Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪತ್ರಕರ್ತರ ಮೇಲೆ ಹಲ್ಲೆ ನಡೆದರೆ...

ಪತ್ರಕರ್ತರ ಮೇಲೆ ಹಲ್ಲೆ ನಡೆದರೆ ನಿರ್ದಾಕ್ಷಿಣ್ಯ ಕ್ರಮ: ಜಿಲ್ಲಾಧಿಕಾರಿ

ವಾರ್ತಾಭಾರತಿವಾರ್ತಾಭಾರತಿ5 Aug 2017 9:26 PM IST
share

ಮಂಗಳೂರು, ಆ.5: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪತ್ರಕರ್ತರಿಗೆ ಕರ್ತವ್ಯ ನಿರ್ವಹಣೆಯಲ್ಲಿ ಬೆದರಿಕೆ, ಹಲ್ಲೆಯಂತಹ ಪ್ರಕರಣಗಳು ನಡೆದರೆ ಅಂತಹವರ ವಿರುದ್ಧ ಕಾನೂನು ಪ್ರಕಾರ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಕೆ.ಜಿ.ಜಗದೀಶ್ ಹೇಳಿದರು.

ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಪತ್ರಕರ್ತರ ಮೇಲಿನ ಹಲ್ಲೆಗಳ ಮೇಲ್ವಿಚಾರಣೆ ಮತ್ತು ಪರಿಶೀಲನೆಗೆ ರಚಿಸಿರುವ ಜಿಲ್ಲಾ ಮಟ್ಟದ ಸಮಿತಿಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪತ್ರಕರ್ತರ ವಿರುದ್ಧ ಯಾವುದೇ ದೂರುಗಳಿದ್ದರೂ ಸಮಿತಿಗೆ ಸಲ್ಲಿಸಬಹುದು. ಅದು ಬಿಟ್ಟು ಯಾರಾದರೂ ಕಾನೂನು ಕೈಗೆತ್ತಿಕೊಂಡರೆ ಸೂಕ್ತ ಕ್ರಮ ನಡೆಯಲಿದೆ. ಪತ್ರಕರ್ತರ ಕರ್ತವ್ಯಕ್ಕೆ ಅಡ್ಡಿ ಮಾಡಬಾರದು ಎಂದು ಅವರು ಹೇಳಿದರು.

ಪತ್ರಕರ್ತರ ಮೇಲಿನ ಹಲ್ಲೆ ಪ್ರಕರಣಗಳ ತನಿಖೆಯನ್ನು ತ್ವರಿತವಾಗಿ ನಡೆಸಿ, ನ್ಯಾಯಾಲಯಕ್ಕೆ ದೋಷಾರೋಪಣೆ ಸಲ್ಲಿಸಲು ಜಿಲ್ಲಾಧಿಕಾರಿಗಳು ಪೊಲೀಸ್ ಇಲಾಖೆಗೆ ಸೂಚಿಸಿದರು. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತ ಸಂಘದ ಅಧ್ಯಕ್ಷ ಜಗನ್ನಾಥ ಶೆಟ್ಟಿ ಬಾಳ ಮಾತನಾಡಿ, ಸಮಾಜದಲ್ಲಿ ನಡೆಯುವ ಘಟನೆಗಳ ಬಗ್ಗೆ ವರದಿ ಮಾಡಲು ತೆರಳುವ ಪತ್ರಕರ್ತರು ತಾವೇ ಅಪಾಯಕ್ಕೊಳಗಾಗಬೇಕಾದ ಸನ್ನಿವೇಶಗಳು ಎದುರಾಗುತ್ತಿವೆ. ಇಂತಹ ಸಂದರ್ಭಗಳಲ್ಲಿ ಸೂಕ್ತ ರಕ್ಷಣೆ ನೀಡಬೇಕು ಎಂದು ಹೇಳಿದರು.

