Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಪಾದಯಾತ್ರೆಯ ಸಮಾರೋಪವು ನೀರಾವರಿ ಯೋಜನೆಯ...

ಪಾದಯಾತ್ರೆಯ ಸಮಾರೋಪವು ನೀರಾವರಿ ಯೋಜನೆಯ ಸಂಕಲ್ಪ ದಿನವಾಗಿ ಆಚರಣೆ: ವೈಎಸ್‌ವಿ ದತ್ತ

ವಾರ್ತಾಭಾರತಿವಾರ್ತಾಭಾರತಿ10 Aug 2017 8:36 PM IST
share
ಪಾದಯಾತ್ರೆಯ ಸಮಾರೋಪವು ನೀರಾವರಿ ಯೋಜನೆಯ ಸಂಕಲ್ಪ ದಿನವಾಗಿ ಆಚರಣೆ: ವೈಎಸ್‌ವಿ ದತ್ತ

ಕಡೂರು ಆ. 10:  ಕ್ಷೇತ್ರದ ಜನರ ಬಳಿ ತೆರಳಿ ಅವರ ಸಮಸ್ಯೆ ಆಲಿಸಿ, ಪರಿಹಾರ ದೊರಕಿಸುವ ನಿಟ್ಟಿನಲ್ಲಿ ಆರಂಭಗೊಂಡ 1 ಸಾವಿರ ಕಿ.ಮೀ. ಪಾದಯಾತ್ರೆಯ ಸಮಾರೋಪ ಸಮಾರಂಭವನ್ನು ನೀರಾವರಿ ಯೋಜನೆಯ ಸಂಕಲ್ಪ ದಿನವನ್ನಾಗಿ ಆಚರಿಸಲಾಗುವುದು ಎಂದು ಶಾಸಕ ವೈ.ಎಸ್.ವಿ. ದತ್ತ ಹೇಳಿದರು.
 
ಅವರು ಗುರುವಾರ ತಾಲೂಕಿನ ನಾಗಗೊಂಡನಹಳ್ಳಿ ಗ್ರಾಮಕ್ಕೆ ಪಾದಯಾತ್ರೆ ಮೂಲಕ ಆಗಮಿಸಿದಾಗ ಗ್ರಾಮದ ಶ್ರೀ ಆಂಜನೇಯಸ್ವಾಮಿ ದೇವಾಲಯದ ಆವರಣದಲ್ಲಿ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದರು.

ಕ್ಷೇತ್ರವು ಬರಗಾಲದಿಂದ ಮುಕ್ತಿಗೊಳ್ಳಲು ಇರುವುದು ಒಂದೇ ಪರಿಹಾರ. ಅದುವೇ ಶಾಶ್ವತ ನೀರಾವರಿ ಯೋಜನೆ. ಈ ಶಾಶ್ವತ ನೀರಾವರಿ ಯೋಜನೆಗೆ ಈಗಾಗಲೇ ನೀರಾವರಿ ನಿಗಮವು ಕ್ರಿಯಾ ಯೋಜನೆ ತಯಾರಿಸಿ ಸಭೆಯ ಮುಂದೆ ಇಡಲಿದ್ದು ಮುಂದಿನ ದಿನಗಳಲ್ಲಿ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆಯುವ ಸಭೆ ಒಪ್ಪಿಗೆ ನೀಡಿದರೆ ಶಾಶ್ವತ ನೀರಾವರಿ ಯೋಜನೆಯ ಹೋರಾಟಕ್ಕೆ ಫಲ ಸಿಗಲಿದೆ ಎಂದರು.  

