Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ‘ಬ್ರಾಹ್ಮಣಶಾಹಿ ಭಾರತ’ ನಿರ್ಮಾಣದತ್ತ...

‘ಬ್ರಾಹ್ಮಣಶಾಹಿ ಭಾರತ’ ನಿರ್ಮಾಣದತ್ತ ಸಾಗಿದ ಕೇಂದ್ರ ಸರಕಾರ: ಆನಂದ ತೇಲ್‌ತುಂಬ್ಡೆ ಆತಂಕ

ವಿದ್ಯಾರ್ಥಿ ಹೋರಾಟಗಳ ರಾಷ್ಟ್ರೀಯ ಸಮಾವೇಶ-2017

ವಾರ್ತಾಭಾರತಿವಾರ್ತಾಭಾರತಿ5 Aug 2017 9:50 PM IST
share
‘ಬ್ರಾಹ್ಮಣಶಾಹಿ ಭಾರತ’ ನಿರ್ಮಾಣದತ್ತ ಸಾಗಿದ ಕೇಂದ್ರ ಸರಕಾರ: ಆನಂದ ತೇಲ್‌ತುಂಬ್ಡೆ ಆತಂಕ

ಬೆಂಗಳೂರು, ಆ.5: ಕೇಂದ್ರ ಸರಕಾರ ಜೀವ ವಿರೋಧಿಯಾದ,ಅಸಮಾನತೆಯ ಕೂಪವಾಗಿರುವ ಬ್ರಾಹ್ಮಣಶಾಹಿ ತತ್ವದ ಆಧಾರದ ಭಾರತವನ್ನು ನಿರ್ಮಿಸಲು ಹೊರಟಿಸಿದೆ ಎಂದು ಚಿಂತಕ ಡಾ.ಆನಂದ್ ತೇಲ್‌ತುಂಬ್ಡೆ ಆತಂಕ ವ್ಯಕ್ತಪಡಿಸಿದ್ದಾರೆ.

ಅಖಿಲ ಭಾರತ ಪ್ರಗತಿಪರ ವಿದ್ಯಾರ್ಥಿ ಸಂಘಟನೆಗಳ ಒಕ್ಕೂಟ ನಗರದ ಶಿಕ್ಷಕರ ಸದನದಲ್ಲಿ ಆಯೋಜಿಸಿದ್ದ ವಿದ್ಯಾರ್ಥಿ ಹೋರಾಟಗಳ ರಾಷ್ಟ್ರೀಯ ಸಮಾವೇಶ-2017 ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಕೇಂದ್ರ ಸರಕಾರ ಸನಾತನ ಧರ್ಮದಿಂದ ಕೂಡಿದ ಉಜ್ವಲ ಭಾರತವನ್ನು ನಿರ್ಮಿಸುತ್ತೇವೆಂದು ಹೇಳುತ್ತಿದೆ. ಆ ಉಜ್ವಲ ಭಾರತವು ಅಸಮಾನತೆ, ಜಾತಿ ಹಾಗೂ ಗುಲಾಮತನದಿಂದ ಕೂಡಿದ ಭಾರತವೇ ಆಗಿದೆ. ಈ ಬ್ರಾಹ್ಮಣಶಾಹಿಗಳು ಜ್ಞಾನ ಮತ್ತು ಸಂಪತ್ತನ್ನು ಹಿಡಿತದಲ್ಲಿಟ್ಟುಕೊಂಡು ದಲಿತರು, ಮಹಿಳೆಯರು ಹಾಗೂ ಧಾರ್ಮಿಕ ಅಲ್ಪಸಂಖ್ಯಾತರನ್ನು ದೈಹಿಕ ಹಾಗೂ ಮಾನಸಿಕವಾಗಿ ಶೋಷಿಸುತ್ತಿದ್ದಾರೆ ಎಂದು ಅವರು ತಿಳಿಸಿದರು. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ದೇಶದಲ್ಲಿ ಪ್ರಜಾಪ್ರಭುತ್ವವನ್ನು ನಾಶ ಮಾಡುವತ್ತ ದಾಪುಗಾಲು ಇಟ್ಟಿದೆ. ಜನತೆಯ ಮೂಲಭೂತ ಅಗತ್ಯಗಳಾದ ಶಿಕ್ಷಣ, ಆರೋಗ್ಯ, ಉದ್ಯೋಗ ಕುರಿತು ಯಾವ ಭರವಸೆಯನ್ನು ನೀಡುತ್ತಿಲ್ಲ. ಬದಲಾಗಿ, ದೇಶದ ಜನತೆ ಏನನ್ನು ತಿನ್ನಬೇಕು, ಯಾವ ಬಟ್ಟೆ ಧರಿಸಬೇಕೆಂದು ಕಟ್ಟಾಜ್ಞೆ ಹೊರಡಿಸುತ್ತಿದೆ ಎಂದು ಅವರು ಕಿಡಿಕಾರಿದರು.

