Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬೇರೆ ರಾಜ್ಯಗಳಲ್ಲೂ ಕನ್ನಡ ಚಲನಚಿತ್ರಗಳ...

ಬೇರೆ ರಾಜ್ಯಗಳಲ್ಲೂ ಕನ್ನಡ ಚಲನಚಿತ್ರಗಳ ಪ್ರದರ್ಶನಕ್ಕೆ ಸಹಕಾರ: ಕೆ.ಜೆ.ಜಾರ್ಜ್

‘ಮಲಯಾಳಂ ಚಲನಚಿತ್ರೋತ್ಸವ’

ವಾರ್ತಾಭಾರತಿವಾರ್ತಾಭಾರತಿ11 Aug 2017 7:59 PM IST
share
ಬೇರೆ ರಾಜ್ಯಗಳಲ್ಲೂ ಕನ್ನಡ ಚಲನಚಿತ್ರಗಳ ಪ್ರದರ್ಶನಕ್ಕೆ ಸಹಕಾರ: ಕೆ.ಜೆ.ಜಾರ್ಜ್

ಬೆಂಗಳೂರು, ಆ.11: ಕನ್ನಡ ಚಲನಚಿತ್ರಗಳನ್ನು ವಿವಿಧ ರಾಜ್ಯಗಳಲ್ಲಿ ಪ್ರದರ್ಶಿ ಸಲು ರಾಜ್ಯ ಚಲನಚಿತ್ರ ಅಕಾಡೆಮಿಗೆ ರಾಜ್ಯ ಸರಕಾರ ಸಂಪೂರ್ಣ ಸಹಕಾರವನ್ನು ನೀಡುತ್ತಿದೆ ಎಂದು ಬೆಂಗಳೂರು ಅಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್ ತಿಳಿಸಿದರು.

ಶುಕ್ರವಾರ ನಗರದ ಚಾಮುಂಡೇಶ್ವರಿ ಸ್ಟುಡಿಯೋದಲ್ಲಿ ರಾಜ್ಯ ಚಲನಚಿತ್ರ ಅಕಾಡೆಮಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಕೇರಳ ಚಲನಚಿತ್ರ ಅಕಾಡೆಮಿಯ ಸಹಯೋಗದಲ್ಲಿ ಆಯೋಜಿಸಿರುವ ‘ಮಲಯಾಳಂ ಚಲನಚಿತ್ರೋತ್ಸವ’ವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕನ್ನಡ ಚಿತ್ರೋದ್ಯಮದ ಬೆಳವಣಿಗೆಗೆ ರಾಜ್ಯ ಸರಕಾರ ಸಾಕಷ್ಟು ಪ್ರೋತ್ಸಾಹ ನೀಡಿದೆ. ಭಾಷೆಗಳಲ್ಲಿ ವೈವಿಧ್ಯತೆಗಳಿದ್ದರೂ, ಚಲನಚಿತ್ರಗಳ ಭಾಷೆ ಒಂದೇ. ಚಿತ್ರಗಳಿಗೆ ಸಬ್‌ಟೈಟಲ್ಸ್ ನೀಡುವುದರಿಂದ ಎಲ್ಲ ಭಾಷೆಯ ಚಿತ್ರಗಳನ್ನು ವೀಕ್ಷಿಸಿ ಅರ್ಥೈಸಿಕೊಳ್ಳಲು ಸಾಧ್ಯವಾಗಿದೆ ಎಂದು ಅವರು ಹೇಳಿದರು.
ಚಲನಚಿತ್ರಗಳ ಮೂಲಕ ಸಮಾಜದಲ್ಲಿ ಸಾಕಷ್ಟು ಸುಧಾರಣೆಗಳಾಗಬೇಕು. ಕೇರಳ ಚಿತ್ರೋದ್ಯಮ ಹೃದಯಸ್ಪರ್ಶಿ ಚಿತ್ರಗಳನ್ನು ನೀಡಿದೆ. ಕನ್ನಡ ಚಿತ್ರೋದ್ಯಮದ ಅಭಿವೃದ್ಧಿಗೆ ವರನಟ ಡಾ.ರಾಜ್‌ಕುಮಾರ್ ನೀಡಿದ ಕೊಡುಗೆಯನ್ನು ಜಾರ್ಜ್ ಇದೇ ಸಂದರ್ಭದಲ್ಲಿ ಸ್ಮರಿಸಿಕೊಂಡರು.

