Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ನಗರೋತ್ಥಾನ ಯೋಜನೆಯ ಕಾಮಗಾರಿಗಳನ್ನು...

ನಗರೋತ್ಥಾನ ಯೋಜನೆಯ ಕಾಮಗಾರಿಗಳನ್ನು ವರ್ಷಾಂತ್ಯದೊಳಗೆ ಪೂರ್ಣಗೊಳಿಸಲು ಸಿಎಂ ಗಡುವು

ವಾರ್ತಾಭಾರತಿವಾರ್ತಾಭಾರತಿ5 Aug 2017 9:56 PM IST
share
ನಗರೋತ್ಥಾನ ಯೋಜನೆಯ ಕಾಮಗಾರಿಗಳನ್ನು ವರ್ಷಾಂತ್ಯದೊಳಗೆ ಪೂರ್ಣಗೊಳಿಸಲು ಸಿಎಂ ಗಡುವು

ಬೆಂಗಳೂರು, ಆ.5: ಪಾಲಿಕೆ ವ್ಯಾಪ್ತಿಯಲ್ಲಿ ನಗರೋತ್ಥಾನ ಯೋಜನೆಯಡಿ ನಡೆಯುತ್ತಿರುವ ಕಾಮಗಾರಿಗಳನ್ನು ವರ್ಷಾಂತ್ಯದೊಳಗೆ ಪೂರ್ಣಗೊಳಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪಾಲಿಕೆ ಅಧಿಕಾರಿಗಳು ಮತ್ತು ಮುಖ್ಯ ಎಂಜಿನಿಯರ್‌ಗಳಿಗೆ ಸೂಚನೆ ನೀಡಿದ್ದಾರೆ.

ಶನಿವಾರ ನಗರ ಪ್ರದಕ್ಷಿಣೆಯ ಬಳಿಕ ಗೃಹ ಕಚೇರಿ ಕೃಷ್ಣಾದಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಭಾರಿ ಅನುದಾನವನ್ನು ನಮ್ಮ ಸರಕಾರ ಒದಗಿಸಿದೆ. 7,300 ಕೋಟಿ ರೂ. ವೆಚ್ಚದಲ್ಲಿ ರಸ್ತೆ, ಪಾದಚಾರಿ ಮಾರ್ಗಗಳ ಅಭಿವೃದ್ಧಿ, ಮಳೆ ನೀರು ಹರಿಯುವ ಚರಂಡಿಗಳ ಪುನಶ್ಚೇತನ ಮತ್ತಿತರ ಕಾಮಗಾರಿಗಳು ಬಿರುಸಿನಿಂದ ಸಾಗಿದ್ದು, ಎಲ್ಲ ಕಾಮಗಾರಿಗಳು ಪೂರ್ಣಗೊಂಡ ಬಳಿಕ ಮಹಾನಗರಕ್ಕೆ ಹೊಸ ರೂಪ ಸಿಗಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಮಳೆ ನೀರು ಹರಿಯುವ ಚರಂಡಿಗಳಿಗೆ ಸಂಬಂಧಿಸಿದಂತೆ 408 ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಇದರಲ್ಲಿ 223 ಕಾಮಗಾರಿ ಆರಂಭವಾಗಿದೆ. ಇದರಲ್ಲಿ 24 ಕಿ.ಮೀ. ಕಾಮಗಾರಿ ಮುಗಿದಿದ್ದು, 58 ಕಿ.ಮೀ. ಮಾರ್ಗದ ಕೆಲಸ ವಿವಿಧ ಹಂತದಲ್ಲಿದೆ. ಒಟ್ಟು 83 ಕಿ.ಮೀ. ಮಾರ್ಗದಲ್ಲಿ ಕಾಮಗಾರಿ ನಡೆಯುತ್ತಿದೆ. ಇದಕ್ಕಾಗಿ 800 ಕೋಟಿ ನೀಡಲಾಗಿದೆ ಎಂದು ವಿವರಿಸಿದರು.

