Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಅಮೆರಿಕದ ಗ್ವಾಮ್ ಭೂಭಾಗದ ಮೇಲೆ ದಾಳಿ:...

ಅಮೆರಿಕದ ಗ್ವಾಮ್ ಭೂಭಾಗದ ಮೇಲೆ ದಾಳಿ: ಉತ್ತರ ಕೊರಿಯ ಎಚ್ಚರಿಕೆ

ವಾರ್ತಾಭಾರತಿವಾರ್ತಾಭಾರತಿ9 Aug 2017 10:11 PM IST
share
ಅಮೆರಿಕದ ಗ್ವಾಮ್ ಭೂಭಾಗದ ಮೇಲೆ ದಾಳಿ: ಉತ್ತರ ಕೊರಿಯ ಎಚ್ಚರಿಕೆ

ವಾಶಿಂಗ್ಟನ್, ಆ. 9: ಇನ್ನು ಮುಂದೆ ಉತ್ತರ ಕೊರಿಯದ ಬೆದರಿಕೆಗಳಿಗೆ ಅಮೆರಿಕವು ‘‘ಆಕ್ರೋಶಭರಿತ’’ವಾಗಿ ಪ್ರತಿಕ್ರಿಯಿಸುವುದು ಎಂಬ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ರ ಎಚ್ಚರಿಕೆಗೆ ಉತ್ತರ ಕೊರಿಯ ಅಷ್ಟೇ ತೀವ್ರವಾಗಿ ಪ್ರತಿಕ್ರಿಯಿಸಿದೆ. ಪೆಸಿಫಿಕ್ ಸಾಗರದ ಗ್ವಾಮ್ ದ್ವೀಪದಲ್ಲಿರುವ ಅಮೆರಿಕದ ಭೂಭಾಗದ ಮೇಲೆ ಕ್ಷಿಪಣಿ ದಾಳಿ ನಡೆಸುವ ಸಾಧ್ಯತೆಯನ್ನು ತಾನು ಪರಿಶೀಲಿಸುತ್ತಿರುವುದಾಗಿ ಉತ್ತರ ಕೊರಿಯ ಹೇಳಿದೆ.

  ‘‘ಗ್ವಾಮ್‌ನಲ್ಲಿರುವ ಅಮೆರಿಕದ ಪ್ರಮುಖ ಸೇನಾ ನೆಲೆಗಳನ್ನು ನಿಯಂತ್ರಿಸುವುದಕ್ಕಾಗಿ ಗ್ವಾಮ್ ಸುತ್ತಮುತ್ತಲಿರುವ ಪ್ರದೇಶಗಳ ಮೇಲೆ ಮಧ್ಯಮದಿಂದ ದೀರ್ಘ ವ್ಯಾಪ್ತಿಯ ‘ಹ್ವಾಸಂಗ್-12’ ಕ್ಷಿಪಣಿಗಳನ್ನು ಹಾರಿಸುವ ಯೋಜನೆಯನ್ನು ಕೊರಿಯನ್ ಪೀಪಲ್ಸ್ ಆರ್ಮಿ (ಕೆಪಿಎ)ಯು ಪರಿಶೀಲಿಸುತ್ತಿದೆ’’ ಎಂದು ಉತ್ತರ ಕೊರಿಯ ಸೇನೆಯ ವಕ್ತಾರರೊಬ್ಬರು ನೀಡಿರುವ ಹೇಳಿಕೆಯೊಂದನ್ನು ದೇಶದ ಸರಕಾರಿ ಸುದ್ದಿ ಸಂಸ್ಥೆಯೊಂದು ಪ್ರಕಟಿಸಿದೆ.

ದೇಶದ ನಾಯಕ ಕಿಮ್ ಜಾಂಗ್ ಉನ್ ನಿರ್ಧರಿಸಿದಾಗ ಯೋಜನೆ ಜಾರಿಗೆ ಬರುವುದು ಎಂದು ವಕ್ತಾರ ತಿಳಿಸಿದರು.

ಗ್ವಾಮ್ ನಿವಾಸಿಗಳ ಕಳವಳ: ಸಮಾಧಾನಿಸಿದ ಗವರ್ನರ್

ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಉತ್ತರ ಕೊರಿಯದ ನಡುವೆ ಉದ್ವಿಗ್ನತೆ ಹೆಚ್ಚುತ್ತಿರುವಂತೆಯೇ, ಪೆಸಿಫಿಕ್ ಸಾಗರದಲ್ಲಿರುವ ಅಮೆರಿಕದ ಭೂಭಾಗ ಗ್ವಾಮ್‌ನ ನಿವಾಸಿಗಳು ಭಯಭೀತರಾಗಿದ್ದಾರೆ. 

ಆದರೆ, ತಮ್ಮ ದ್ವೀಪಕ್ಕೆ ಯಾವುದೇ ಬೆದರಿಕೆಯಿಲ್ಲ ಎಂದು ಹೇಳುವ ಮೂಲಕ, ಗವರ್ನರ್ ಎಡ್ಡೀ ಕಾಲ್ವೊ ಜನರನ್ನು ಸಂತೈಸಿದ್ದಾರೆ.

ಟೋಕಿಯೊದಿಂದ ದಕ್ಷಿಣಕ್ಕೆ ಸುಮಾರು 2,400 ಕಿ.ಮೀ. ದೂರದಲ್ಲಿ ಪೆಸಿಫಿಕ್ ಸಾಗರದಲ್ಲಿ ಗ್ವಾಮ್ ಸೇನಾ ನೆಲೆಯಿದೆ. ಇಲ್ಲಿ ಸುಮಾರು 1.62 ಲಕ್ಷ ಜನರು ವಾಸಿಸುತ್ತಿದ್ದಾರೆ.

‘‘ಗ್ವಾಮ್ ಮೇಲಿನ ದಾಳಿ ಅಥವಾ ಬೆದರಿಕೆ ಅಮೆರಿಕದ ಮೇಲಿನ ದಾಳಿ ಅಥವಾ ಬೆದರಿಕೆಯಾಗಿದೆ’’ ಎಂದು ಕಾಲ್ವೊ ಬಣ್ಣಿಸಿದರು.

‘‘ಶ್ವೇತಭವನದ ಅಧಿಕಾರಿಗಳೊಂದಿಗೆ ನಾನು ಮಾತನಾಡಿದ್ದೇನೆ. ಅಮೆರಿಕವನ್ನು ರಕ್ಷಿಸಲಾಗುವುದು ಎಂದು ಅವರು ಹೇಳಿದ್ದಾರೆ’’ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X