Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪಾದೂರು-ತೋಕೂರು ಪೈಪ್‌ಲೈನ್ ಕಾಮಗಾರಿಗೆ...

ಪಾದೂರು-ತೋಕೂರು ಪೈಪ್‌ಲೈನ್ ಕಾಮಗಾರಿಗೆ ತಡೆ

ವಾರ್ತಾಭಾರತಿವಾರ್ತಾಭಾರತಿ6 Aug 2017 6:25 PM IST
share
ಪಾದೂರು-ತೋಕೂರು ಪೈಪ್‌ಲೈನ್ ಕಾಮಗಾರಿಗೆ ತಡೆ

ಕಾಪು, ಆ. 6: ಪಾದೂರು-ತೋಕೂರಿನಿಂದ ಪೈಪ್‌ಲೈನ್ ಕಾಮಗಾರಿಯ ವೇಳೆ ಹಲವಾರು ಮನೆಗಳಿಗೆ ಹಾನಿಯಾಗಿದ್ದು, ಸಂತ್ರಸ್ಥರಿಗೆ ಪರಿಹಾರ ಧನ ವಿತರಿಸಲಿಲ್ಲ ಎಂದು ಆರೋಪಿಸಿ ರವಿವಾರ ಪೈಪ್‌ಲೈನ್ ಕಾಮಗಾರಿಗೆ ಸ್ಥಳೀಯರು ತಡೆಯೊಡ್ಡಿದ ಘಟನೆ ನಡೆದಿದೆ.

ಪಾದೂರಿನಲ್ಲಿರುವ ಐಎಸ್‌ಪಿಆರ್‌ಎಲ್ ಕಚ್ಚಾ ತೈಲ ಸಂಗ್ರಹಾಗಾರಕ್ಕಾಗಿ ಪಾದೂರು - ತೋಕೂರುವರೆಗಿನ ಪೈಪ್‌ಲೈನ್ ಕಾಮಗಾರಿ ನಡೆಯುತ್ತಿದೆ. ಆದರೆ ಈ ವೇಳೆ ಭೂಗತ ಕಲ್ಲುಗಳನ್ನು ಸ್ಫೋಟಿಸುವಾಗ ನಿಜವಾದ ಸಂತ್ರಸ್ತರನ್ನು ಬಿಟ್ಟು ಬೇರೆಯವರಿಗೆ ಪರಿಹಾರ ಧನವನ್ನು ವಿತರಿಸಲಾಗಿದೆ. ಈ ಕ್ರಮ ಸರಿಯಲ್ಲ, ನೈಜ ಸಂತ್ರಸ್ತರಿಗೆ ಪರಿಹಾರ ಧನವನ್ನು ಕೂಡಲೇ ವಿತರಿಸದೆ ಕಾಮಗಾರಿ ನಡೆಸಲು ಬಿಡುವುದಿಲ್ಲ ಎಂದು ಸ್ಥಳೀಯ ಸಂತ್ರಸ್ತರು ಪಟ್ಟು ಹಿಡಿದರು.