ಮೆಟ್ರೋ ಪಾದಚಾರಿ ಮಾರ್ಗ ಅಭಿವೃದ್ಧಿ: ನಗರದಲ್ಲಿ 729 ಕಿ.ಮೀ. ಪಾದಚಾರಿ ಮಾರ್ಗಗಳನ್ನು ಅಭಿವೃದ್ಧಿಪಡಿಸಲು ತೀರ್ಮಾನಿಸಲಾಗಿದೆ. ಎಂಟು ಪ್ರಮುಖ ರಸ್ತೆಗಳಲ್ಲಿ ಕಾಮಗಾರಿ ಕೈಗೆತ್ತಿಕೊಂಡಿದ್ದೇವೆ. ಮುಖ್ಯವಾಗಿ ಮೆಟ್ರೋ ರೈಲ್ವೆ ನಿಲ್ದಾಣ ಇರುವ ಕಡೆ ಪಾದಚಾರಿ ಮಾರ್ಗಗಳು ಸುರಕ್ಷಿತವಾಗಿ ಇರಬೇಕು. ಸಾರ್ವಜನಿಕರ ಓಡಾಟಕ್ಕೆ ಅನುಕೂಲಕರವಾಗಿರಬೇಕು ಎಂಬುದು ನಮ್ಮ ಉದ್ದೇಶ. ಈ ಹಿನ್ನೆಲೆಯಲ್ಲಿ ಪಾದಚಾರಿ ಮಾರ್ಗಗಳನ್ನು ಉನ್ನತ ಮಟ್ಟಕ್ಕೆ ಏರಿಸಲು ನಿರ್ಧರಿಸಲಾಗಿದೆ ಎಂದು.

ಎಂಜಿ ರಸ್ತೆ ಅಭಿವೃದ್ಧಿ: ನಗರದ ವಾಣಿಜ್ಯ ಕೇಂದ್ರಬಿಂದುಗಳಾದ ಎಂ.ಜಿ.ರಸ್ತೆಯ ಪಾದಚಾರಿ ಮಾರ್ಗದ ಮೇಲ್ದರ್ಜೆ ಕಾಮಗಾರಿ, ಚರ್ಚ್ ಸ್ಟ್ರೀಟ್ ಸೇರಿದಂತೆ ಮತ್ತಿತರ 8 ಕಡೆ ಬಿಬಿಎಂಪಿ ಮತ್ತು ಬಿಎಂಆರ್‌ಸಿಎಲ್ ಜಂಟಿಯಾಗಿ 40 ಕೋಟಿ ರೂ. ವೆಚ್ಚದಲ್ಲಿ ಕೈಗೆತ್ತಿಕೊಂಡಿರುವ ಕೆಲಸ ಮುಗಿಯುವ ಹಂತದಲ್ಲಿದೆ. ಎಂ.ಜಿ ರಸ್ತೆಯ ಪಾದಚಾರಿ ಮಾರ್ಗದ ಮೇಲ್ದರ್ಜೆ ಕಾಮಗಾರಿ ಮತ್ತು ಚರ್ಚ್‌ಸ್ಟ್ರೀಟ್ ರಸ್ತೆಗಳಿಗೆ ಟೆಂಡರ್ ಶ್ಯೂರ್ ಕಾಮಗಾರಿಯನ್ನು ವಿದೇಶಿ ರಸ್ತೆಗಳ ಮಾದರಿಯಲ್ಲಿ ಗ್ರಾನೈಟ್ ಹಾಕಲಾಗುವುದು ಎಂದು ತಿಳಿಸಿದರು.

ಈಗಾಗಲೇ ಶೇ. 60ರಷ್ಟು ಕಾಮಗಾರಿ ಮುಗಿದಿದೆ. ಕೋರಮಂಗಲದ ಮೇಸ್ತ್ರಿಪಾಳ್ಯ ಉದ್ಯಾನವನದಲ್ಲಿ 7 ಕೋಟಿ ರೂ. ವೆಚ್ಚದ ಕಾಮಗಾರಿ ನಡೆಯುತ್ತಿದೆ. ಜೊತೆಗೆ ಅಲ್ಲಿನ ಕೆರೆ ಅಭಿವೃದ್ಧಿಪಡಿಸಲು ಸೂಚಿಸಿದೆ. ಅಕ್ಟೋಬರ್ ವೇಳೆಗೆ ಕೆಲಸ ಮುಗಿಸಲು ಆದೇಶ ನೀಡಲಾಗಿದೆ ಎಂದರು.

ಹೊರ ವರ್ತುಲ ರಸ್ತೆಯನ್ನು ಮೈಸೂರು ರಸ್ತೆಯಿಂದ ಸಿಲ್ಕ್ ಬೋರ್ಡ್ ಜಂಕ್ಷನ್‌ವರೆಗೆ ಸಿಗ್ನಲ್ ಮುಕ್ತ ಕಾರಿಡಾರ್‌ಆಗಿ ಪರಿವರ್ತನೆ ಮಾಡಲಾಗುತ್ತಿದೆ. ಜಯದೇವ ಆಸ್ಪತ್ರೆ ಜಂಕ್ಷನ್ ಬಳಿ ನಡೆಯುತ್ತಿರುವ ಮೇಲು ರಸ್ತೆ ಕಾಮಗಾರಿಯನ್ನು ಡಿಸೆಂಬರ್ ವೇಳೆಗೆ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X