Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಹಬ್ಬದ ಆಚರಣೆ ಅಂಗವಾಗಿ ಪೂರ್ವಭಾವಿ ಸಭೆ

ಹಬ್ಬದ ಆಚರಣೆ ಅಂಗವಾಗಿ ಪೂರ್ವಭಾವಿ ಸಭೆ

ವಾರ್ತಾಭಾರತಿವಾರ್ತಾಭಾರತಿ9 Aug 2017 6:43 PM IST
share
ಹಬ್ಬದ ಆಚರಣೆ ಅಂಗವಾಗಿ ಪೂರ್ವಭಾವಿ ಸಭೆ

ಬಣಕಲ್, ಆ.9:  ಮುಂಬರುವ ಗೌರಿಗಣೇಶ ಹಬ್ಬದ ಆಚರಣೆಯ ಪ್ರಯುಕ್ತ ಸಾರ್ವಜನಿಕರು ಶಾಂತಿ ಸುವ್ಯವಸ್ಥೆ ಕಾಪಾಡುವಲ್ಲಿ ಪೋಲಿಸರೊಂದಿಗೆ ಸಾರ್ವಜನಿಕರು ಸಹಕರಿಸಬೇಕೆಂದು ಬಣಕಲ್ ಪೋಲಿಸ್ ಠಾಣಾ ಮುಖ್ಯ ಪೇದೆ ಎಸ್.ಬಾಬು ಹೇಳಿದರು.

ಅವರು ಬುಧವಾರ ಕೊಟ್ಟಿಗೆಹಾರದಲ್ಲಿ ಬಣಕಲ್ ಹೋಬಳಿಯ ದೇವರಮನೆ, ಕೋಗಿಲೆ, ಕೋಡೇಬೈಲ್, ಗುತ್ತಿಹಳ್ಳಿ, ಕೊಟ್ಟಿಗೆಹಾರ ವ್ಯಾಪ್ತಿಯ ತರುವೆ, ದೇವನಗೂಲ್, ಬಿನ್ನಡಿ, ಅತ್ತಿಗೆರೆ ಗ್ರಾಮದ ಗ್ರಾಮಗಸ್ತು ಸಭೆಯಲ್ಲಿ ಮಾತನಾಡಿದರು.

ಗಣಪತಿ ಹಬ್ಬ ಆಚರಿಸಲು ಮುಂಜಾಗ್ರತೆ ಕ್ರಮವಾಗಿ ಕೆಲವು ನಿಯಮಗಳನ್ನು ಪಾಲಿಸಿ ಶಾಂತಿಯುತವಾಗಿ ಸಾರ್ವಜನಿಕರು ಹಬ್ಬ ಆಚರಿಸಬೇಕು. ಗಣಪತಿ ಮೂರ್ತಿ ವಿಗ್ರಹವನ್ನು ಪ್ರತಿಷ್ಠಾಪಿಸುವ ಮೊದಲು ಸ್ಥಳೀಯ ಗ್ರಾಪಂ ನಲ್ಲಿ ಅನುಮತಿ ಪಡೆಯಬೇಕು. ವಿಗ್ರಹವನ್ನು ಇಡುವ ಜಾಗದಲ್ಲಿ ಸಾರ್ವಜನಿಕರಿಗೆ ತೊಂದರೆಯಾಗದಂತೆ ನೋಡಿಕೊಂಡು ಇತರರ ತಕರಾರು ಇರಬಾರದು ಎಂದು ತಿಳಿಸಿದರು.

