Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ನಿರ್ಧಾರದ ಜಾಗದಲ್ಲಿ ಮಹಿಳೆಗಿರಲಿ ಸ್ಥಾನ:...

ನಿರ್ಧಾರದ ಜಾಗದಲ್ಲಿ ಮಹಿಳೆಗಿರಲಿ ಸ್ಥಾನ: ದು.ಸರಸ್ವತಿ

ವಾರ್ತಾಭಾರತಿವಾರ್ತಾಭಾರತಿ6 Aug 2017 7:40 PM IST
share

 ಬೆಂಗಳೂರು, ಆ.6: ಯಾವುದೇ ಜನಪರ ಚಳವಳಿಗಳಲ್ಲಿ ನಿರ್ಧಾರ ತೆಗೆದುಕೊಳ್ಳುವ ಸ್ಥಾನದಲ್ಲಿ ಮಹಿಳೆಗೆ ಹೆಚ್ಚಿನ ಸ್ಥಾನವಿರಬೇಕು. ಆಗ ಮಾತ್ರ ಆ ಚಳವಳಿ ಚಲನಶೀಲತೆಯನ್ನು ಪಡೆದುಕೊಳ್ಳಲು ಸಾಧ್ಯವೆಂದು ಕವಿಯತ್ರಿ ದು.ಸರಸ್ವತಿ ಆಶಯ ವ್ಯಕ್ತಪಡಿಸಿದ್ದಾರೆ.

ರವಿವಾರ ಅಖಿಲ ಭಾರತ ಪ್ರಗತಿಪರ ವಿದ್ಯಾರ್ಥಿ ಸಂಘಟನೆಗಳ ಒಕ್ಕೂಟ ನಗರದ ಶಿಕ್ಷಕರ ಸದನದಲ್ಲಿ ಆಯೋಜಿಸಿದ್ದ ‘ವಿದ್ಯಾರ್ಥಿ ಹೋರಾಟಗಳ ರಾಷ್ಟ್ರೀಯ ಸಮಾವೇಶ-2017 ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಪ್ರಗತಿ ಹಾಗೂ ದಲಿತಪರ ಚಳವಳಿಯಲ್ಲಿ ಮಹಿಳೆಯರಿಗೆ ಹೆಚ್ಚಿನ ಆದ್ಯತೆ ಕೊಡಬೇಕೆಂದು ಡಾ.ಬಿ.ಆರ್.ಅಂಬೇಡ್ಕರ್‌ರವರ ಮೂಲ ಆಶಯವಾಗಿತ್ತು. ಆದರೆ, ಇಲ್ಲಿಯವರೆಗೂ ಈ ಅಂಶವನ್ನು ಯಾರೂ ಗಂಭೀರವಾಗಿ ತೆಗೆದುಕೊಂಡಿಲ್ಲ. ಇನ್ನು ಮುಂದಾದರು ಈ ಬಗ್ಗೆ ಚಿಂತನೆ ನಡೆಸಬೇಕೆಂದು ಅವರು ಹೇಳಿದರು.

  ಮಹಿಳೆಯನ್ನು ಚಳವಳಿಯ ಭಾಗವಾಗಿಸಿಕೊಳ್ಳುವುದು ಅಷ್ಟು ಸುಲಭವಲ್ಲ. ಪುರುಷ ಸಂಘಟಕರು ಹಾಗೂ ಸಂಘಟನೆಯ ಸ್ವರೂಪದವನ್ನೇ ಬದಲಾಯಿಸಬೇಕಾಗುತ್ತದೆ. ಮಹಿಳೆಗೆ ಸೂಕ್ತವಾಗುವಂತಹ ಸಮಯದಲ್ಲೇ ಸಂಘಟನೆಯ ಸಭೆಗಳನ್ನು ನಡೆಸಬೇಕಾಗುತ್ತದೆ. ಸಂಘಟನೆಯಲ್ಲಿರುವ ಮಂದಿ ತಮ್ಮ ಪತಿ, ಪತ್ನಿಯನ್ನು ಗೆಳೆಯರಂತೆ ನೋಡಿಕೊಂಡು ಪರಸ್ಪರ ಸಹಕರಿಸುತ್ತಾ ಜೀವನ ನಡೆಸಬೇಕು. ಆಗ ಮಹಿಳೆಯರು ಸಂಘಟನೆಯಲ್ಲಿ ಸಕ್ರೀಯವಾಗಿ ಭಾಗವಹಿಸಲು ಸಾಧ್ಯವಾಗುತ್ತದೆ ಎಂದು ಅವರು ಹೇಳಿದರು.

ವಿದ್ಯಾರ್ಥಿ ಸಂಘಟನೆಯ ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಕೆಲವೊಂದು ಕಠಿಣ ನಿರ್ಧಾರಗಳನ್ನು ತೆಗೆದುಕೊಂಡು ಮಾದರಿ ಸಮಾಜವನ್ನು ನಿರ್ಮಿಸಬೇಕಾಗುತ್ತದೆ. ಯಾವುದೇ ಕಾರಣಕ್ಕೂ ವರದಕ್ಷಿಣೆ ತೆಗೆದುಕೊಳ್ಳುವುದಿಲ್ಲ. ಯಾವುದೇ ಹುಡುಗಿಯ, ಮಹಿಳೆಯ ದೇಹವನ್ನು ಅವರ ಅನುಮತಿಯಿಲ್ಲದೆ ಮುಟ್ಟಬಾರದು ಎಂದು ಶಪತ ಮಾಡಬೇಕು. ಆ ಮೂಲಕ ಇತರರಿಗೆ ಮಾದರಿಯಾಗಬೇಕು ಎಂದು ಅವರು ಹೇಳಿದರು.

ಜನವಾದಿ ಸಂಘಟನೆಯ ನಾಯಕಿ ಕೆ.ನೀಲಾ ಮಾತನಾಡಿ, ಉತ್ತರ ಕರ್ನಾಟಕ ಭಾಗದ ಕೂಲಿಕಾರ್ಮಿಕರ, ದಲಿತರ, ಮಹಿಳೆಯರ ಬದುಕು ತೀರ ಶೋಚನೀಯವಾಗಿದೆ. ಹೀಗಾಗಿ ಅವರ ಮಕ್ಕಳು ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿ ಸಂಘಟನೆಗಳು ಆ ಭಾಗದ ಕಡೆಗೆ ಹೆಚ್ಚಿನ ಗಮನ ಕೊಡಬೇಕು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಶಿಕ್ಷಣ ತಜ್ಞ ಪ್ರೊ.ಹರಗೋಪಾಲ್, ಹಿರಿಯ ಸಂಶೋಧಕ ರಹಮತ್ ತರಿಕೆರೆ, ಎಸ್‌ಐಒ ಸಂಘಟನೆಯ ಮುಖಂಡ ರಫೀಕ್ ಸೇರಿದಂತೆ ಹಲವು ಸಂಘಟನೆಯ ಮುಖಂಡರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X