಅಲ್ಲಿ ಸಾರ್ವಜನಿಕ ಸಭೆ ನಡೆಯಲಿದೆ.
ಈ ಪಾದಯಾತ್ರೆ ಮತ್ತು ಸಾರ್ವಜನಿಕ ಸಭೆಯಲ್ಲಿ ಪಕ್ಷದ ಹೆಚ್ಚಿನ ಕಾರ್ಯಕರ್ತರು ಭಾಗವಹಿಸುವುದರ ಮೂಲಕ ಸ್ವಾತಂತ್ರ ಚಳುವಳಿಯಲ್ಲಿ ಬಲಿದಾನವಾದ ಹುತಾತ್ಮರಿಗೆ ನಮನವನ್ನು ಸಲ್ಲಿಸಬೇಕು ಎಂದು ಕಾರ್ಯಕ್ರಮ ಸಂಯೋಜಕರಾದ ಉಡುಪಿ ಜಿಲ್ಲಾ ಕಾಂಗ್ರೆಸ್ ಸೇವಾದಳದ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.





