ಆ.9: ಕಾಂಗ್ರೆಸ್ ಕಚೇರಿಯಲ್ಲಿ ಕ್ವಿಟ್ ಇಂಡಿಯಾ ಕಾರ್ಯಕ್ರಮ
ಮಂಗಳೂರು, ಆ.7: ಕ್ವಿಟ್ ಇಂಡಿಯಾ ಕಾರ್ಯಕ್ರಮದ ಅಂಗವಾಗಿ ನಗರದಲ್ಲಿ ಆ.9ರಂದು ನಡೆಸಲು ಉದ್ದೇಶಿಸಿದ್ದ ಕಾಲ್ನಡಿಗೆ ಜಾಥಾವನ್ನು ಅನಿರೀಕ್ಷಿತ ಕಾರಣಗಳಿಂದ ರದ್ದುಪಡಿಸಲಾಗಿದೆ. ಆದರೆ, ಅಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಕ್ವಿಟ್ ಇಂಡಿಯಾ ಕಾರ್ಯಕ್ರಮ ನಡೆಯಲಿದೆ.
ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ, ಆಹಾರ ಸಚಿವ ಯು.ಟಿ.ಖಾದರ್, ಮುಖ್ಯ ಸಚೇತಕ ಐವನ್ ಡಿಸೋಜ, ಶಾಸಕರಾದ ಅಭಯಚಂದ್ರ ಜೈನ್, ವಸಂತ ಬಂಗೇರ, ಜೆ.ಆರ್ ಲೋಬೊ, ಮೊಯ್ದಿನ್ ಬಾವ, ಶಕುಂತಳಾ ಶೆಟ್ಟಿ ಹಾಗೂ ಮಾಜಿ ಶಾಸಕರು, ಮಾಜಿ ಸಂಸದರು, ಪಕ್ಷದ ರಾಜ್ಯ ಹಾಗೂ ಜಿಲ್ಲಾ ನಾಯಕರು ಭಾಗವಹಿಸಲಿದ್ದಾರೆ ಎಂದು ಡಿಸಿಸಿ ಅಧ್ಯಕ್ಷ ಹರೀಶ್ ಕುಮಾರ್ ತಿಳಿಸಿದ್ದಾರೆ.
Next Story





