Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ದೇಶದ ಅಭಿವೃದ್ಧಿ ಕುಸಿಯಲು ಭ್ರಷ್ಟಾಚಾರ...

ದೇಶದ ಅಭಿವೃದ್ಧಿ ಕುಸಿಯಲು ಭ್ರಷ್ಟಾಚಾರ ಕಾರಣ: ನ್ಯಾ.ಸಂತೋಷ್ ಹೆಗ್ಡೆ

‘ಆಡಳಿತ ಸುಧಾರಿಸಿ, ದೇಶ ಉಳಿಸಿ’ ವಿಚಾರಗೋಷ್ಠಿ

ವಾರ್ತಾಭಾರತಿವಾರ್ತಾಭಾರತಿ5 Aug 2017 10:34 PM IST
share
ದೇಶದ ಅಭಿವೃದ್ಧಿ ಕುಸಿಯಲು ಭ್ರಷ್ಟಾಚಾರ ಕಾರಣ:  ನ್ಯಾ.ಸಂತೋಷ್ ಹೆಗ್ಡೆ

ಬೆಂಗಳೂರು, ಆ.5: ಭ್ರಷ್ಟಾಚಾರಕ್ಕೆ ಕಡಿವಾಣ ಬೀಳದ ಹಿನ್ನೆಲೆಯಲ್ಲಿ ದೇಶದ ಆರ್ಥಿಕ ಅಭಿವೃದ್ಧಿ ಕುಗ್ಗುತ್ತಿದೆ ಎಂದು ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಅಭಿಪ್ರಾಯಪಟ್ಟಿದ್ದಾರೆ.

  ಶನಿವಾರ ಪ್ರೆಸ್ ಕ್ಲಬ್ ಸಭಾಂಗಣದಲ್ಲಿ ಲಂಚಮುಕ್ತ ಕರ್ನಾಟಕ ನಿರ್ಮಾಣ ವೇದಿಕೆ ಆಯೋಜಿಸಿದ್ದ ‘ಆಡಳಿತ ಸುಧಾರಿಸಿ, ದೇಶ ಉಳಿಸಿ’ ಎಂಬ ಕುರಿತ ವಿಚಾರಗೋಷ್ಠಿಯಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಬೋಪೋರ್ಸ್ ಹಗರಣ, 2ಜಿ ಹಗರಣ, ಕಾಮನ್‌ವೆಲ್ತ್, ಕಲ್ಲಿದ್ದಲು ಇತ್ಯಾದಿ ಅನೇಕ ಹಗರಣಗಳ ಮೂಲಕ ದೇಶವನ್ನು ಲೂಟಿ ಮಾಡಲಾಗಿದೆ. ಇವುಗಳಿಂದಾಗಿಯೇ ದೇಶದ ಆರ್ಥಿಕ ಅಭಿವೃದ್ಧಿ ಕುಂಠಿತವಾಗಿದೆ. ಸದೃಢ ಸಮಾಜ ನಿರ್ಮಾಣಕ್ಕೆ ದೇಶವನ್ನು ಭ್ರಷ್ಟಾಚಾರ ಮುಕ್ತಗೊಳಿಸುವುದು ಅತ್ಯಂತ ಅವಶ್ಯ. ಸಾರ್ವಜನಿಕರಿಗಾಗಿ ರೂಪಿಸಲಾಗುವ ಅನೇಕ ಯೋಜನೆಗಳು ಲಾನುಭವಿಗಳಿಗೆ ತಲುಪುತ್ತಿಲ್ಲ. ಇಂತಹ ಲೂಟಿಗಳನ್ನು ಮೊದಲು ಸರಿಪಡಿಸಬೇಕು ಎಂದರು. ಬಜೆಟ್‌ನಲ್ಲಿ ಘೋಷಣೆ ಮಾಡುವ ವಿವಿಧ ಯೋಜನೆಗಳಿಗೆ ಸರಕಾರ ಸಾವಿರಾರು ಕೋಟಿ ರೂ. ಅನುದಾನ ನೀಡುತ್ತಿದೆ.