ಬ್ರಾಹ್ಮಣವಾದಿಕರಣ ಹಾಗೂ ಉದಾರವಾದಿಕರಣಗಳು ಪರಸ್ಪರ ಜೊತೆಗೂಡಿ ದೇಶದ ಸಂಪತ್ತನ್ನು ಲೂಟಿ ಮಾಡಿ, ಇಲ್ಲಿನ ಬಡವ ಹಾಗೂ ಮಧ್ಯಮ ವರ್ಗದ ಜನತೆಯನ್ನು ಎಲ್ಲ ಅವಕಾಶಗಳಿಂದ ವಂಚಿಸಲು ಯೋಜನೆಗಳನ್ನು ರೂಪಿಸಿವೆ. ಅದರ ಭಾಗವಾಗಿಯೇ ಪ್ರಧಾನಿ ನರೇಂದ್ರ ಮೋದಿ ನೀತಿ ಆಯೋಗವನ್ನು ಜಾರಿ ಮಾಡಿ, ಎಲ್ಲವನ್ನು ಖಾಸಗಿಕರಣ ಮಾಡಲು ಹೊರಟಿದ್ದಾರೆ ಎಂದು ಅವರು ಆತಂಕ ವ್ಯಕ್ತಪಡಿಸಿದರು.

ಉನ್ನತ ಶಿಕ್ಷಣ ವ್ಯವಸ್ಥೆ ಮುಗಿಸಿ ಬರುವ ವಿದ್ಯಾರ್ಥಿಗಳು ಸ್ವಾಭಿಮಾನದಿಂದ ಬದುಕನ್ನು ರೂಪಿಸಿಕೊಳ್ಳಲು ಸಾಧ್ಯವಾಗದ ಮಟ್ಟಕ್ಕೆ ಶಿಕ್ಷಣ ವ್ಯವಸ್ಥೆಯನ್ನು ರೂಪಿಸಲಾಗಿದೆ. ಎಲ್ಲ ಕ್ಷೇತ್ರಗಳು ಖಾಸಗಿಕರಣದ ಕಪಿಮುಷ್ಟಿಯಲ್ಲಿ ಸಿಲುಕಿದ್ದು, ಯಾವುದೇ ವ್ಯಕ್ತಿ ಸ್ವತಂತ್ರವಾಗಿ, ಸ್ವಾವಲಂಬನೆಯಿಂದ ಬದುಕಲು ಸಾಧ್ಯವಾಗದ ಮಟ್ಟಕ್ಕೆ ಮುಟ್ಟಿದ್ದಾನೆ ಎಂದು ಅವರು ವಿಷಾದಿಸಿದರು.

ಹಿರಿಯ ಶಿಕ್ಷಣ ತಜ್ಞ ಪ್ರೊ.ಅನಿಲ್ ಸದ್ಗೋಪಾಲ್ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಶಿಕ್ಷಣದ ನೀತಿಗಳು ದೇಶದ ಬಡವ ಹಾಗೂ ಸಾಮಾನ್ಯವರ್ಗದ ವಿದ್ಯಾರ್ಥಿಗಳನ್ನು ಶಿಕ್ಷಣದಿಂದ ವಂಚಿತರನ್ನಾಗಿ ಮಾಡುವುದೇ ಆಗಿದೆ. ಇದರ ವಿರುದ್ಧ ಎಲ್ಲ ಪ್ರಗತಿಪರ ಸಂಘಟನೆಗಳು ಒಗ್ಗೂಡಿ ಹೋರಾಟ ಮಾಡುವ ಮೂಲಕ ಖಾಸಗಿಕರಣ ಹಾಗೂ ಕೋಮುವಾದಿಗಳಿಂದ ಮುಕ್ತಿ ಪಡೆಯಬೇಕೆಂದು ಆಶಿಸಿದರು.

