Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಎಲ್ಲಾ ಕೆರೆಗಳಿಗೆ ನೀರು ಸಂಗ್ರಹಕ್ಕೆ...

ಎಲ್ಲಾ ಕೆರೆಗಳಿಗೆ ನೀರು ಸಂಗ್ರಹಕ್ಕೆ ಹೆಚ್ಚಿನ ಅದ್ಯತೆ ನೀಡಿ: ಕೆ.ಪಿ.ಮೋಹನ್‌ರಾಜ್

ವಾರ್ತಾಭಾರತಿವಾರ್ತಾಭಾರತಿ10 Aug 2017 8:28 PM IST
share

ತುಮಕೂರು. ಆ.10: ಗುರುವಾರ ಸಂಜೆಯಿಂದ ಹಾಸನ ಜಿಲ್ಲೆ ಹೇಮಾವತಿ ಜಲಾಶಯದಿಂದ ಎಡದಂಡೆ ನಾಲೆಯ ಮೂಲಕ ತುಮಕೂರು ಜಿಲ್ಲೆಗೆ ನೀರು ಹರಿಯಲಿದ್ದು, ಕಂದಾಯ, ಪೊಲೀಸ್, ಗ್ರಾಮೀಣಾಭಿವೃದ್ದಿ ಮತ್ತು ನಗರಾಭಿವೃದ್ದಿ ಇಲಾಖೆಗಳ ಅಧಿಕಾರಿಗಳು ಪರಸ್ವರ ಸಮನ್ವಯದ ಮೂಲಕ ಜಿಲ್ಲೆಗೆ 2018ರ ಮೇ.31ರವರೆಗೆ ಅಗತ್ಯವಿರುವ ಕುಡಿಯುವ ನೀರು ಸಂಗ್ರಹಣೆಗೆ ಮುಂದಾಗುವಂತೆ ಜಿಲ್ಲಾಧಿಕಾರಿ ಕೆ.ಪಿ.ಮೋಹನ್‌ರಾಜ್ ಸೂಚಿಸಿದ್ದಾರೆ.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಕಂದಾಯ, ಪೊಲೀಸ್, ನಗರಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಮಳೆ ಕೊರತೆಯಿಂದಾಗಿ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯನ್ನು ಪರಿಹರಿಸಲು ಆಗಸ್ಟ್ 10ರ ಸಂಜೆಯಿಂದ ಹೇಮಾವತಿಯ ಹಾಸನದ ಗೊರೊರು ಡ್ಯಾಂನಿಂದ ತುಮಕೂರು ನಾಲೆಗೆ ನೀರನ್ನು ಹರಿಸಲಿದ್ದು, ಜನ, ಜಾನುವಾರುಗಳಿಗೆ ಜಿಲ್ಲೆಯಲ್ಲಿ ನೀರನ್ನು ಒದಗಿಸಲು ಕೆರೆಗಳಿಗೆ ನೀರನ್ನು ತುಂಬಿಸುವ ಕಾರ್ಯ ಆಗಬೇಕು. ಇದಕ್ಕಾಗಿ ವ್ಯಾಪಕ ಕ್ರಮಗಳನ್ನು ಕೈಗೊಳ್ಳಬೇಕಾಗಿದೆ ಎಂದು ಜಿಲ್ಲಾಧಿಕಾರಿಗಳು ಸಭೆಗೆ ತಿಳಿಸಿದರು.

ಮುಂಬರುವ ಮೇ 31ರವರೆಗೆ ಜಿಲ್ಲೆಗೆ ಅಗತ್ಯವಿರುವಷ್ಟು ನೀರನ್ನು ಕೆರೆಗಳಲ್ಲಿ ಸಂಗ್ರಹಿಸಬೇಕಿದೆ. ನಾಲೆಗೆ ಮುಂದಿನ 25 ದಿನಗಳು ನೀರು ಹರಿಯಬಹುದು. ಈ ಅವಧಿಯಲ್ಲಿ ಅಗತ್ಯವಿರುವಷ್ಟು ನೀರನ್ನು ಪೋಲಾಗದಂತೆ ಸಂರಕ್ಷಿಸುವುದು ಜಿಲ್ಲಾಡಳಿತದ ಕರ್ತವ್ಯವಾಗಿದೆ. ಇದಕ್ಕಾಗಿ ನಾಲೆಯಲ್ಲಿ ಹರಿಯುವ ನೀರು ಕುಡಿಯುವ ನೀರಿಗೆ ಅಲ್ಲದೆ ಬೇರೆ ಉದ್ದೇಶಕ್ಕೆ ಬಳಕೆಯಾಗದಂತೆ ತಡೆಯಲು ನಾಲೆ ತಂಡ ಹಾಗೂ ಕೆರೆ ತಂಡ ಎಂದು ಎರಡು ತಂಡಗಳನ್ನು ರಚಿಸಬೇಕು. ಈ ತಂಡಗಳಲ್ಲಿ ನೀರಾವರಿ ಇಲಾಖೆಗಳ ಇಂಜಿನಿಯರ್‌ಗಳು, ಕಂದಾಯ ಇಲಾಖೆಯ ಅಧಿಕಾರಿಗಳು, ಬೆಸ್ಕಾಂ, ಪೊಲೀಸ್ ಸಿಬ್ಬಂದಿ ಮತ್ತಿತರ ಇಲಾಖೆಗಳ ಅಧಿಕಾರಿಗಳು ತಂಡದ ಸದಸ್ಯರಾಗಿರುತ್ತಾರೆ ಎಂದು ಜಿಲ್ಲಾಧಿಕಾರಿ ಸಭೆಗೆ ತಿಳಿಸಿದರು.

ಸಭೆಯಲ್ಲಿ ಪೊಲೀಸ್ ವರಿಷ್ಠಾಧಿಕಾರಿ ದಿವ್ಯಾಗೋಪಿನಾಥ್, ಅಪರ ಜಿಲ್ಲಾಧಿಕಾರಿ ಸಿ.ಅನಿತಾ, ಪ್ರೊಬೆಷನರಿ ಐಎಎಸ್ ಅಧಿಕಾರಿ ಪ್ರೀತಿ ಗೆಹಲೋಟ್, ಉಪವಿಭಾಗಾಧಿಕಾರಿಗಳಾದ ಡಾ:ವೆಂಕಟೇಶಯ್ಯ, ಶ್ರೀಮತಿ ಶಿಲ್ಪ, ಶ್ರೀಮತಿ ತಬಸ್ಸುಮ್ ಜಹೇರಾ, ಪಾಲಿಕೆ ಆಯುಕ್ತ ಮಂಜುನಾಥಸ್ವಾಮಿ ಸೇರಿದಂತೆ ಹೇಮಾವತಿ ನಾಲಾ ವ್ಯಾಪ್ತಿಯ ಪೊಲೀಸ್ ಇನ್ಸ್‌ಪೆಕ್ಟರ್, ಕಂದಾಯ ಇಲಾಖೆಯ ಸಿಬ್ಬಂದಿಗಳು ಮತ್ತಿತರರು ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X