Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರಾಜ್ಯಸಭೆಯ ಸಭಾಪತಿಯಾಗಿ ಅನ್ಸಾರಿ...

ರಾಜ್ಯಸಭೆಯ ಸಭಾಪತಿಯಾಗಿ ಅನ್ಸಾರಿ ಕಾರ್ಯನಿರ್ವಹಣೆಗೆ ಸಂಸದರ ಪ್ರಶಂಸೆ

ವಾರ್ತಾಭಾರತಿವಾರ್ತಾಭಾರತಿ10 Aug 2017 7:47 PM IST
share
ರಾಜ್ಯಸಭೆಯ ಸಭಾಪತಿಯಾಗಿ ಅನ್ಸಾರಿ ಕಾರ್ಯನಿರ್ವಹಣೆಗೆ ಸಂಸದರ ಪ್ರಶಂಸೆ

ಹೊಸದಿಲ್ಲಿ,ಆ.10: ದಶಕದ ಅಧಿಕಾರಾವಧಿಯ ಬಳಿಕ ರಾಜ್ಯಸಭೆಯ ಸಭಾಪತಿ ಹುದ್ದೆಯಿಂದ ನಿರ್ಗಮಿಸುತ್ತಿರುವ ಉಪರಾಷ್ಟ್ರಪತಿ ಹಾಮಿದ್ ಅನ್ಸಾರಿಯವರು ಸಾಂವಿಧಾನಿಕ ನಿಯಮಗಳನ್ನು ಎತ್ತಿ ಹಿಡಿದಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಮತ್ತು ಇತರ ಹಿರಿಯ ನಾಯಕರು ಗುರುವಾರ ಪ್ರಶಂಸೆಗಳ ಹೊಳೆಯನ್ನೇ ಹರಿಸಿದರು.

ಸಂವಿಧಾನವನ್ನು ಎತ್ತಿಹಿಡಿಯುವ ನಿಟ್ಟಿನಲ್ಲಿ ಅನ್ಸಾರಿಯವರು ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸಿದ್ದಾರೆ ಎಂದು ಹೇಳಿದ ಮೋದಿ, ವೃತ್ತಿಪರ ರಾಜತಾಂತ್ರಿಕರಾಗಿ ಅವರ ಅನುಭವವು ಮೇಲ್ಮನೆಯ ಕಲಾಪಗಳನ್ನು ಸುಗಮವಾಗಿ ನಡೆಸಲು ಅವರಿಗೆ ನೆರವಾಗಿತ್ತು. ಹಲವಾರು ಸಂದರ್ಭಗಳಲ್ಲಿ ರಾಜತಾಂತ್ರಿಕ ವಿಷಯಗಳ ಕುರಿತು ಅವರ ಅಂತರ್ದೃಷ್ಟಿಯ ಲಾಭವನ್ನು ತಾನೂ ಪಡೆದುಕೊಂಡಿದ್ದೇನೆ ಎಂದರು.

 ‘‘ಈ ಸದನದ ಇತಿಹಾಸದಲ್ಲಿ ಇಂದು ಅತ್ಯಂತ ಮಹತ್ವಪೂರ್ಣ ಸಂದರ್ಭವಾಗಿದೆ. ಈ ಸದನದ ಗೌರವಾನ್ವಿತ ಸಭಾಪತಿಯಾಗಿ 10 ವರ್ಷಗಳನ್ನು ಪೂರ್ಣಗೊಳಿಸಿದ ಬಳಿಕ ನಿಮಗೆ ನಾವು ವಿದಾಯ ಕೋರುತ್ತಿದ್ದೇವೆ’’ ಎಂದು ಸದನದ ನಾಯಕರಾಗಿರುವ ವಿತ್ತಸಚಿವ ಅರುಣ್ ಜೇಟ್ಲಿ ಹೇಳಿದರು.

ಅನ್ಸಾರಿಯವರ ಅಧಿಕಾರಾವಧಿಯಲ್ಲಿ ವ್ಯತ್ಯಯಗಳಿಗೆ ಮತ್ತು ಅತ್ಯುನ್ನತ ಗುಣಮಟ್ಟದ ಚರ್ಚೆಗಳಿಗೆ ಸದನವು ಸಾಕ್ಷಿಯಾಗಿತ್ತು ಎಂದರು.

ಅನ್ಸಾರಿಯವರು ಸದನದ ಕಲಾಪಗಳನ್ನು ನಿರ್ವಹಿಸಿದ್ದ ರೀತಿಯನ್ನು ಪ್ರಶಂಸಿಸಿದ ಪ್ರತಿಪಕ್ಷ ನಾಯಕ ಗುಲಾಂ ನಬಿ ಆಝಾದ್ ಅವರು, ಅನ್ಸಾರಿಯವರೊಂದಿಗಿನ ತನ್ನ ಸುದೀರ್ಘ ಒಡನಾಟವನ್ನು ಸ್ಮರಿಸಿಕೊಂಡರು. ವಿವಿಧ ದೇಶಗಳು ಸಭಾಪತಿಗಳಿಗೆ ಹಲವಾರು ಗೌರವ ಪದವಿಗಳನ್ನು ನೀಡಿವೆಯಾದರೂ ಅವರೆಂದೂ ಅವುಗಳನ್ನು ಬಳಸಿಕೊಂಡಿಲ್ಲ ಎಂದರು.

ಅನ್ಸಾರಿಯವರು ಯಾವುದೇ ತಾರತಮ್ಯವಿಲ್ಲದೆ ಸದನವನ್ನು ನಿರ್ವಹಿಸಿದ್ದರು ಮತ್ತು ಗಲಾಟೆ-ಗದ್ದಲಗಳ ಮಧ್ಯೆ ಯಾವುದೇ ಕಾನೂನನ್ನು ಅಂಗೀಕರಿಸಲು ಅವಕಾಶ ನೀಡಿರಲಿಲ್ಲ ಎಂದು ಹೇಳಿದ ಎಸ್‌ಪಿ ಸದಸ್ಯ ರಾಮಗೋಪಾಲ ಯಾದವ ಅವರು, ಮುಂದಿನ ಸಭಾಪತಿಗಳೂ ಈ ಸಂಪ್ರದಾಯವನ್ನು ಅನುಸರಿಸುತ್ತಾರೆ ಎಂಬ ಆಶಯ ವ್ಯಕ್ತ ಪಡಿಸಿದರು.

ಉತ್ತಮ ಆರೋಗ್ಯವನ್ನು ಕಾಯ್ದುಕೊಳ್ಳಲು ಅನ್ಸಾರಿಯವರು ಪ್ರತಿದಿನ ಯೋಗಾಭ್ಯಾಸ ಮತ್ತು ವಾಯುವಿಹಾರ ಮಾಡುತ್ತಾರೆ. ಕಳೆದ 40 ವರ್ಷಗಳಿಂದಲೂ ಅವರು ಊಟಕ್ಕೆ ಸ್ಯಾಂಡ್‌ವಿಚ್‌ಗಳನ್ನು ಬಳಸುತ್ತಿದ್ದಾರೆ ಮತ್ತು ‘ಇದು ವಿಶ್ವದಾಖಲೆ’ ಯಾಗಿದೆ ಎಂದರು. ರಾಜ್ಯಸಭೆಯ ಕೆಲಸದ ಅವಧಿಯನ್ನು ಸಂಜೆ 5ರಿಂದ 6 ಗಂಟೆಗೆ ವಿಸ್ತರಿಸಿದ್ದಕ್ಕಾಗಿ ಅವರು ಅನ್ಸಾರಿಯವರನ್ನು ಪ್ರಶಂಸಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X