Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಜಿಲ್ಲೆಗೆ ನೀರು ಹರಿಸದಿದ್ದರೆ ಸಿ.ಎಂ.ಗೆ...

ಜಿಲ್ಲೆಗೆ ನೀರು ಹರಿಸದಿದ್ದರೆ ಸಿ.ಎಂ.ಗೆ ಕಪ್ಪು ಬಾವುಟ ಪ್ರದರ್ಶನ

ವಾರ್ತಾಭಾರತಿವಾರ್ತಾಭಾರತಿ7 Aug 2017 6:34 PM IST
share
ಜಿಲ್ಲೆಗೆ ನೀರು ಹರಿಸದಿದ್ದರೆ ಸಿ.ಎಂ.ಗೆ ಕಪ್ಪು ಬಾವುಟ ಪ್ರದರ್ಶನ

ತುಮಕೂರು, ಆ.7: ಆಗಸ್ಟ್ 17ರಂದು ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ನೆರವೇರಿಸಲು ನಗರಕ್ಕೆ ಆಗಮಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಜಿಲ್ಲೆಗೆ ಹೇಮಾವತಿ ನೀರು ಹರಿಸಿ ನಂತರ ತುಮಕೂರಿಗೆ ಬರಲಿ, ಇಲ್ಲದಿದ್ದರೆ ಮುಖ್ಯಮಂತ್ರಿಗಳಿಗೆ ಕಪ್ಪುಬಾವುಟ ಪ್ರದರ್ಶಿಸುವುದಾಗಿ ಮಾಜಿ ಸಚಿವ ಸೊಗಡು ಶಿವಣ್ಣ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಕಳೆದ ಒಂದು ತಿಂಗಳಿನಿಂದ ನೀರಿಗಾಗಿ ತುಮಕೂರಿನಲ್ಲಿ ವಿವಿಧ ರೀತಿಯ ಹೋರಾಟಗಳು ನಡೆಯುತ್ತಿದ್ದರೂ ಸರಕಾರ ಕಿವಿಗೊಡುತ್ತಿಲ್ಲ. ಆದರೆ ಹೆಚ್.ಡಿ.ದೇವೇಗೌಡ ಒಂದು ದಿನ ಧರಣಿ ನಡೆಸಿದ್ದಕ್ಕೆ ಬಲಮೇಲ್ದಂಡೆ ನಾಲೆಗೆ ಒಂದು ಟಿ.ಎಂ.ಸಿ ನೀರು ಹರಿಸಲಾಗುತ್ತಿದೆ. ಇಷ್ಟಾದರೂ ಜಿಲ್ಲೆಯ ಯಾವೊಬ್ಬ ಶಾಸಕರು ಬಾಯಿ ಬಿಡುತ್ತಿಲ್ಲ. ನಿಜಕ್ಕೂ ಇದು ಬೇಸರದ ಸಂಗತಿ ಎಂದರು.

ಜಿಲ್ಲೆಗೆ ಹೇಮಾವತಿ ಜಲಾಶಯದಿಂದ ನೀರು ಹರಿಸಲು ಕ್ರಮಕೈಗೊಳ್ಳದೆ ಮುಖ್ಯಮಂತ್ರಿಗಳಿಗೆ ಜಿಲ್ಲೆಗೆ ಬರುವ ಯಾವುದೇ ನೈತಿಕತೆ ಇಲ್ಲ. ಕೂಡಲೇ ತುಮಕೂರು ಜಿಲ್ಲೆ ಹಾಗೂ ನಗರಕ್ಕೆ ಕುಡಿಯಲು ನೀರು ಒದಗಿಸಿ ನಂತರ ಜಿಲ್ಲೆಗೆ ಬನ್ನಿ ಇಲ್ಲವಾದರೆ ಕಪ್ಪು ಬಾವುಟ ಪ್ರದರ್ಶಿಸಲಾಗುವುದು. ಕುಡಿಯುವ ನೀರಿನ ಬಗ್ಗೆ ಸರಕಾರದ ಮೇಲೆ ಒತ್ತಡ ಹೇರಬೇಕಾದ ಜಿಲ್ಲಾ ಉಸ್ತುವಾರಿ ಸಚಿವರು ಸತ್ತು ಹೋಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಹಾಸನದಲ್ಲಿ ಮಾಜಿ ಪ್ರಧಾನಿ ದೇವೇಗೌಡರು ನೀರು ಹರಿಸುವಂತೆ ಧರಣಿ ಮಾಡಿದ್ದರು. ಇದಕ್ಕೆ ಸ್ಪಂದಿಸಿದ ಮುಖ್ಯಮಂತ್ರಿಗಳು ಒಂದು ಟಿಎಂಸಿ ನೀರು ಹರಿಸುವಂತೆ ಸೂಚನೆ ನೀಡಿದ್ದರು. ಅದೇ ರೀತಿ ನಮ್ಮ ಜಿಲ್ಲೆಗೂ ನೀರು ಹರಿಸಬೇಕು ಎಂದ ಅವರು, ಈಗಾಗಲೇ ಜಲಾಶಯದಲ್ಲಿ 17 ಟಿಎಂಸಿ ನೀರು ಸಂಗ್ರಹವಾಗಿದೆ. ಅದರಲ್ಲಿ ಒಂದು ಟಿಎಂಸಿ ಬಲದಂಡೆಗೆ, 2 ಟಿಎಂಸಿ ಕಾವೇರಿ ಕೊಳ್ಳಕ್ಕೆ, ಒಂದು ಟಿಎಂಸಿ ತಮಿಳುನಾಡಿಗೆ ನೀರು ಹರಿಯುತ್ತಿದೆ ಹಾಗೂ 5 ಟಿಎಂಸಿ ಡೆಡ್ ಸ್ಟೋರೆಜ್‌ನಲ್ಲಿದ್ದರೆ ಇನ್ನುಳಿದ 8 ಟಿಎಂಸಿ ನೀರನ್ನು ಎಲ್ಲಿಗೆ ಹರಿಸುತ್ತೀರಿ ಎಂದು ಪ್ರಶ್ನಿಸಿದ  ಅವರು, ಡ್ಯಾಂ ನಲ್ಲಿ ಸಂಪೂರ್ಣ ನೀರು ಖಾಲಿಯಾದ ಮೇಲೆ ಮಾತನಾಡಿ ಪ್ರಯೋಜನವಿಲ್ಲ. ಹಾಗಾಗಿ ಜನರು, ಜನಪ್ರತಿನಿಧಿಗಳು, ಸಂಘ ಸಂಸ್ಥೆಗಳು ಎಚ್ಚೆತ್ತುಕೊಳ್ಳಬೇಕಾಗಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಮುಖಂಡರಾದ ಎಂ.ಬಿ.ನಂದೀಶ್,ಗೋಪಾಲಕೃಷ್ಣ ,ಪ್ರಕಾಶ್, ಕೆ.ಪಿ.ಮಹೇಶ್, ಬಸವರಾಜ್, ಶಬ್ಬೀರ್ ಅಹಮ್ಮದ್, ಮಂಜುನಾಥ್ ಮತ್ತಿತರರು ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X