ಕಾಪು ಪುರಸಭೆಯ ವಿಪಕ್ಷ ನಾಯಕ ಅರುಣ್ ಶೆಟ್ಟಿ ಪಾದೂರು ಮಾತನಾಡಿ, ಪಾದೂರು- ತೋಕೂರುವರೆಗಿನ ಪೈಪ್‌ಲೈನ್ ಕಾಮಗಾರಿಯ ಸಂದರ್ಭ ಬಂಡೆ ಸ್ಫೋಟದಿಂದ ಸಾಕಷ್ಟು ಮನೆಗೆ ಹಾನಿ ಉಂಟಾಗಿದೆ. ಈ ಹಿಂದೆಯೂ ನಾವು ಪ್ರತಿಭಟನೆ ನಡೆಸಿ ಕಾಮಗಾರಿಯನ್ನು ನಿಲ್ಲಿಸಿದ್ದೇವೆ. ಕಳತ್ತೂರು ಮತ್ತು ಪಾದೂರು ಗ್ರಾಮದ 114ಮಂದಿ ಮನೆಯವರಿಗೆ ಬಂಡೆ ಒಡೆಯುವುದರಿಂದ ತೊಂದರೆ ಉಂಟಾಗಿತ್ತು. ಈ ಸಂದರ್ಭ ಎಲ್ಲರ ಮನೆಗಳೂ ಬಿರುಕು ಬಿಟ್ಟಿದೆ. ಈ ಬಗ್ಗೆ ನಾವು ಸ್ಥಳೀಯ ಶಾಸಕ ವಿನಯಕುಮಾರ್ ಸೊರಕೆ ಹಾಗೂ ಸಂಸದೆ ಶೋಭಾ ಕರಂದ್ಲಾಜೆಯವರಿಗೆ ಮನವಿ ಮಾಡಿದ್ದೆವು. ಜಿಲ್ಲಾಧಿಕಾರಿಯವರಿಗೆ ಶಾಸಕರು ಆದೇಶ ಮಾಡಿದ್ದರೂ, ಅವರು ಈ ತನಕ ಯಾವುದೇ ಪರಿಹಾರ ನೀಡಿಲ್ಲ. ಈ ಹಾನಿಗಳ ಬಗ್ಗೆ ನೈಜ ಸಂತಸ್ಥರಿಗೆ ಪರಿಹಾರ ಸಿಕ್ಕಿಲ್ಲ. ಕಳೆದ ಒಂದು ತಿಂಗಳಿನಿಂದ ನಾವು ನಿರಂತರವಾಗಿ ಅಧಿಕಾರಿಗಳನ್ನು ಸಂಪರ್ಕಿಸುತ್ತಿದ್ದರೂ, ಯಾವುದೇ ಸ್ಪಂದನೆ ಸಿಕ್ಕಿಲ್ಲ. ಆದ್ದರಿಂದ ನಾವು ಜನಗಾಗೃತಿ ಸಮಿತಿಯನ್ನು ರಚಿಸಿಕೊಂಡು ಈ ಮೂಲಕ ಪ್ರತಿಭಟನೆ ನಡೆಸುತ್ತಿದ್ದೇವೆ. ನಮಗೆ ಪರಿಹಾರ ಧನ ಸಿಗುವ ತನಕ ಪ್ರತಿಭಟನೆ ನಡೆಸಲಿದ್ದೇವೆ ಎಂದರು.

ಸ್ಥಳೀಯರ ಪ್ರತಿಭಟನೆ ತೀವ್ರವಾಗುತ್ತಿರುವುದನ್ನು ಅರಿತ ಕಂಪೆನಿಯ ಅಧಿಕಾರಿಗಳು ಕಾಮಗಾರಿ ಸ್ಥಗಿತಗೊಳಿಸಿದರು. ಕಂಪನಿಯ ಸ್ಥಳೀಯ ಉಸ್ತುವಾರಿ ವಹಿಸಿದ್ದ ಉತ್ತರ ಪ್ರದೇಶ ಮೂಲದ ಓಂ ಪ್ರಕಾಶ್ ಚೌಬೆ, ಕಾಮಗಾರಿಗೆ ತಡೆ ಉಂಟು ಮಾಡಿದ ಬಗ್ಗೆ ನಾವು ಮೇಲಾಧಿಕಾರಿಯವರಿಗೆ ಮಾಹಿತಿ ನೀಡಿದ್ದೇವೆ. ಸ್ಥಳೀಯರ ಸಮಸ್ಯೆಯ ಬಗ್ಗೆ ಮೇಲಾಧಿಕಾರಿಗಳಿಗೆ ತಿಳಿಸುವುದಾಗಿ ಹೇಳಿದರು.

ಸಂತಸ್ಥೆ ವೀಣಾ ತಂತ್ರಿಯವರು ಮಾತನಾಡಿ, ನಮಗೆ ಕಂಪನಿ ಮೋಸ ಮಡಿದೆ. ನೈಜ ಸಂತಸ್ತರನ್ನು ಗುರುತಿಸದೆ, ಸಂತಸ್ತರಲ್ಲದವರಿಗೆ ಪರಿಹಾರ ಧನವನ್ನು ವಿತರಿಸಿದ್ದಾರೆ. ನೈಜ ಸಂತ್ರಸ್ತರಿಗೆ ಶೀಘ್ರವಾಗಿ ಪರಿಹಾರ ಧನ ನೀಡದಿದ್ದಲ್ಲಿ ಕಾಮಗಾರಿ ಮುಂದುವರಿಸಲು ಬಿಡುವುದಿಲ್ಲ ಎಂದಿದ್ದಾರೆ.

ಪ್ರತಿಭಟನೆಯಲ್ಲಿ ಪಾದೂರು ಗ್ರಾಮ ಪಂಚಾಯತ್ ಅಧ್ಯಕ್ಷ ಸಂದೀಪ್ ರಾವ್, ಉಪಾಧ್ಯಕ್ಷೆ ಸಹನಾ ತಂತ್ರಿ, ವಿಜಯ ತಂತ್ರಿ, ಗಣೇಶ್ ಶೆಟ್ಟಿ, ಕವಿತಾ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X