Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ​ಕಸ ವಿಲೇವಾರಿಗೆ ಬರಡಿ ಗ್ರಾಮಸ್ಥರ ವಿರೋಧ

​ಕಸ ವಿಲೇವಾರಿಗೆ ಬರಡಿ ಗ್ರಾಮಸ್ಥರ ವಿರೋಧ

ವಾರ್ತಾಭಾರತಿವಾರ್ತಾಭಾರತಿ7 Aug 2017 6:40 PM IST
share
​ಕಸ ವಿಲೇವಾರಿಗೆ ಬರಡಿ ಗ್ರಾಮಸ್ಥರ ವಿರೋಧ

ಮಡಿಕೇರಿ, ಆ.7 : ಬರಡಿ ಗ್ರಾಮದ ಜನವಸತಿಯ ಪ್ರದೇಶದ ಸಮೀಪದಲ್ಲೆ ಕಂದಾಯ ಇಲಾಖೆ ಗುರುತಿಸಿರುವ ಜಾಗದಲ್ಲಿ ನೆಲ್ಯಹುದಿಕೇರಿ ಗ್ರಾಮ ಪಂಚಾಯತ್ ತ್ಯಾಜ್ಯ ವಿಲೇವಾರಿಗೆ ಮುಂದಾಗಿರುವುದನ್ನು ತೀವ್ರವಾಗಿ ವಿರೋಧಿಸಿರುವ ಪಂಚಾಯತ್ 1 ಮತ್ತು 2ನೇ ವಾರ್ಡ್ ನಿವಾಸಿಗಳು, ಪ್ರತಿಭಟನೆ ನಡೆಸುವ ಎಚ್ಚರಿಕೆ ನೀಡಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಗ್ರಾ.ಪಂ ಸದಸ್ಯರಾದ ವಿ.ಜಿ. ಯೋಗೇಶ್, ಬರಡಿ ಗ್ರಾಮದ 1 ಮತ್ತು 2ನೇ ವಾರ್ಡ್ ಹಾಗೂ ಗಿರಿಜನ ಕಾಲೋನಿಯ ಸಮೀಪದಲ್ಲೆ ನೆಲ್ಯಹುದಿಕೇರಿಯ ತ್ಯಾಜ್ಯ ವಿಲೇವಾರಿಗೆ ಕಂದಾಯ ಇಲಾಖೆ 80 ಸೆಂಟ್ ಜಾಗವನ್ನು ಗುರುತಿಸಿದೆ ಮತ್ತು ಈ ಜಾಗದಲ್ಲಿ ಕಸ ವಿಲೆೇವಾರಿಯ ಪ್ರಯತ್ನಗಳು ನಡೆಯುತ್ತಿದೆ. ಜನವಸತಿಯ ಬಳಿಯಲ್ಲೆ ತ್ಯಾಜ್ಯ ವಿಲೇವಾರಿಯಿಂದ ರೋಗ ರುಜಿನಗಳು ಹರಡುವ ಆತಂಕವಿದೆ. ಆದ್ದರಿಂದ ಜಿಲ್ಲಾಡಳಿತ ಮುಂದಿನ ಹತ್ತು ದಿನಗಳ ಒಳಗಾಗಿ ಈ ನಿರ್ಧಾರವನ್ನು ಬದಲಾಯಿಸಬೇಕು. ತಪ್ಪಿದಲ್ಲಿ ಗ್ರಾಮಸ್ಥರು ಒಗ್ಗೂಡಿ ಪ್ರತಿಭಟನೆಯನ್ನು ನಡೆಸಲಿದ್ದಾರೆ ಎಂದು ಎಚ್ಚರಿಕೆ ನೀಡಿದರು.

