Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮಾನವೀಯ ಧರ್ಮವನ್ನು ಉಳಿಸಿ: ಸಚಿವ...

ಮಾನವೀಯ ಧರ್ಮವನ್ನು ಉಳಿಸಿ: ಸಚಿವ ರಮಾನಾಥರೈ ಕರೆ

ಅರೆಭಾಷೆ ಸಂಸ್ಕೃತಿ, ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪ್ರದಾನ

ವಾರ್ತಾಭಾರತಿವಾರ್ತಾಭಾರತಿ11 Aug 2017 6:47 PM IST
share
ಮಾನವೀಯ ಧರ್ಮವನ್ನು ಉಳಿಸಿ: ಸಚಿವ ರಮಾನಾಥರೈ ಕರೆ

ಮಡಿಕೇರಿ ಆ.11 : ಪ್ರಸ್ತುತ ಸಮಾಜದಲ್ಲಿ ಯಾವುದೋ ಒಂದು ಜಾತಿ, ಭಾಷೆ ಮತ್ತು ಧರ್ಮದೆಡೆಗಿನ ಪ್ರೀತಿಯನ್ನಷ್ಟೆ ಕಾಣುತ್ತಿದ್ದು, ಮನುಷ್ಯ ಮನುಷ್ಯರ ನಡುವಿನ ಪ್ರೀತಿ ವಿಶ್ವಾಸಗಳು ಕ್ಷೀಣಿಸುತ್ತಿದೆ ಎಂದು ಬೇಸರ ವ್ಯಕ್ತಪಡಿಸಿರುವ ಅರಣ್ಯ ಪರಿಸರ ಮತ್ತು ಜೀವಿಶಾಸ್ತ್ರ ಖಾತೆಯ ಸಚಿವರಾದ ರಮಾನಾಥ ರೈ, ಎಲ್ಲವನ್ನೂ ಮೀರಿದ ಮಾನವೀಯ ಧರ್ಮದ ಮೂಲಕ ಸಂಬಂಧಗಳನ್ನು ಗಟ್ಟಿಗೊಳಿಸುವ ಕಾರ್ಯವಾಗಬೇಕು ಎಂದು ಕರೆ ನೀಡಿದ್ದಾರೆ.
 
ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ನಗರದ ಕೊಡಗು ಗೌಡ ಸಮಾಜದಲ್ಲಿ ನಡೆದ 2016 ಮತ್ತು 2017ನೇ ಸಾಲಿನ ಗೌರವ ಪ್ರಶಸ್ತಿಗಳನ್ನು ಆರು ಮಂದಿ ಗಣ್ಯರಿಗೆ ಪ್ರದಾನ ಮಾಡಿ ಅವರು ಮಾತನಾಡಿದರು.

ಬಹುಭಾಷೆ, ಸಂಸ್ಕೃತಿ, ಜಾತಿ, ಧರ್ಮಗಳನ್ನು ಹೊಂದಿರುವ ಭಾರತಕ್ಕೆ ಹೋಲಿಕೆ ಮಾಡುವ ಮತ್ತೊಂದು ದೇಶವಿದ್ದರೆ ಅದು ಭಾರತ ಮಾತ್ರವೆಂದು ಹೇಳಿದರು. ಬಹುಭಾಷಾ ಸಂಸ್ಕೃತಿಯ ಈ ನಾಡಿನಲ್ಲಿ ಭಾಷೆಯ ಬಳಕೆ ಇಲ್ಲದೆ ಹಲವಾರು ಭಾಷೆಗಳು ನಶಿಸಿಹೋಗಿವೆ. ಭಾಷೆ, ಅದರಲ್ಲಿನ ಜಾನಪದ ಸಂಸ್ಕೃತಿ ಮತ್ತು ಸಾಹಿತ್ಯವನ್ನು ಸಂರಕ್ಷಿಸುವ ಅಗತ್ಯವಿದೆ ಎಂದು ಹೇಳಿದರು. ಹಿಂದೆ ನಮ್ಮ ಮಾತೃ ಭಾಷೆಯನ್ನೆ ಉಪೇಕ್ಷಿಸಲಾಗುತ್ತಿತ್ತು. ಕ್ರಮೇಣ ಭಾಷಾ ಸಂಸ್ಕೃತಿಯ ಉಳಿವಿನ ಪ್ರಯತ್ನಗಳ ಫಲ ಸ್ವರೂಪವಾಗಿ ಅಕಾಡೆಮಿಗಳು ರಚನೆಯಾದವು. ಇದರಿಂದ ವಿವಿಧ ಭಾಷೆಗಳಲ್ಲಿ ಸಾಕಷ್ಟು ಸಾಹಿತ್ಯ ಕೃತಿಗಳು ಹೊರ ಬರಲು ಸಾಧ್ಯವಾಗಿದೆಯೆಂದು ರಮಾನಾಥ ರೈ ಮೆಚ್ಚುಗೆ ವ್ಯಕ್ತಪಡಿಸಿದರು.
 
