ಕುಂದಾಪುರ: ನ್ಯಾಕ್ ತಂಡ ಭೇಟಿ
ಕುಂದಾಪುರ, ಆ.10: ರಾಷ್ಟ್ರೀಯ ಮೌಲ್ಯಾಂಕನ ಸಂಸ್ಥೆಯ ಪ್ರತಿನಿಧಿಗಳು ಆ.18 ಮತ್ತು 19ರಂದು ಕುಂದಾಪುರದ ಭಂಡಾರ್‌ಕಾರ್ಸ್ ಕಾಲೇಜಿಗೆ ಭೇಟಿ ನೀಡಲಿದ್ದಾರೆ. ಈ ಸಂದರ್ಭದಲ್ಲಿ ಕಾಲೇಜಿನ ಶೈಕ್ಷಣಿಕ ಹಾಗೂ ಇನ್ನಿತರ ಚಟುವಟಿಕೆಗಳ ಕುರಿತು ಪರಾಮರ್ಶೆ ನಡೆಸಿ ರಾಷ್ಟ್ರೀಯ ಮೌಲ್ಯಾಂಕನ ಸಂಸ್ಥೆಗೆ ವರದಿ ಸಲ್ಲಿಸಲಿದ್ದಾರೆ.
ಈ ಸಂದರ್ಭದಲ್ಲಿ ಆ.18ರ ಸಂಜೆ 4:00 ಗಂಟೆಗೆ ನ್ಯಾಕ್ ತಂಡದ ಸದಸ್ಯರು, ಕಾಲೇಜು ವಿದ್ಯಾರ್ಥಿಗಳ ಹೆತ್ತವರು, ಪೋಷಕರು ಹಾಗೂ ಹಳೆ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಲಿದ್ದು, ಇದರಲ್ಲಿ ಸಂಬಂಧಪಟ್ಟ ಎಲ್ಲರೂ ಪಾಲ್ಗೊಳ್ಳುವಂತೆ ಕಾಲೇಜಿನ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story