ಚಿತ್ರೋತ್ಸವದ ಕುರಿತು ಮಾತನಾಡಿದ ಚಲನಚಿತ್ರ ನಿರ್ದೇಶಕರ ಪಿ.ಶೇಷಾದ್ರಿ, ರಾಜ್ಯ ಚಲನಚಿತ್ರ ಅಕಾಡೆಮಿ ಏರ್ಪಡಿಸಿರುವ ಕನ್ನಡ-ಮಲಯಾಳಂ ಚಲನಚಿತ್ರೋತ್ಸವ ಎರಡು ಸಂಸ್ಕೃತಿಗಳ ವಿನಿಮಯಕ್ಕೆ ವೇದಿಕೆಯಾಗಿದೆ ಎಂದರು.
 
1980ರಲ್ಲಿ ಮಲಯಾಳಂ ಚಿತ್ರ ನಿರ್ದೇಶಕ ಜಾನ್ ಅಬ್ರಹಾಂ ಅವರ ಚಿತ್ರ ನಿರ್ಮಿಸಲು ಯಾವುದೇ ನಿರ್ಮಾಪಕ ಮುಂದೆ ಬರದಿದ್ದಾಗ, ತಮ್ಮ ಊರಿನ ಜನರಿಂದ ಹಣ ಪಡೆದು ಚಿತ್ರ ನಿರ್ಮಿಸಿದರು. ಮಲಯಾಳಂ ಚಿತ್ರ ನಿರ್ದೇಶಕ ಜಯರಾಜ್, ತಮ್ಮ ಕರಣಂ ಚಿತ್ರವನ್ನು ಕೇವಲ 9 ಲಕ್ಷರೂ.ಗಳ ವೆಚ್ಚದಲ್ಲಿ ನಿರ್ಮಿಸಿದ್ದರಿಂದ ಪ್ರೇರಣೆ ಪಡೆದು ತಾವೂ ತಮ್ಮ ಮೊತ್ತ ಮೊದಲ ಚಿತ್ರವನ್ನು 15 ಲಕ್ಷ ರೂ.ಗಳ ವೆಚ್ಚದಲ್ಲಿ ನಿರ್ಮಿಸಿದ್ದನ್ನು ಪಿ.ಶೇಷಾದ್ರಿ ಸ್ಮರಿಸಿಕೊಂಡರು. ಕೇರಳ ಚಲನಚಿತ್ರಗಳಿಗೆ ಯಾವುದೆ ಸಹಾಯಧನವನ್ನು ಸರಕಾರದಿಂದ ನೀಡಲಾಗುತ್ತಿಲ್ಲ. ಆದರೂ, ಅವರ ಚಿತ್ರಗಳ ಗುಣಮಟ್ಟದಲ್ಲಿ ಯಾವುದೇ ರಾಜಿಯಾಗಿಲ್ಲ ಎಂದು ಶೇಷಾದ್ರಿ ಹೇಳಿದರು.

ವಾರ್ತಾ ಇಲಾಖೆ ನಿರ್ದೇಶಕ ಡಾ.ಪಿ.ಎಸ್.ಹರ್ಷಾ ಮಾತನಾಡಿ, ಕಲಾ ಮಾಧ್ಯಮಗಳು ಸಮಾಜ ರೂಪಿಸುವ ಮಹತ್ತರ ಪಾತ್ರ ನಿರ್ವಹಿಸುತ್ತವೆ. ಚಲನಚಿತ್ರೋದ್ಯಮದ ಬೆಳವಣಿಗೆಗೆ ಪ್ರೋತ್ಸಾಹ ನೀಡುವ ರಾಜ್ಯಗಳಲ್ಲಿ ಕರ್ನಾಟಕ ಸರಕಾರ ಮುಂಚೂಣಿಯಲ್ಲಿದೆ ಎಂದರು.
 