ಶಾಸಕ ಅಪ್ಪಚ್ಚು ರಂಜನ್ ಅವರು ಅಕಾಡೆಮಿ ಹೊರ ತಂದಿರುವ 5 ಪುಸ್ತಕಗಳನ್ನು ಬಿಡುಗಡೆಗೊಳಿಸಿ ಮಾತನಾಡಿ, ಅರೆಭಾಷಾ ಅಕಾಡೆಮಿ ಕಳೆದ ಮೂರು ವರ್ಷಗಳ ಅವಧಿಯಲ್ಲಿ 86 ಕಾರ್ಯಕ್ರಗಳನ್ನು ನಡೆಸಿರುವುದು ಶ್ಲಾಘನೀಯವೆಂದರು. ಅರಣ್ಯ ಸಚಿವ ರಮಾನಾಥ ರೈ ಅವರನ್ನು ಅಕಾಡೆಮಿ ಅಧ್ಯಕ್ಷ ಕೊಲ್ಯದ ಗಿರೀಶ್ ಅವರು ಸನ್ಮಾನಿಸುವ ಮೂಲಕ ಗೌರವ ಅರ್ಪಿಸಿದರು.

ಸಮಾರಂಭದ ಅಧ್ಯಕ್ಷತೆಯನ್ನು ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಕೊಲ್ಯದ ಗಿರೀಶ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿವೃತ್ತ ಅಧಿಕಾರಿ ಎಸ್.ಐ . ಭಾವಿ ಕಟ್ಟಿ, ಕರ್ನಾಟಕ ರಾಜ್ಯ ರೇಷ್ಮೆ ಮಾರಾಟ ಮಂಡಳಿ ಅಧ್ಯಕ್ಷರಾದ ಟಿ.ಪಿ. ರಮೇಶ್, ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮದ ಉಪಾಧ್ಯಕ್ಷರಾದ ಮಾಂಗೇರ ಪದ್ಮಿನಿ ಪೊನ್ನಪ್ಪ, ಕೊಡಗು ಗೌಡ ಸಮಾಜಗಳ ಒಕ್ಕೂಟದ ಅಧ್ಯಕ್ಷರಾದ ಸೂರ್ತಲೆ ಸೋಮಣ್ಣ, ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷರಾದ ಲೋಕೆೇಶ್ ಸಾಗರ್, ಹಿರಿಯ ಪತ್ರಿಕೋದ್ಯಮಿ ಜಿ. ರಾಜೇಂದ್ರ, ಕೊಡಗು ಜಿಲ್ಲಾ ಪತ್ರಕರ್ತರ ಸಂಘ ಮತ್ತು ಕೊಡಗು ಪ್ರೆಸ್ ಕ್ಲಬ್ ಅಧ್ಯಕ್ಷರಾದ ಅಜ್ಜಮಾಡ ರಮೇಶ್ ಕುಟ್ಟಪ್ಪ, ಕಾರ್ಯಕ್ರಮದ ಸಮಚಾಲಕರಾದ ಮಂದ್ರೀರ ಮೋಹನ್ ದಾಸ್ ಉಪಸ್ಥಿತರಿದ್ದರು.

ಕಡ್ಲೇರ ತುಳಸಿ ಮೋಹನ್ ಪ್ರಾರ್ಥಿಸಿ, ರಿಜಿಸ್ಟ್ರಾರ್ ಉಮರಬ್ಬ ಸ್ವಾಗತಿಸಿ, ಡಾ ಕೋರನ ಸರಸ್ವತಿ ಪ್ರಕಾಶ್ ಮತ್ತು ಸಂಗೀತ ರವಿರಾಜ್ ಕಾರ್ಯಕ್ರಮ ನಿರೂಪಿಸಿದರು. 

