Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮುಂಬೈ ಮಹಾನಗರಿಯಲ್ಲಿ ಬೃಹತ್ ಮರಾಠಾ...

ಮುಂಬೈ ಮಹಾನಗರಿಯಲ್ಲಿ ಬೃಹತ್ ಮರಾಠಾ ಮಾರ್ಚ್

ಶಿಕ್ಷಣ, ಉದ್ಯೋಗದಲ್ಲಿ ಮೀಸಲಾತಿಗಾಗಿ ಮರಾಠರ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ9 Aug 2017 5:59 PM IST
share
ಮುಂಬೈ ಮಹಾನಗರಿಯಲ್ಲಿ ಬೃಹತ್ ಮರಾಠಾ ಮಾರ್ಚ್

ಮುಂಬೈ, ಆ.9 : ಉದ್ಯೋಗ ಮತ್ತು ಶಿಕ್ಷಣದಲ್ಲಿ ಮೀಸಲಾತಿ ಆಗ್ರಹಿಸಿ ಮರಾಠಾ ಸಮುದಾಯಕ್ಕೆ ಸೇರಿದ ಸಾವಿರಾರು ಮಂದಿ ಬುಧವಾರ ನಗರದಲ್ಲಿ ಮೌನ ಮೆರವಣಿಗೆ ನಡೆಸಿದರು. ಬೈಕುಲಾದಲ್ಲಿರುವ ಜೀಜಾಮಾತಾ ಉದ್ಯಾನದಿಂದ ಆರಂಭವಾದ ಮೆರವಣಿಗೆ ಆಜಾದ್ ಮೈದಾನದಲ್ಲಿ ಕೊನೆಗೊಳ್ಳಲಿದೆ. ಮೆರವಣಿಗೆ  ವೇಳೆ ವ್ಯಾಪಕ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿತ್ತು.

ಈ ಬೆಳವಣಿಗೆಯ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ವಿಧಾನಸಭೆಯಲ್ಲೂ ಭಾರೀ ಕೋಲಾಹಲ ನಡೆದಿತ್ತಲ್ಲದೆ ವಿಪಕ್ಷ ಹಾಗೂ ಆಡಳಿತ ಪಕ್ಷದ ಸದಸ್ಯರು  ಕೂಡ ಮರಾಠಾ ಸಮುದಾಯಕ್ಕೆ ಮೀಸಲಾತಿಗೆ ಆಗ್ರಹಿಸಿದರು. ನಲ್ವತ್ತೈದು ನಿಮಿಷಗಳ ಅವಧಿಯಲ್ಲಿ ಸದನವನ್ನು ಮೂರು ಬಾರಿ ಮುಂದೂಡಲಾಯಿತು. ವಿಧಾನಸಭೆಯ ಹೊರಗೂ ಆಡಳಿತ ಮತ್ತು ವಿಪಕ್ಷ ಸದಸ್ಯರು ಧರಣಿ ನಡೆಸಿದರು. ಅಪರಾಹ್ನದ ನಂತರ ಶಾಸಕರು ಮರಾಠಾ ಮೋರ್ಚಾದಲ್ಲಿ ಭಾಗವಹಿಸಲು ತೆರೆಳಿದರು.

ಪ್ರತಿಭಟನಾ ಮೆರವಣಿಗೆಯಿಂದ ನಗರದ ಹಲವೆಡೆ  ರಸ್ತೆ ತಡೆಯುಂಟಾಗಿತ್ತು. ದಕ್ಷಿಣ ಮುಂಬೈಯ ಹಲವು ಶಾಲೆಗಳಿಗೂ ಮುನ್ನೆಚ್ಚರಿಕಾ ಕ್ರಮವಾಗಿ ರಜೆ ಘೋಷಿಸಲಾಗಿತ್ತು. ಮುಂಬೈಯ ಖ್ಯಾತ ಡಬ್ಬಾವಾಲಾಗಳೂ ಪ್ರತಿಭಟನೆಯಲ್ಲಿ ಪಾಲ್ಗೊಂಡರು.

ಔರಂಗಾಬಾದ್ ನಗರದಲ್ಲಿ ಇಂತಹ ಒಂದು ಪ್ರತಿಭಟನೆ ನಡೆದು ಸರಿಯಾಗಿ ಒಂದು ವರ್ಷ ಆಗಿರುವ ಸಂದರ್ಭದಲ್ಲಿ ಈ 58ನೇ ಮರಾಠಾ ಮಾರ್ಚ್ ನಡೆದಿದೆ. ಕಳೆದ ವರ್ಷದ ಜುಲೈ ತಿಂಗಳಲ್ಲಿ ಅಹಮದ್ ನಗರದ ಕೊಪರ್ಡಿ ಗ್ರಾಮದಲ್ಲಿ 14 ವರ್ಷದ ಮರಾಠಾ ಸಮುದಾಯದ ಬಾಲಕಿಯೊಬ್ಬಳ ಬರ್ಬರ ಅತ್ಯಾಚಾರ ಮತ್ತು ಕೊಲೆ ಪ್ರಕರಣ ನಡೆದ ಬಳಿಕ ರಾಜ್ಯದಲ್ಲಿ ವಿವಿಧೆಡೆ ಇಂತಹ ಮರಾಠಾ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಳ್ಳಲಾಗಿತ್ತು.

ಬುಧವಾರದ ಮೆರವಣಿಗೆ ಆಜಾದ್ ನಗರ ಮೈದಾನದಲ್ಲಿ ಕೊನೆಗೊಳ್ಳಲಿದೆ.

 ಪರಿಶಿಷ್ಟ ಜಾತಿ/ವರ್ಗ ದೌರ್ಜನ್ಯ ತಡೆ ಕಾಯಿದೆಯ ದುರುಪಯೋಗ ಆರೋಪದಲ್ಲಿ ಅದನ್ನು ತಡೆಯಲು ತಿದ್ದುಪಡಿ, ರೈತರ ಆತ್ಮಹತ್ಯೆ ತಡೆಯಲು ಸಾಲ ಮನ್ನಾ ಮತ್ತು ಕೃಷಿ ಉತ್ಪನ್ನಗಳಿಗೆ ಬೆಂಬಲ ಬೆಲೆ ನೀಡಬೇಕೆಂಬುದು ಪ್ರತಿಭಟನಾಕಾರರ ಇತರ ಬೇಡಿಕೆಗಳಾಗಿವೆ. ಮರಾಠಾ ಸಮುದಾಯದ ಬೇಡಿಕೆಗಳನ್ನೊಳಗೊಂಡ ಮನವಿಪತ್ರವನ್ನು ಮುಖ್ಯಮಂತ್ರಿಗೆ ಸಲ್ಲಿಸಲಾಗುವುದೆಂದು ಹಿರಿಯ ಮರಾಠಾ ನಾಯಕ ಮತ್ತು ಮಾಜಿ ಮುಖ್ಯಮಂತ್ರಿ ನಾರಾಯಣ ರಾಣೆ ಹೇಳಿದ್ದಾರೆ. ಮರಾಠಾ ಸಮುದಾಯದ ಆರ್ಥಿಕ ಸಾಮಾಜಿಕ ಸ್ಥಿತಿಗತಿಗಳ ಅಧ್ಯಯನ ನಡೆಸಲು ಹಿಂದಿನ ಎನ್‍ಸಿಪಿ ಸರಕಾರ ರಚಿಸಿದ್ದ ವಿಶೇಷ ಸಮಿತಿಯ ನೇತೃತ್ವವನ್ನು ರಾಣೆ ವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X