ಬೈಕ್‌ಗಳ ನಡುವೆ ಢಿಕ್ಕಿ: ವಿದ್ಯಾರ್ಥಿ ಸಾವು

ಬೆಂಗಳೂರು, ಆ.5: ಎರಡು ಬೈಕ್‌ಗಳ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿ ಬಿಬಿಎಂ ವಿದ್ಯಾರ್ಥಿಯೊಬ್ಬ ಮೃತಪಟ್ಟರೆ, ಇನ್ನಿಬ್ಬರು ಗಾಯಗೊಂಡಿರುವ ಘಟನೆ ಶ್ರೀನಿವಾಸ್ ನಗರದಲ್ಲಿ ತಡರಾತ್ರಿ ನಡೆದಿದೆ.
ಮೃತನನ್ನು ಎನ್.ಆರ್.ಕಾಲನಿ ನಿವಾಸಿ ನಿಖಿಲ್‌ಕುಮಾರ್(19) ಎಂದು ಗುರುತಿಸಲಾಗಿದೆ. ಗಾಯಗೊಂಡಿರುವ ಇನ್ನಿಬ್ಬರನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಎನ್.ಆರ್.ಕಾಲನಿಯಿಂದ ಬೈಕ್‌ನಲ್ಲಿ ನಿಖಿಲ್‌ಕುಮಾರ್ ಶುಕ್ರವಾರ ತಡರಾತ್ರಿ ಹೆಲ್ಮೆಟ್ ಹಾಕದೆ ವೇಗವಾಗಿ ಹೋಗುತ್ತಿದ್ದು, ಮಾರ್ಗ ಮಧ್ಯೆ ಶ್ರೀನಿವಾಸ್ ನಗರದ 80 ಅಡಿ ರಸ್ತೆಯಲ್ಲಿ ಎದುರಿಗೆ ಬಂದ ಬೈಕ್‌ಗೆ ಢಿಕ್ಕಿ ಹೊಡೆದು ಕೆಳಗೆ ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನಿಬ್ಬರು ಗಾಯಗೊಂಡಿದ್ದಾರೆ. ಈ ಮೊಕದ್ದಮೆ ದಾಖಲಿಸಿಕೊಂಡಿರುವ ಬಸವನಗುಡಿ ಸಂಚಾರ ಠಾಣಾ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
Next Story