ದೇಶದಲ್ಲಿ ಪ್ರಗತಿಪರ ಸಂಘಟನೆಗಳು ಒಟ್ಟಾಗಿ ಹೋರಾಟ ಮಾಡುತ್ತಿರುವುದು ಒಳ್ಳೆಯ ಸಂಗತಿಯಾಗಿದೆ. ಅದರಲ್ಲೂ ಎಡವಾದಿ ಹಾಗೂ ಅಂಬೇಡ್ಕರ್‌ವಾದಿ ಸಂಘಟನೆಗಳು ಒಟ್ಟಾಗಿರುವುದು ಹೊಸ ಭರವಸೆ ಮೂಡಿದೆ. ಈ ವಿದ್ಯಾರ್ಥಿ ಹೋರಾಟಗಳು ಜನಚಳವಳಿಯಾಗಿ ರೂಪಿತವಾದರೆ ಮಾತ್ರ ಜನವಿರೋಧಿ ಶಕ್ತಿಗಳಿಂದ ವಿಮೋಚನೆ ಸಾಧ್ಯವೆಂದು ಅವರು ತಿಳಿಸಿದರು.

 ಈ ವೇಳೆ ಎಐಎಸ್‌ಎಫ್ ರಾಜ್ಯಾಧ್ಯಕ್ಷೆ ಜ್ಯೋತಿ ಸೇರಿದಂತೆ ವಿವಿಧ ವಿದ್ಯಾರ್ಥಿ ಸಂಘಟನೆಗಳು ನಾಯಕರು ಮಾತನಾಡಿದರು. ಕಾರ್ಯಕ್ರಮದಲ್ಲಿ ಅಖಿಲ ಭಾರತ ಪ್ರತಿಗಪರ ವಿದ್ಯಾರ್ಥಿ ಸಂಘಟನೆಗಳ ಸಮಿತಿಯ ಅಧ್ಯಕ್ಷೆ ಇಂದಿರಾ ಕೃಷ್ಣಪ್ಪ, ವಿದ್ಯಾರ್ಥಿ ನಾಯಕ ಕನ್ನಯ್ಯ ಕುಮಾರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

 ನಜೀಬ್ ನಾಪತ್ತೆ ಮರೆಸಲು ಪ್ರಯತ್ನ ಜೆಎನ್‌ಯು ವಿವಿ ವಿದ್ಯಾರ್ಥಿ ನಜೀಬ್ ನಾಪತ್ತೆ ಪ್ರಕರಣವನ್ನು ಕೇಂದ್ರ ಸರಕಾರ ಹಾಗೂ ಜೆಎನ್‌ಯು ಆಡಳಿತ ಮಂಡಳಿ ನಯವಾಗಿ ಮರೆಸಲು ಪ್ರಯತ್ನಿಸುತ್ತಿದೆ. ಆದರೆ, ಈ ಪ್ರಕರಣವನ್ನು ಇಲ್ಲಿಯವರೆಗೂ ಜೀವಂತವಾಗಿಟ್ಟಿರುವ ಜೆಎನ್‌ಯು ವಿದ್ಯಾರ್ಥಿ ಸಂಘಟನೆಗಳ ನಾಯಕರಿಗೆ ಕೇಂದ್ರ ಸರಕಾರ ಕಿರುಕುಳ ನೀಡುತ್ತಿದೆ. ಹಾಗೂ ಅವರು ಪಿಎಚ್‌ಡಿ ಮಾಡದಂತೆ ತಡೆಯುತ್ತಿದೆ.
-ಪ್ರೊ.ಅನಿಲ್ ಸದ್ಗೋಪಾಲ್ ಶಿಕ್ಷಣ ತಜ್ಞ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X