ಹಬ್ಬದ ಮೆರವಣಿಗೆ ಹಾಗೂ ಧ್ವನಿವರ್ಧಕ ಬಳಸಲು ಪೋಲಿಸ್ ಇಲಾಖೆಯಿಂದ ಅನುಮತಿ ಪಡೆಯಬೇಕು. ಮೆರವಣಿಗೆಯಲ್ಲಿ ಅಹಿತಕರ ಘಟನೆ ಸಂಭವಿಸದಂತೆ ಆಯೋಜಕರು ನೋಡಿಕೊಳ್ಳಬೇಕು. ಗಣಪತಿ ವಿಸರ್ಜನೆ ಮತ್ತು ಮೆರವಣಿಗೆ ಮಾಡಲು ನಿಗದಿಯಾದ ಸಮಯದಲ್ಲಿ ಮಾಡಿ ಮುಗಿಸಬೇಕು. ಯಾವುದೇ ಕಾನೂನು ಭಂಗದ ಚಟುವಟಿಕೆಗಳು ನಡೆಯಬಾರದು. ಉತ್ತಮ ರೀತಿಯಲ್ಲಿ ಹಬ್ಬದ ಆಚರಣೆಗಳು ನಡೆಸಬೇಕು. ಆಚರಣೆಯಲ್ಲಿ ಅಹಿತಕರ ಘಟನೆಗಳು ನಡೆದಲ್ಲಿ ಆಯೋಜಕರನ್ನು ಹೊಣೆ ಮಾಡಲಾಗುವುದು ಎಂದರು.

ಬಣಕಲ್ ಪೋಲಿಸ್ ಪೇದೆ ಹೆಚ್.ಎಲ್.ಸಂತೋಷ್ ಕುಮಾರ್ ಮಾತನಾಡಿ, ಯಾವುದೇ ಹಬ್ಬಗಳು ಶಾಂತಿಯುತವಾಗಿ ನಡೆಯಲು ಸಾರ್ವಜನಿಕರ ಸಹಕಾರ ಅಗತ್ಯವಾಗಿದೆ. ಶಾಂತಿ ಕದಡದಂತೆ ಹಬ್ಬದ ಕಾರ್ಯಕ್ರಮಗಳ ಮೇಲ್ವಿಚಾರಣೆ ವಹಿಸಿರುವ ಪ್ರತಿನಿದಿಗಳು ಅಚ್ಚುಕಟ್ಟಾಗಿ ಕಾರ್ಯಕ್ರಮ ನಿರ್ವಹಿಸಬೇಕು. ಡಿಜೆಯಂತಹ ಧ್ವನಿವರ್ಧಕ ಬಳಸಲು ಯಾವುದೇ ಹಬ್ಬದಲ್ಲಿ ಅನುಮತಿ ಇಲ್ಲ. ಗ್ರಾಮಸ್ಥರು ಶಾಂತಿ ಸುವ್ಯವಸ್ಥೆಯ ನಿಟ್ಟಿನಲ್ಲಿ ಹಬ್ಬದ ಆಚರಣೆಗೆ ಮುಂಜಾಗರೂಕತೆ ವಹಿಸಿ ಕೆಲಸ ಮಾಡಬೇಕು. ಸೂಕ್ತ ಕ್ರಮಗಳನ್ನು ಅಳವಡಿಸಿ ಶಾಂತಿಯಿಂದ ಹಬ್ಬ ಆಚರಿಸಲು ಸಾರ್ವಜನಿಕರು ಪೋಲಿಸರೊಂದಿಗೆ ಸಹಕಾರ ನೀಡಬೇಕು ಎಂದು ನುಡಿದರು.

ಸಭೆಯಲ್ಲಿ ಆಟೋ ಚಾಲಕರ ಮತ್ತು ಮಾಲಕರ ಸಂಘದ ಅಧ್ಯಕ್ಷ ದೇವೆಂದ್ರ, ಕಾರ್ಯಧರ್ಶಿ ನಾಗೇಶ್, ರಘು, ಮಹೇಶ್, ದಿನೇಶ್, ಜಗ್ಗನ್ನಾಥ್, ಬಾವಕ, ಬಿನುವರ್ಗಿಸ್, ಸ್ಪಂಧನ್‌ಗೌಡ, ದೀಪಕ್, ಶ್ರೀಧರ್‌ಭಂಡಾರಿ, ಪೂಣೇಶ್, ಬೈರಯ್ಯ ಮತ್ತಿತರರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X