ಗೌರವ ಪ್ರಶಸ್ತಿ ಪ್ರದಾನ

ಮಡಿಕೇರಿ: ಕರ್ನಾಟಕ ಅರೆಭಾಷೆ ಸಂಸ್ಕ್ರತಿ ಮತ್ತು ಸಾಹಿತ್ಯ ಅಕಾಡೆಮಿಯಿಂದ 2017 ಮತ್ತು 17ನೇ ಸಾಲಿಗೆ ಸಂಬಂಧಿಸಿದಂತೆ ವಿವಿಧ ಕ್ಷೇತ್ರಗಳಲ್ಲಿನ ಆರು ಮಂದಿ ಸಾಧಕರಿಗೆ ಗೌರವ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಯಿತು.

ಗೌರವ ಪ್ರಶಸ್ತಿಗಳನ್ನು ಡಾ ಪುರುಷೋತ್ತಮ ಬಿಳಿಮಲೆ, ಕುಲ್ಲಚನ ಕಾರ್ಯಪ್ಪ, ಎಂ.ಜಿ. ಕಾವೇರಮ್ಮ, ಅಮ್ಮಾಜಿರ ಪೊನ್ನಪ್ಪ , ಕೇಪು ಅಜಿಲ ಮತ್ತು ಪಟ್ಟಡ ಪ್ರಭಾಕರ್ ಪಡೆದುಕೊಂಡರು. ಸಮಾರಂಭದಲ್ಲಿ ಅಕಾಡೆಮಿಯಿಂದ ಹೊರತರಲಾಗಿರುವ ಅರೆಭಾಷೆ ಮತ್ತು ಸಂಸ್ಕೃತಿಯನ್ನು ಪರಿಚಯಿಸುವ ಸಂಸ್ಕೃತಿ ಸಂಪತ್ತು, ಅರೆಭಾಷೆ ಸಂಪ್ರದಾಯದ ಅಡುಗೆಯ ಕುರಿತ ರುಚಿ, ಹೊದ್ದೆಟ್ಟಿ ಭವಾನಿ ಶಂಕರ್ ಅವರ ಕವನ ಸಂಕಲನ ಅನುಭವ ಧಾರೆ, ಬೈತಡ್ಕ ಜಾನಕಿ ಬೆಳ್ಳಿಯಪ್ಪ ರಚಿಸಿರುವ ನಾಟಕ ಸಂಕಲನ ಬೆಳ್ಳಿ ಚುಕ್ಕೆಗಮತ್ತು ಅಕಾಡೆಮಿಯ ಪತ್ರಿಕೆ ಹಿಂಗಾರವನ್ನು ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಬಿಡುಗಡೆ ಮಾಡಿದರು.

ಅಕಾಡೆಮಿ ಅಧ್ಯಕ್ಷ ಸ್ಥಾನ ದಕ್ಷಿಣ ಕನ್ನಡಕ್ಕೆ ನೀಡಿ 

ಮಡಿಕೇರಿ: ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಅಧಿಕಾರದ ಅವಧಿ ಪೂರ್ಣಗೊಂಡಿದ್ದು, ಮುಂದಿನ ಅವಧಿಯ ಅಧ್ಯಕ್ಷ ಸ್ಥಾನವನ್ನು ದಕ್ಷಿಣ ಕನ್ನಡಕ್ಕೆ ನೀಡುವಂತೆ ಅರಣ್ಯ ಸಚಿವ ರಮಾನಾಥ ರೈ ಮನವಿ ಮಾಡಿದರು.
 ಸಚಿವರು ತಮ್ಮ ಭಾಷಣದಲ್ಲಿ ಅರೆಭಾಷಾ ಅಕಾಡೆಮಿ ಅಧ್ಯಕ್ಷ ಸ್ಥಾನವನ್ನು ಪ್ರಸ್ತುತ ಕೊಡಗಿನ ಕೊಲ್ಯ ಗಿರೀಶ್ ಅವರು ನಿರ್ವಹಿಸಿದ್ದು, ಮುಂದಿನ ಅವಧಿಯ ಅವಕಾಶವನ್ನು ದಕ್ಷಿಣ ಕನ್ನಡಕ್ಕೆ ನೀಡುವಂತೆ ಕೋರಿದರು.
 
 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X