ಪಾದಯಾತ್ರೆಯಲ್ಲಿ ಜನರಿಂದ ದೊರೆತ ಸ್ವಾಗತ ನನ್ನನ್ನು ಮೂಕನನ್ನಾಗಿ ಮಾಡಿದೆ. ಇದು ಒಂದು ಜನಸ್ನೇಹಿ ಪಾದಯಾತ್ರೆ ಎಂದು ಬಣ್ಣಿಸುತ್ತೇನೆ. ಪಾದಯಾತ್ರೆಯ ಸಮಯದಲ್ಲಿ ಜನರು ಕಷ್ಟ-ಸುಖ ಹಂಚಿಕೊಂಡಿದ್ದಾರೆ. ಇದರಿಂದ ನನ್ನ ತಪ್ಪುಗಳ ಅರಿವಾಗಿದೆ. ಶೇ 10 ರಷ್ಟು ಗ್ರಾಮಗಳಿಗೆ ಅನುದಾನ ಸವಲತ್ತು ನೀಡಿಲ್ಲದಿರುವುದು ಗಮನಕ್ಕೆ ಬಂದಿದೆ. ಅಂತಹ ಗ್ರಾಮಗಳನ್ನು ಪಟ್ಟಿ ಮಾಡಿ ಮುಂದಿನ ದಿನಗಳಲ್ಲಿ ನ್ಯಾಯ ಒದಗಿಸುತ್ತೇನೆ ಎಂದು ನುಡಿದರು.

300ಕ್ಕೂ ಹೆಚ್ಚಿನ ಹಳ್ಳಿಗಳು, 45 ಗ್ರಾಪಂ ಗಳನ್ನು ಪಾದಯಾತ್ರೆಯಲ್ಲಿ ಸಂಪರ್ಕಿಸಿದ್ದೇನೆ. ನೋವು, ಬರ, ಮಳೆ, ಬೆಳೆಹಾನಿ, ಮೇವಿನ ಸಮಸ್ಯೆಗಳಂತಹ ಸಮಸ್ಯೆಗಳನ್ನು ಕಣ್ಣಾರೆ ಕಂಡಿದ್ದೇನೆ. ಮುಂದಿನ ದಿನಗಳಲ್ಲಿ ಈ ಎಲ್ಲ ಸಮಸ್ಯೆಗಳಿಗೆ ಪರಿಹಾರ ಹುಡುಕಲು ಮುಂದಾಗುತ್ತೇನೆ. ಪಾದಯಾತ್ರೆ ಅಂತಿಮ ಹಂತಕ್ಕೆ ಬಂದಿದೆ. 50 ಕಿ.ಮೀ ಬಾಕಿ ಇದ್ದು ಆ.11ರಂದು ಸಂಜೆ ಕಡೂರು ಪಟ್ಟಣಕ್ಕೆ ಸಮೀಪದ ಮಲ್ಲೇಶ್ವರ ಗ್ರಾಮದಲ್ಲಿ ವಾಸ್ತವ್ಯ ಮಾಡಿ ಆ.12ರಂದು ಮಧ್ಯಾಹ್ನ 12.30ಕ್ಕೆ ಕಡೂರು ಎಂಆರ್‌ಎಂ ರಂಗಮಂದಿರದಲ್ಲಿ ಸಮಾರೋಪ ನಡೆಯಲಿದೆ ಎಂದರು.

ಸಮಾರೋಪ ಕಾರ್ಯಕ್ರಮವನ್ನು ಮಾಜಿ ಪ್ರಧಾನಿಗಳು ಹಾಗೂ ಸಂಸದರಾದ ಹೆಚ್.ಡಿ. ದೇವೇಗೌಡರು, ಶತಾಯುಷಿ ಸ್ವಾತಂತ್ರ ಹೋರಾಟಗಾರ ಹೆಚ್.ಎಸ್. ದೊರೆಸ್ವಾಮಿ, ಮಾಜಿ ಲೋಕಾಯುಕ್ತ ಸಂತೋಷ್‌ಹೆಗ್ಗಡೆ ಐತಿಹಾಸಿಕ ಸಮಾರಂಭಕ್ಕೆ ಸಾಕ್ಷಿಯಾಗಲಿದ್ದಾರೆ ಎಂದು ಹೇಳಿದರು
 
ಈ ಸಂದರ್ಭ ಜೆಡಿಎಸ್ ತಾಲೂಕು ಅಧ್ಯಕ್ಷ ಕೋಡಿಹಳ್ಳಿ ಮಹೇಶ್ವರಪ್ಪ ಸೇರಿದಂತೆ ಗ್ರಾಮದ ಮುಖಂಡರು ಉಪಸ್ತಿತರಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X