ರಾಜ್ಯ ತುಳು ಅಕಾಡಮಿ ಅಧ್ಯಕ್ಷರಾಗಿ ಎ.ಸಿ. ಭಂಡಾರಿ ನೇಮಕ
7 ಅಕಾಡಮಿ, 2 ಪ್ರಾಧಿಕಾರಗಳಿಗೆ ಅಧ್ಯಕ್ಷರನ್ನು ನೇಮಿಸಿ ಸರಕಾರದ ಆದೇಶ

ಮಂಗಳೂರು, ಆ. 7: ರಾಜ್ಯ ತುಳು ಅಕಾಡಮಿ ಅಧ್ಯಕ್ಷರಾಗಿ ದ.ಕ. ಜಿಲ್ಲಾ ಕಾಂಗ್ರೆಸ್ ನ ಮಾಜಿ ಅಧ್ಯಕ್ಷ, ಕಲೆ ಮತ್ತು ಸಾಂಸ್ಕೃತಿಕ ಕ್ಷೇತ್ರದ ಧುರೀಣ ಎ.ಸಿ. ಭಂಡಾರಿ ಅವರನ್ನು ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.
ಈ ಸಂದರ್ಭ 2 ಪ್ರಾಧಿಕಾರಗಳ ಅಧ್ಯಕ್ಷರನ್ನು ಹಾಗೂ ಏಳು ಅಕಾಡಮಿಗಳಿಗೆ ಅಧ್ಯಕ್ಷರನ್ನು ನೇಮಕ ಮಾಡಿದೆ.
ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಅಧ್ಯಕ್ಷರಾಗಿ ಡಾ.ಕೆ.ಮರುಳಸಿದ್ದಪ್ಪ, ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾಗಿ ಡಾ.ವಸುಂಧರಾ ಭೂಪತಿ, ಕರ್ನಾಟಕ ಸಾಹಿತ್ಯ ಅಕಾಡಮಿ ಅಧ್ಯಕ್ಷರಾಗಿ ಡಾ. ಅರವಿಂದ ಮಾಲಗತ್ತಿ, ಕರ್ನಾಟಕ ಜಾನಪದ ಅಕಾಡಮಿ ಅಧ್ಯಕ್ಷರಾಗಿ ಟಿ.ಟಾಕಪ್ಪ, ಕರ್ನಾಟಕ ಶಿಲ್ಪಕಲಾ ಅಕಾಡಮಿ ಅಧ್ಯಕ್ಷರಾಗಿ ಕಾಳಾಚಾರ್, ಕರ್ನಾಟಕ ನಾಟಕ ಅಕಾಡಮಿ ಅಧ್ಯಕ್ಷರಾಗಿ ಜೆ.ಲೋಕೇಶ್, ಕರ್ನಾಟಕ ಸಂಗೀತ ಅಕಾಡಮಿ ಅಧ್ಯಕ್ಷರಾಗಿ ಫಯಾಸ್ ಖಾನ್, ಕರ್ನಾಟಕ ಕೊಂಕಣಿ ಅಕಾಡಮಿ ಅಧ್ಯಕ್ಷರಾಗಿ ಆರ್.ಪಿ.ನಾಯಕ್ ರನ್ನು ನೇಮಕ ಮಾಡಿ ಸರಕಾರ ಆದೇಶ ಹೊರಡಿಸಿದೆ.






Next Story