ಸಮಿತಿ ಸದಸ್ಯ ಮುಹಮ್ಮದ್ ಆರಿಫ್ ಪಡುಬಿದ್ರೆ ಸಭೆಯಲ್ಲಿ ಮಾತನಾಡಿ, ಕಳೆದ ಒಂದು ದಶಕಗಳಿಂದ ಜಿಲ್ಲೆಯಲ್ಲಿ ನಡೆದ ಹಲವು ಕೊಲೆ, ಗಲಭೆಗಳ ಸಂದರ್ಭದಲ್ಲಿ ವರದಿ ಮಾಡಲು ಹೋಗಿದ್ದ ಪತ್ರಕರ್ತರ ಮೇಲೆ ಹಲ್ಲೆ ನಡೆದಿದೆ. ಇಂಥಹ ಘಟನೆಗಳ ಸಂದರ್ಭಗಳಲ್ಲಿ ಪೊಲೀಸ್ ಇಲಾಖೆ ಸೂಕತಿ ರಕ್ಷಣೆ ಕೊಡಬೇಕು. ಕೆಲವೊಮ್ಮೆ ಬೆದರಿಕೆ ಕರೆಗಳೂ ಬಂದಿವೆ. ಇದರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿಗಳು, ಗಲಭೆಗಳ ಸಂದರ್ಭಗಳಲ್ಲಿ ಪತ್ರಕರ್ತರು ಒಂದೇ ವಾಹನದಲ್ಲಿ ವರದಿಗಾರಿಕೆಗೆ ತೆರಳಿದರೆ ಉತ್ತಮ. ಈ ಸಂದರ್ಭಗಳಲ್ಲಿ ಮನವಿ ಮಾಡಿದರೆ ಸೂಕ್ತ ಪೊಲೀಸ್ ಬಂದೋಬಸ್ತ್ ಒದಗಿಸಲಾಗುವುದು. ಪತ್ರಕರ್ತರು ಹಲ್ಲೆ, ಬೆದರಿಕೆ ಸಂದರ್ಭದಲ್ಲಿ ಪೊಲೀಸರಿಗೆ ದೂರು ನೀಡಬೇಕು ಎಂದು ಹೇಳಿದರು.

ಜಿಲ್ಲಾ ವಾರ್ತಾಧಿಕಾರಿ ಬಿ.ಎ. ಖಾದರ್ ಶಾ ಮಾತನಾಡಿ, 2016ರ ಜನವರಿ 1ರಿಂದ 2017 ಮೇ 31ರವರೆಗೆ ಜಿಲ್ಲೆಯಲ್ಲಿ ಪತ್ರಕರ್ತರ ಮೇಲೆ 3 ಹಲ್ಲೆ ಪ್ರಕರಣಗಳು ನಡೆದಿವೆ. ಈ ಪೈಕಿ ಮಂಗಳೂರು ಪೊಲೀಸ್ ಕುಷನರೇಟ್ ವ್ಯಾಪ್ತಿ ಯಲ್ಲಿ 1 ಹಾಗೂ ಜಿಲ್ಲಾ ಪೊಲೀಸ್ ವ್ಯಾಪ್ತಿ ಯಲ್ಲಿ 2 ಪ್ರಕರಣಗಳು ದಾಖಲಾಗಿವೆ. ಇದರಲ್ಲಿ ಎರಡು ಪ್ರಕರಣಗಳು ನ್ಯಾಯಾಲಯದ ವಿಚಾರಣೆಯಲ್ಲಿದೆ. 1 ಪ್ರಕರಣ ತನಿಖೆಯಲ್ಲಿದೆ ಎಂದು ಸಭೆಗೆ ಮಾಹಿತಿ ನೀಡಿದರು.

ಸಭೆಯಲ್ಲಿ ಮಂಗಳೂರು ಕೇಂದ್ರ ವಿಭಾಗದ ಎಸಿಪಿ ಉದಯ ನಾಯಕ್, ಎಸ್ಪಿ ಕಚೇರಿಯ ಎಸ್‌ಐ ಎ.ವಿ.ರೊಸಾರಿಯೊ, ಮಂಗಳೂರು ತಹಶೀಲ್ದಾರ್ ಸಿ.ಮಹಾದೇವಯ್ಯ, ಸಮಿತಿಯ ಸದಸ್ಯರಾದ ಪತ್ರಕರ್ತ ಭಾಸ್ಕರ ರೈ, ಪತ್ರಕರ್ತರ ಸಂಘದ ಉಪಾಧ್ಯಕ್ಷ ಸುಖೇಶ್ ಶೆಟ್ಟಿ, ವಾರ್ತಾ ಇಲಾಖೆಯ ಸಿಬ್ಬಂದಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X