ಈಶ್ವರಪ್ಪ ಪಿಎ ಅಪಹರಣ ಯತ್ನ ಪ್ರಕರಣ : ಬಿಎಸ್‌ವೈ ಪಿಎ ಸಂತೋಷ್‌ಗೆ ಶರತ್ತುಬದ್ಧ ಜಾಮೀನು

ಬೆಂಗಳೂರು, ಆ.5: ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಅವರ ಪಿಎ ವಿನಯ್ ಅಪಹರಣ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪನವರ ಪಿಎ ಸಂತೋಷ್‌ಗೆ 62ನೆ ಸೆಷನ್ ಕೋರ್ಟ್ ಶರತ್ತುಬದ್ಧ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಈ ಸಂಬಂಧ ಜಾಮೀನು ಕೋರಿ ಸಂತೋಷ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಧೀಶ ಎಸ್.ಎ.ಚಿಕ್ಕೋಡೆ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿತು. 30 ದಿನಗಳ ಒಳಗೆ ತನಿಖಾಧಿಕಾರಿ ಮುಂದೆ ಹಾಜರಾಗುವಂತೆ ಸಂತೋಷ್‌ಗೆ ಸೂಚನೆ ನೀಡಲಾಗಿದೆ. ಯಾವುದೇ ಸಾಕ್ಷ ನಾಶಪಡಿಸಬಾರದು. ತನಿಖಾಧಿಕಾರಿ ಕರೆದಾಗ ತನಿಖೆಗೆ ಸಹಕರಿಸಬೇಕು. ಬೆಂಗಳೂರು ಬಿಟ್ಟು ಎಲ್ಲಿಗೂ ತೆರಳಬಾರದು. ಆರೋಪಿಯ ಸರಿಯಾದ ವಿಳಾಸವನ್ನು ತನಿಖಾಧಿಕಾರಿಗೆ ನೀಡುವಂತೆ ಕೋರ್ಟ್ ಸೂಚಿಸಿದೆ.
Next Story





