ಬಿಜೆಪಿ ಸೇರುವ ಪ್ರಸ್ತಾಪ ನನ್ನ ಮುಂದೆ ಇಲ್ಲ: ಸಚಿವ ಪ್ರಮೋದ್ ಮಧ್ವರಾಜ್
.jpg)
ಬೆಂಗಳೂರು, ಜು.11: ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿ ಪಕ್ಷ ಸೇರುವ ಪ್ರಸ್ತಾಪ ನನ್ನ ಮುಂದೆ ಇಲ್ಲ ಎಂದು ಮೀನುಗಾರಿಕೆ ಹಾಗೂ ಯುವಸಬಲೀಕರಣ ಮತ್ತು ಕ್ರೀಡಾ ಸಚಿವ ಪ್ರಮೋದ್ ಮಧ್ವರಾಜ್ ಸ್ಪಷ್ಟಪಡಿದ್ದಾರೆ.
ಸಚಿವ ಪ್ರಮೋದ್ ಮಧ್ವರಾಜ್ ಕಾಂಗ್ರೆಸ್ ತೊರೆದು ಬಿಜೆಪಿ ಸೇರಲಿದ್ದಾರೆ ಎಂದು ಕೆಲ ಮಾಧ್ಯಮಗಳ ವರದಿಯನ್ನು ಸಾರಸಾಗಟಾಗಿ ತಳ್ಳಿ ಹಾಕಿರುವ ಸಚಿವರು, ಇದು ಸತ್ಯಕ್ಕೆ ದೂರ. ಈ ವರದಿಗಳು ದುರುದ್ದೇಶಪೂರ್ವಕವಾಗಿವೆ ಎಂದು ಹೇಳಿದ್ದಾರೆ. ಕಾಂಗ್ರೆಸ್ ಪಕ್ಷದ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಮೇಲಿರುವ ವಿಶ್ವಾಸ ಮತ್ತು ನಿಷ್ಠೆ ಅಚಲವಾಗಿದೆ. ಪಕ್ಷ ಕೊಟ್ಟಿರುವ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ನಿಭಾಯಿಸುತ್ತಿದ್ದೇನೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story





