ಐದು ಮಂದಿ ಕೆಎಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು, ಆ. 9: ಸಾರ್ವಜನಿಕ ಆಡಳಿತದ ದೃಷ್ಟಿಯಿಂದ ರಾಜ್ಯ ಸರಕಾರ ಐದು ಮಂದಿ ಕೆಎಎಸ್ ಅಧಿಕಾರಿಗಳನ್ನು ತಮ್ಮ ಹೆಸರಿನ ಮುಂದಿನ ಸೂಚಿತ ಸ್ಥಳಕ್ಕೆ ತಕ್ಷಣವೇ ನಿಯೋಜನೆಗೊಳ್ಳುವಂತೆ ವರ್ಗಾವಣೆ ಮಾಡಿ ಬುಧವಾರ ಆದೇಶ ಹೊರಡಿಸಿದೆ.
ವಿ.ದೊಡ್ಡಪ್ಪ -ಕಾರ್ಯಕಾರಿ ನಿರ್ದೇಶಕ ರಾಜ್ಯ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಬೆಂಗಳೂರು, ಎನ್.ಮಹೇಶ್ ಬಾಬು -ಉಪ ವಿಭಾಗಾಧಿಕಾರಿ ದೊಡ್ಡಬಳ್ಳಾಪುರ, ರಂಗನಾಥ್ -ವಿಶೇಷ ಭೂಸ್ವಾಧೀನಾಧಿಕಾರಿ ರಾಷ್ಟ್ರೀಯ ಹೆದ್ದಾರಿಗಳು ಬೆಂಗಳೂರು. ಡಾ.ಔದ್ರಾಮ -ಯೋಜನಾ ನಿರ್ದೇಶಕ ಜಿಲ್ಲಾ ನಗರಾಭಿವೃದ್ಧಿ ಕೋಶ ಬಾಗಲಕೋಟೆ. ಬಿ.ಮಲ್ಲಿಕಾರ್ಜುನ್ -ವಿಶೇಷ ಭೂಸ್ವಾಧೀನಾಧಿಕಾರಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ(ಬಿಡಿಎ) ಬೆಂಗಳೂರು ಇಲ್ಲಿಗೆ ವರ್ಗಾವಣೆ ಮಾಡಿದೆ.
Next Story





