ಆ.31ಕ್ಕೆ ವಿಧಾನ ಪರಿಷತ್ ಉಪ ಚುನಾವಣೆ

ಬೆಂಗಳೂರು, ಆ. 9: ಮೇಲ್ಮನೆ ಸದಸ್ಯೆ ವಿಮಲಾ ಗೌಡ ಅವರ ಅಕಾಲಿಕ ನಿಧನದ ಹಿನ್ನೆಲೆಯಲ್ಲಿ ತೆರವಾಗಿದ್ದ ವಿಧಾನ ಪರಿಷತ್ ಸ್ಥಾನಕ್ಕೆ ಆ.31ರ ಬೆಳಗ್ಗೆ 9ರಿಂದ 4 ಗಂಟೆಯ ವರೆಗೆ ಮತದಾನ ನಡೆಯಲಿದೆ ಎಂದು ಕೇಂದ್ರ ಚುನಾವಣಾ ಆಯೋಗ ಉಪ ಚುನಾವಣೆ ಪ್ರಕಟಿಸಿದೆ.
ವಿಧಾನಸಭೆಯಿಂದ ವಿಧಾನ ಪರಿಷತ್ತಿಗೆ ನಡೆಯಲಿರುವ ಉಪ ಚುನಾವಣೆಗೆ ಆ.14ಕ್ಕೆ ಅಧಿಸೂಚನೆ ಹೊರಡಿಸಲಿದ್ದು, ಅಂದಿನಿಂದಲೇ ನಾಮಪತ್ರ ಸಲ್ಲಿಕೆ ಆರಂಭಗೊಳ್ಳಲಿದ್ದು, ಆ.21 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನ. ಆ.22ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು, ಆ.24 ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ.
ಆ.31ರ ಬೆಳಗ್ಗೆ 9ರಿಂದ ಸಂಜೆ 4ಗಂಟೆಯ ವರೆಗೆ ಮತದಾನ ನಡೆಯಲಿದ್ದು, ಅದೇ ದಿನ ಸಂಜೆ 5ಗಂಟೆಯಿಂದ ಮತ ಎಣಿಕೆ ಕಾರ್ಯ ನಡೆಯಲಿದ್ದು, ಫಲಿತಾಂಶ ಪ್ರಕಟಿಸಲಾಗುವುದು ಎಂದು ಕೇಂದ್ರ ಚುನಾವಣಾ ಆಯೋಗ ತನ್ನ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ.
Next Story