ಮಲಯಾಳಂ ಚಿತ್ರ ನಿರ್ದೇಶಕಿ ವಿದು ವಿನ್ಸೆಂಟ್ ಮಾತನಾಡಿ, ಭಾಷೆ, ಜಾತಿ ಮುಂತಾದ ಎಲ್ಲ ಅಡೆತಡೆಗಳನ್ನು ಕಲೆ ತೊಡೆದುಹಾಕುತ್ತದೆ. ಎಲ್ಲ ಸಂಸ್ಕೃತಿಗಳನ್ನು ಸಿನಿಮಾ ಮಾಧ್ಯಮ ಬೆಸೆಯುತ್ತದೆ. ತಮ್ಮ ಚಿತ್ರ ‘ಮ್ಯಾನ್‌ಹೋಲ್’ನಲ್ಲಿ ಸಫಾಯಿ ಕರ್ಮಚಾರಿಗಳ ಬದುಕಿನ ಚಿತ್ರಣವನ್ನು ಕಟ್ಟಿಕೊಡಲು ಪ್ರಯತ್ನ ಮಾಡಲಾಗಿದೆ. ತಿರುವನಂತಪುರದಲ್ಲಿ ಕನ್ನಡ ಚಿತ್ರಗಳನ್ನು ವೀಕ್ಷಿಸಲು ಉತ್ಸುಕರಾಗಿರುವುದಾಗಿ ತಿಳಿಸಿದರು.

ರಾಜ್ಯಚಲನಚಿತ್ರ ಅಕಾಡೆಮಿ ಅಧ್ಯಕ್ಷ ರಾಜೇಂದ್ರಸಿಂಗ್‌ಬಾಬು ಪ್ರಾಸ್ತಾವಿಕವಾಗಿ ಮಾತನಾಡಿ, ಪರಸ್ಪರ ಒಡಂಬಡಿಕೆಯ ಆಧಾರದ ಮೇಲೆ ಮುಂಬೈ ಹಾಗೂ ಹೈದರಾಬಾದ್‌ನಲ್ಲಿಯೂ ಚಲನಚಿತ್ರೋತ್ಸವಗಳನ್ನು ಅಕಾಡೆಮಿ ಹಮ್ಮಿಕೊಂಡಿದೆ. ಚೆನ್ನೈ, ಕೋಲ್ಕತ್ತಾ ಹಾಗೂ ದಿಲ್ಲಿಯಲ್ಲಿ ನಡೆದ ಕನ್ನಡ ಚಿತ್ರೋತ್ಸವಗಳು ಅತ್ಯಂತ ಯಶಸ್ವಿಯಾಗಿದೆ ಎಂದರು.

ಕಾರ್ಯಕ್ರಮದಲ್ಲಿ ರಾಜ್ಯ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸಾ.ರಾ. ಗೋವಿಂದು, ಮಲಯಾಳಂ ಚಿತ್ರ ನಿರ್ದೇಶಕ ದಿಲೀಶ್ ಪೋಥನ್, ನಿರ್ದೇಶಕಿ ವಿದು ವಿನ್ಸೆಂಟ್, ನಟ ವಿನಯ್ ಫೋರ್ಟ್‌ರನ್ನು ಸನ್ಮಾನಿಸಲಾಯಿತು. ನಿರ್ಮಾಪಕ ರಾಕ್‌ಲೈನ್ ವೆಂಕಟೇಶ್ ಹಾಗೂ ಕೇರಳ ಚಲನಚಿತ್ರ ಅಕಾಡೆಮಿ ಉಪನಿರ್ದೇಶಕ ಎಚ್.ಶಾಜಿ, ಅಧ್ಯಕ್ಷ ಮಹೇಶ್ ಬಿ.ಪಂಚು, ರಾಜ್ಯ ಚಲನಚಿತ್ರ ಅಕಾಡೆಮಿ ರಿಜಿಸ್ಟ್ರಾರ್ ಎಚ್.ಬಿ. ದಿನೇಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X