Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸರಕಾರಿ ನೌಕರರಿಂದ ಸಮಯ ಪಾಲನೆ, ಶಿಸ್ತಿಗೆ...

ಸರಕಾರಿ ನೌಕರರಿಂದ ಸಮಯ ಪಾಲನೆ, ಶಿಸ್ತಿಗೆ ಆದ್ಯತೆ: ವೆಂಕಟೇಶ್ ನಾಯ್ಕ

ವಾರ್ತಾಭಾರತಿವಾರ್ತಾಭಾರತಿ6 Aug 2017 4:34 PM IST
share
ಸರಕಾರಿ ನೌಕರರಿಂದ ಸಮಯ ಪಾಲನೆ, ಶಿಸ್ತಿಗೆ ಆದ್ಯತೆ: ವೆಂಕಟೇಶ್ ನಾಯ್ಕ

ಉಡುಪಿ, ಆ.6: ಸರಕಾರಿ ನೌಕರರು ಸಮಯ ಪಾಲನೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಶಿಸ್ತಿನಿಂದ ಕರ್ತವ್ಯ ನಿರ್ವಹಿಸಬೇಕು. ಅಶಿಸ್ತಿನೊಂದಿಗೆ ಯಾವುದೇ ಸಂದರ್ಭ ದಲ್ಲಿ ರಾಜಿ ಮಾಡಿಕೊಳ್ಳಬಾರದು ಎಂದು ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ವೆಂಕಟೇಶ್ ನಾಯ್ಕ ತಿಳಿಸಿದ್ದಾರೆ.

ಉಡುಪಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯಾಲಯ ಹಾಗೂ ವಕೀಲರ ಸಂಘಗಳ ಸಂಯುಕ್ತ ಆಶ್ರಯದಲ್ಲಿ ಉಡುಪಿ ಜಿಲ್ಲಾ ನ್ಯಾಯಾ ಲಯಗಳ ಸಂಕೀರ್ಣದದಲ್ಲಿ ರವಿವಾರ ಆಯೋಜಿಸಲಾದ ಮೂಲ ಭೂತ ಕರ್ತವ್ಯಗಳು, ಸರಕಾರಿ ನೌಕರರ ಜವಾಬ್ದಾರಿಗಳು, ದೈನಂದಿನ ಕರ್ತವ್ಯ ನಿರ್ವಹಿಸುವ ಸಂದರ್ಭದಲ್ಲಿ ಸರಕಾರಿ ನೌಕರರು ಎದುರಿಸಬೇಕಾದ ಸಮಸ್ಯೆಗಳು ಹಾಗೂ ಪರಿಹಾರ ಕುರಿತು ಒಂದು ದಿನದ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.

ಯಾವುದೇ ಕೆಲಸದಲ್ಲಿ ಹೆಚ್ಚಿನ ಅನುಭವಗಳಿಸುವುದರಿಂದ ಕಾರ್ಯ ನಿರ್ವ ಹಣೆಯಲ್ಲಿ ದಕ್ಷತೆ ಹೆಚ್ಚಾಗಲಿದ್ದು, ಜ್ಞಾನ ವೃದ್ದಿಯಾಗುತ್ತದೆ. ಈ ನಿಟ್ಟಿನಲ್ಲಿ ತರಬೇತಿಗಳು ಹೆಚ್ಚಿನ ಅನುಭವಗಳನ್ನು ನೀಡುತ್ತವೆ. ಕಾಲಕಾಲಕ್ಕೆ ನೀಡುವ ತರಬೇತಿಗಳಿಂದ ನೌಕರರಲ್ಲಿ ಕಾರ್ಯ ಕ್ಷಮತೆ ಹೆಚ್ಚಾಗುತ್ತದೆ. ಇದರಿಂದ ಹೊಸ ದಾಗಿ ನೇಮಕಗೊಂಡ ನೌಕರರಿಗೆ ಉತ್ತಮ ತರಬೇತಿ ೊರೆಯಲಿದೆ ಎಂದು ಅವರು ತಿಳಿಸಿದರು.

ಅಧ್ಯಕ್ಷತೆಯನ್ನು ವಕೀಲರ ಸಂಘದ ಅಧ್ಯಕ್ಷ ರತ್ನಾಕರ ಶೆಟ್ಟಿ ವಹಿಸಿದ್ದರು. ಕುಂದಾಪುರ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಪ್ರಕಾಶ್, ಹಿರಿಯ ಸಿವಿಲ್ ನ್ಯಾಯಧೀಶೆ ಲತಾ, ಲೋಕೋಪಯೋಗಿ ಇಲಾಖೆಯ ಸಹಾಯಕ ಇಂಜಿನಿಯರ್ ಡಿ.ವಿ.ಹೆಗ್ಡೆ, ಜಿಲ್ಲಾ ನ್ಯಾಯಾಲಯದ ಮುಖ್ಯ ಆಡಳಿತಾಧಿ ಕಾರಿ ವಿಜಯಲಕ್ಷ್ಮಿ ಉಪಸ್ಥಿತರಿದ್ದರು. ಶಿರಸ್ತೆದಾರ್ ಶಿವಪ್ಪ ಸ್ವಾಗತಿಸಿದರು.

ಗುರಿ ಮೀರಿದ ಸಾಧನೆ: ಉಡುಪಿ ಪ್ರಥಮ

ಇಡೀ ರಾಜ್ಯದಲ್ಲಿ ಹೆಚ್ಚಿನ ಸಂಖ್ಯೆಯ ಪ್ರಕರಣಗಳನ್ನು ಉಡುಪಿ ಜಿಲ್ಲೆಯಲ್ಲಿ ಶೀಘ್ರವಾಗಿ ವಿಲೇವಾರಿ ಮಾಡಲಾಗುತ್ತಿದ್ದು, ಉಚ್ಛ ನ್ಯಾಯಾಯಲವು ಜಿಲ್ಲಾ ನ್ಯಾಯಾಲಯಗಳಿಗೆ ನಿಗಧಿಗೊಳಿಸಿರುವ 10 ಗುರಿಯ ಪ್ರಮಾಣದ ಬದಲು ಉಡುಪಿಯಲ್ಲಿ 16 ಪ್ರಮಾಣದಲ್ಲಿ ಕಾರ್ಯ ಸಾಧನೆ ಮಾಡಲಾಗುತ್ತಿದೆ. ಈ ಮೂಲಕ ಉಡುಪಿ ಇಡೀ ರಾಜ್ಯದಲ್ಲೇ ಪ್ರಥಮ ಸ್ಥಾನ ಪಡೆದಿದೆ. ಜಡ್ಜ್ ಮೆಂಟ್‌ಗಳ ಅಪ್ ಲೋಡಿಂಗ್ ಹಾಗೂ ಅನ್ ಡೀಡ್ ಕೇಸ್‌ನಲ್ಲಿಯೂ ಸಹ ಉಡುಪಿ ಪ್ರಥಮ ಸ್ಥಾನದಲ್ಲಿದೆ. ಜಿಲ್ಲೆಯಲ್ಲಿ 13 ಜನ ನ್ಯಾಯಾಧೀಶರಿದ್ದು, 20 ಮಂದಿಯ ಕಾರ್ಯಗಳನ್ನು ಅವರು ನಿರ್ವಹಿಸುತ್ತಿದ್ದಾರೆ ಎಂದು ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ವೆಂಕಟೇಶ್ ನಾಯ್ಕ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X