ಕಾಂಗ್ರೆಸ್‌ನಿಂದ ಕ್ವಿಟ್ ಇಂಡಿಯಾ ಚಳುವಳಿಯ 75ನೇ ವಾರ್ಷಿಕ ಆಚರಣೆ

ಮಡಿಕೇರಿ, ಆ.7: ಕ್ವಿಟ್ ಇಂಡಿಯಾ ಚಳವಳಿಯ 75ನೇ ವಾರ್ಷಿಕ ದಿನಾಚರಣೆ ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಬಿ.ಶಿವುಮಾದಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
1942ರಲ್ಲಿ ಕ್ವಿಟ್ ಇಂಡಿಯಾ ಚಳವಳಿ ಬ್ರಿಟಿಷರ ವಿರುದ್ಧ ನಡೆದಿದ್ದರೆ, ಇಂದು ಬಿಜೆಪಿಯನ್ನು ಅಧಿಕಾರದಿಂದ ತೊಲಗಿಸಲು ಕಾಂಗ್ರೆಸ್ ಪಕ್ಷ ಹೋರಾಟವನ್ನು ಹಮ್ಮಿಕೊಳ್ಳಲಿದೆ ಎಂದು ಪ್ರಮುಖರು ತಿಳಿಸಿದರು.
ಕೆಪಿಸಿಸಿ ಕಾರ್ಯದರ್ಶಿ ಹಾಗೂ ಪಕ್ಷದ ಕೊಡಗು ಉಸ್ತುವಾರಿ ಮಮತಾ ಗಟ್ಟಿ ಮಾತನಾಡಿ, ಕ್ವಿಟ್ ಇಂಡಿಯಾ ಚಳವಳಿ ಮತ್ತು ಕಾಂಗ್ರೆಸ್‌ನ ಬೆಳವಣಿಗೆಯ ಕುರಿತು ವಿವರಿಸಿದರು. ಕಾಂಗ್ರೆಸ್ ಕಾರ್ಯಕರ್ತರು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಉಳಿಸಲು ಕಾರ್ಯಪ್ರವೃತ್ತರಾಗಬೇಕೆಂದು ಕರೆ ನೀಡಿದರು.
ವಿಧಾನ ಪರಿಷತ್ ಮಾಜಿ ಸದಸ್ಯರಾದ ಸಿ.ಎಸ್.ಅರುಣ್ ಮಾಚಯ್ಯ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಮುಕ್ಕಾಟಿರ ಶಿವು ಮಾದಪ್ಪ, ವಕ್ತಾರರಾದ ಟಾಟು ಮೊಣ್ಣಪ್ಪ, ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾ ಸಂಯೋಜಕರಾದ ತೆನ್ನಿರ ಮೈನ, ಮೂಡ ಅಧ್ಯಕ್ಷರಾದ ಚುಮ್ಮಿ ದೇವಯ್ಯ, ಮಡಿಕೇರಿ ಬ್ಲಾಕ್ ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿ ಕಾನೆಹಿತ್ಲು ಮೊಣ್ಣಪ್ಪ, ನಗರ ಕಾಂಗ್ರೆಸ್ ಅಧ್ಯಕ್ಷರಾದ ಕೆ.ಯು.ಅಬ್ದುಲ್ ರಜಾಕ್, ಪ್ರಮುಖರಾದ ಸರಾ ಚಂಗಪ್ಪ, ಅಪ್ರು ರವೀಂದ್ರ, ಉಸ್ಮಾನ್, ಎಸ್‌ಸಿ-ಎಸ್‌ಟಿ ಘಟಕದ ಸತೀಶ್‌ಕುಮಾರ್ ಮತ್ತಿತರರು ಈ ಸಂದರ್ಭ ಹಾಜರಿದ್ದರು.







