ಶ್ರೀನಗರ: ಎನ್‌ಕೌಂಟರ್‌ನಲ್ಲಿ ಮೂವರು ಉಗ್ರರ ಸಾವು

ಹೊಸದಿಲ್ಲಿ, ಆ.8: ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಬುಧವಾರ ಭದ್ರತಾ ಪಡೆ ನಡೆಸಿದ ಎನ್‌ಕೌಂಟರ್‌ನಲ್ಲಿ ಮೂವರು ಉಗ್ರರು ಹತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಹತರಾದ ಮೂವರು ಉಗ್ರರು ಝಾಕಿರ್ ಮುಸಾ ಗುಂಪಿನ ಸದಸ್ಯರು. ಎನ್‌ಕೌಂಟರ್ ಸ್ಥಳದಲ್ಲಿ ಉಗ್ರರ ಎರಡು ಎಕೆ 47 ಹಾಗೂ ಒಂದು ಪಿಸ್ತೂಲ್ ಪತ್ತೆಯಾಗಿದೆ ಎಂದು ಕಾಶ್ಮೀರದ ಐಜಿಪಿ ಮುನೀರ್ ಖಾನ್ ಹೇಳಿದ್ದಾರೆ.
ಎಲ್ಲಾ ಮೂವರು ಸ್ಥಳೀಯ ಉಗ್ರರು. ಇಬ್ಬರು 2015ರಲ್ಲಿ ಹಾಗೂ ಒಬ್ಬ 2016ರಲ್ಲಿ ಉಗ್ರ ಸಂಘಟನೆಗೆ ಸೇರಿದ್ದರು.
ಖಚಿತ ಮಾಹಿತಿ ಹಿನ್ನೆಲೆಯಲ್ಲಿ ಭದ್ರತಾ ಪಡೆ ಪುಲ್ವಾಮಾದ ಟ್ರಾಲ್‌ನ ಗುಲಾಬ್ ಬಾಘ್ ಪ್ರದೇಶದಲ್ಲಿ ಕಾರ್ಯಾಚರಣೆ ನಡೆಸಿತ್ತು. ಕಾರ್ಯಾಚರಣೆ ಸಂದರ್ಭ ಅಡಗಿದ್ದ ಉಗ್ರರು ಗುಂಡಿನ ದಾಳಿ ನಡೆಸಿದರು. ಭದ್ರತಾ ಪಡೆಯ ಯೋಧರು ಕೂಡ ಪ್ರತಿದಾಳಿ ನಡೆಸಿದರು. ಈ ಗುಂಡಿನ ಚಕಮಕಿಯಲ್ಲಿ ಮೂವರು ಉಗ್ರರು ಹತರಾದರು ಎಂದು ಮುನೀರ್ ಖಾನ್ ತಿಳಿಸಿದ್ದಾರೆ.
Next Story