ನೆಲ್ಯಹುದಿಕೇರಿ ಪಟ್ಟಣದ 5 ಮತ್ತು 6ನೇ ವಾರ್ಡ್‌ಗಳಿಗೆ ಸಂಬಂಧಿಸಿದ ತ್ಯಾಜ್ಯವನ್ನು ಇದೀಗ ಬರಡಿಯಲ್ಲಿ ವಿಲೇವಾರಿ ಮಾಡುವ ಪ್ರಯತ್ನ ನಡೆಯುತ್ತಿದೆ. ಗ್ರಾಮ ವ್ಯಾಪ್ತಿಯಲ್ಲಿ ಹತ್ತಾರು ಏಕರೆ ಪೈಸಾರಿ ಜಾಗವನ್ನು ಅತಿಕ್ರಮಣ ಮಾಡಿಕೊಂಡಿರುವ ಪ್ರಕರಣಗಳಿದ್ದು, ಇಂತಹ ಜಾಗವನ್ನು ತೆರವುಗೊಳಿಸಿ ತ್ಯಾಜ್ಯ ವಿಲೆೇವಾರಿಗೆ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.

ಇದೀಗ ತ್ಯಾಜ್ಯ ವಿಲೇವಾರಿಗೆ ಗುರುತಿಸಿರುವ ಜಾಗದ ಪಕ್ಕದಲ್ಲೆ ಗ್ರಾಮ ಪಂಚಾಯ್ತಿಯ ಸಾರ್ವಜನಿಕ ಕೊಳವೆ ಬಾವಿ ಮತ್ತು ಕೆರೆ ಇದೆ. ಇದರೊಂದಿಗೆ ನೈಸರ್ಗಿಕವಾಗಿ ನೀರಿನ ಹರಿವು ಹಾಗೂ 15 ಮೀಟರ್ ಅಂತರದಲ್ಲೆ ಜನವಸತಿಯೂ ಇದೆ. ಇಂತಹ ಪ್ರದೇಶದಲ್ಲಿ ತ್ಯಾಜ್ಯ ವಿಲೆೇವಾರಿ ಮಾಡಿದಲ್ಲಿ ಕುಡಿಯುವ ನೀರು ಕಲುಷಿತಗೊಳ್ಳುವುದರೊಂದಿಗೆ ಅಲ್ಲಿನ ನಿವಾಸಿಗಳ ಆರೋಗ್ಯದ ಮೇಲೂ ದುಷ್ಪರಿಣಾಮ ಬೀರುತ್ತದೆ. ಈಗಾಗಲೇ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿದ್ದು, ವೈಜ್ಞಾನಿಕವಾಗಿ ಕಸ ವಿಲೇವಾರಿ ಮಾಡಲಾಗುವುದೆಂದು ಹೇಳಿದ್ದಾರೆ. ಯಾವುದೇ ರೀತಿಯ ಕಸ ವಿಲೇವಾರಿಗೂ ಬರಡಿ ಗ್ರಾಮದ ಜನವಸತಿ ಪ್ರದೇಶದಲ್ಲಿ ಅವಕಾಶ ನೀಡುವುದಿಲ್ಲವೆಂದು ತಿಳಿಸಿದ ವಿ.ಜಿ.ಲೋಕೇಶ್, ಪರ್ಯಾಯ ಜಾಗ ಗುರುತಿಸುವಂತೆ ಒತ್ತಾಯಿಸಿದರು.

ಗ್ರಾಮಸ್ಥರಾದ ಶಾಂತಮ್ಮ ಮಾತನಾಡಿ, ಬರಡಿಯ 1 ಮತ್ತು 2ನೇ ವಾರ್ಡ್‌ನಲ್ಲಿ 120ಕ್ಕೂ ಹೆಚ್ಚಿನ ಮನೆಗಳಿದ್ದು, ಪ್ರಸ್ತುತ ಈ ಮನೆಗಳ ಸಮೀಪ ಗುರುತಿಸಿರುವ ಜಾಗದಲ್ಲಿ ಕಸ ವಿಲೇವಾರಿಗೆ ಅವಕಾಶ ನೀಡುವುದಿಲ್ಲವೆಂದರು.
ಸುದ್ದಿಗೋಷ್ಠಿಯಲ್ಲಿ ಗ್ರಾಮಸ್ಥರಾದ ಸೈದಲವಿ, ಸಂತೋಷ್, ಲೀಲಾ ಶಿವಪ್ಪ, ಶಾಂತಮ್ಮ ಹಾಗೂ ಮಣಿ ಟಿ.ಆರ್. ಉಪಸ್ಥಿತರಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X