ಆದರೆ ಇವುಗಳಲ್ಲಿ ಅರ್ಹರಿಗೆ ಸಿಗುತ್ತಿರುವುದು ಶೇ.20 ಮಾತ್ರ. ಇನ್ನುಳಿದ ಶೇ.80 ಭಾಗ ಭ್ರಷ್ಟಾಚಾರಕ್ಕೆ ಆಹಾರವಾಗುತ್ತಿದೆ. ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಇರುವ ಕಾನೂನುಗಳು ಸಮರ್ಪಕವಾಗಿ ಅನುಷ್ಠಾನ ಆಗದೇ ಇರುವುದರಿಂದ ಲೂಟಿ ಮಾಡುವುದನ್ನು ನಿಯಂತ್ರಿಸುವುದು ಕಷ್ಟವಾಗಿದೆ ಎಂದರು. ನಿವೃತ್ತ ಐಎಎಸ್ ಅಧಿಕಾರಿ ಟಿ.ಆರ್.ರಘುನಂದನ್ ಮಾತನಾಡಿ, ರಾಜ್ಯದಲ್ಲಿ ಪಾರದರ್ಶಕ ಕಾಯ್ದೆ ಜಾರಿಗೊಳಿಸಲಾಗಿದೆ. ಇವು ಟೆಂಡರ್ ಪ್ರಕ್ರಿಯೆಯಲ್ಲಿ ಮಾತ್ರ ಅನ್ವಯವಾಗುತ್ತದೆ. ಹೀಗಾಗಿ ಭ್ರಷ್ಟಾಚಾರಗಳೆಲ್ಲವೂ ಟೆಂಡರ್‌ನಿಂದ ಮೊದಲು ಹಾಗೂ ನಂತರದಲ್ಲಿ ನಡೆಯುತ್ತದೆ. ಕಾಮಗಾರಿ ಅಥವಾ ಯೋಜನೆಯ ಅನುಷ್ಠಾನದ ಎಲ್ಲ ಹಂತದಲ್ಲಿ ಕಾಯ್ದೆ ಅನ್ವಯವಾಗುವುದಿಲ್ಲ. ಇಂತಹ ವಿಚಾರಗಳು ಬದಲಾಗಬೇಕು ಎಂದರು. ಕಾರ್ಯಕ್ರಮದಲ್ಲಿ ನಿವೃತ್ತ ಐಪಿಎಸ್ ಅಧಿಕಾರಿ ಶ್ರೀಕುಮಾರ್, ಲಂಚ ಮುಕ್ತ ಕರ್ನಾಟಕ ನಿರ್ಮಾಣ ವೇದಿಕೆ ಅಧ್ಯಕ್ಷ ರವಿ ಕೃಷ್ಣಾರೆಡ್ಡಿ, ವೆಂಕಟೇಶ್ ಪ್ರಸಾದ್, ಸುನಿಲ್‌ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

ಇಂದಿನ ದಿನದಲ್ಲಿ ಮನುಷ್ಯನಿಗೆ ಭಯ ಎಂಬುದೇ ಇಲ್ಲವಾಗಿದೆ. ಹಿಂದಿನ ಕಾಲದಲ್ಲಿ ಜನರು ಅವಿದ್ಯಾವಂತರಾಗಿದ್ದರೂ, ದೇವರು ಹಾಗೂ ಸಮಾಜಕ್ಕೆ ಹೆದರುತ್ತಿದ್ದರು. ಕೆಟ್ಟ ಕೆಲಸ ಮಾಡಿದರೆ ಸಮಾಜದಿಂದ ತಿರಸ್ಕೃತರಾಗುವ ಭೀತಿಯಿಂದ ಬದುಕುತ್ತಿದ್ದರು. ವಿದ್ಯಾವಂತರಾಗಿರುವ ಇಂದಿನ ಜನಾಂಗ ಮಾನವೀಯ ಮೌಲ್ಯಗಳನ್ನು ಮರೆತು ಕೆಲಸ ಮಾಡುತ್ತಿರುವುದು ಬೇಸರದ ಸಂಗತಿ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X